ಇವಿ ವಾಹನಗಳ ಬೆಂಕಿಗೆ ಕಾರಣವೇನು? ತಜ್ಞರ ಸಮಿತಿಯಿಂದ ವರದಿ
ಮೂಲಭೂತ ಸುರಕ್ಷತಾ ವ್ಯವಸ್ಥೆಯ ಕೊರತೆ ಬಗ್ಗೆ ಉಲ್ಲೇಖ
Team Udayavani, Jun 30, 2022, 7:05 AM IST
ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳು ತನ್ನಿಂತಾನೇ ಬೆಂಕಿ ಹತ್ತಿಕೊಂಡು ಉರಿದಂತಹ ಸರಣಿ ಪ್ರಕರಣಗಳು ಇತ್ತೀಚೆಗೆ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಇಂಥ ದುರ್ಘಟನೆಗಳ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿತ್ತು. ಸಮಿತಿಯು ಕಂಡುಕೊಂಡ ಆತಂಕಕಾರಿ ಅಂಶಗಳು ಇಲ್ಲಿವೆ.
ತಜ್ಞರ ಸಮಿತಿ ಕಂಡುಕೊಂಡಿದ್ದೇನು?
– ಅತಿಯಾಗಿ ಬಿಸಿಯಾಗುವಂಥ ಬ್ಯಾಟರಿಗಳಿಗೆ ಶಕ್ತಿಯನ್ನು ಹೊರಸೂಸಲು “ವಾತಾಯನ’ ವ್ಯವಸ್ಥೆ ಇಲ್ಲ
– ಬ್ಯಾಟರಿ ನಿರ್ವಹಣಾ ವ್ಯವಸ್ಥೆಯಲ್ಲಿ ಗಂಭೀರ ಲೋಪಗಳಿವೆ
– ಕೆಲವು ವಾಹನಗಳಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಬ್ಯಾಟರಿಗಳನ್ನು ಬಳಸಲಾಗಿದೆ
– ಮೂಲಭೂತ ಸುರಕ್ಷತಾ ವ್ಯವಸ್ಥೆಯನ್ನೂ ಕಂಪನಿಗಳು ಕಲ್ಪಿಸಿಲ್ಲ
– ಸುರಕ್ಷತೆಗೆ ಆದ್ಯತೆ ನೀಡುವ ಬದಲು ಶಾರ್ಟ್‌ಕಟ್ ರೂಟ್‌ಗಳನ್ನು ಬಳಸಲಾಗಿದೆ
ವಾತಾಯನ ವ್ಯವಸ್ಥೆ ಇದ್ದರೆ…
ಬ್ಯಾಟರಿಗಳು ಅತಿಯಾಗಿ ಬಿಸಿಯಾದಾಗ ಒಳಗೆ ಅನಿಲರೂಪದ ಒತ್ತಡ ಸೃಷ್ಟಿಯಾಗುತ್ತದೆ. ವಾಹನವು ಸಂಚರಿಸುವ ವೇಳೆ ಆ ಒತ್ತಡವು ಅಲ್ಲೇ ಇದ್ದು, ಅದು ತೀವ್ರಗೊಂಡಾಗ ಬ್ಯಾಟರಿ ಸ್ಫೋಟಗೊಂಡು ಬೆಂಕಿ ಹತ್ತಿಕೊಳ್ಳುತ್ತದೆ. ಆದರೆ, ಇಲ್ಲಿ ವಾತಾಯನ ವ್ಯವಸ್ಥೆಯಿದ್ದರೆ, ಅನಿಲದ ಒತ್ತಡವು ಆ ವ್ಯವಸ್ಥೆಯ ಮೂಲಕ ಹೊರಹೋಗುತ್ತದೆ. ಹಾಗಾಗಿ ಅಪಾಯ ಉಂಟಾಗುವುದಿಲ್ಲ. ಆದರೆ, ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳ ಬ್ಯಾಟರಿಗಳಲ್ಲಿ ವಾತಾಯನ ವ್ಯವಸ್ಥೆ ಇಲ್ಲದಿರುವುದೇ ಅವಘಡಗಳಿಗೆ ಕಾರಣ ಎಂದು ಸಮಿತಿ ಹೇಳಿದೆ.
ಸರ್ಕಾರದ ಸೂಚನೆ
– ಸಮಿತಿ ನೀಡಿರುವ ಸಲಹೆಗಳನ್ನು ಸರ್ಕಾರವು ಆಯಾ ಕಂಪನಿಗಳಿಗೆ ರವಾನೆ. ಸೂಕ್ತ ಕ್ರಮಗಳಿಗೆ ಸೂಚನೆ.
– ನಿಮ್ಮ ವಿರುದ್ಧ ಏಕೆ ನಾವು ಕಾನೂನು ಕ್ರಮ ಕೈಗೊಳ್ಳಬಾರದು ಎಂದೂ ಪ್ರಶ್ನಿಸಿದೆ
ಆಗಸ್ಟ್‌ನಲ್ಲಿ ಮಾರ್ಗಸೂಚಿ
ಸಾರಿಗೆ ಸಚಿವಾಲಯವು ವಿದ್ಯುತ್‌ಚಾಲಿತ ವಾಹನ ತಯಾರಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಬಿಗಿಗೊಳಿಸುತ್ತಿದೆ. ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಿದೆ. ಸಮಿತಿಯು ಆಗಸ್ಟ್‌ನೊಳಗಾಗಿ ಅಂತಿಮ ಮಾರ್ಗಸೂಚಿಗಳನ್ನು ಹೊರಡಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.