ಮುಂದುವರಿದ ನಾಮಫಲಕ ಗೊಂದಲ
ಪುರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಸದಸ್ಯರ ನಿರ್ಧಾರ
Team Udayavani, Jun 29, 2022, 5:49 PM IST
ಭಟ್ಕಳ: ಭಟ್ಕಳ ಪುರಸಭೆಗೆ ನಾಮಫಲಕ ಅಳವಡಿಕೆಗೆ ಸಂಬಂಧಪಟ್ಟಂತೆ ಉಂಟಾಗಿರುವ ಗೊಂದಲ ಮುಂದುವರಿದಿದ್ದು ಮಂಗಳವಾರ ಸಂಜೆ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ತಹಶೀಲ್ದಾರ್ ಡಾ| ಸುಮಂತ್ ಬಿ.ಇ., ಭೇಟಿ ನೀಡಿ ಪುರಸಭಾ ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯಾಧಿಕಾರಿಗಳೊಂದಿಗೆ ಕೆಲಕಾಲ ಚರ್ಚಿಸಿದರು.
ಪುರಸಭಾ ಅಧ್ಯಕ್ಷರು ಹಾಗೂ ಸದಸ್ಯರು ಪುರಸಭೆ ನಾಮಫಲಕದಲ್ಲಿ ಉರ್ದು ಭಾಷೆ ಕಳೆದ ಹಲವಾರು ವರ್ಷಗಳಿಂದ ಹಾಕಿಕೊಂಡು ಬರಲಾಗಿದೆ. ಉರ್ದು ಬಾಷೆಯಲ್ಲಿ ನಾಮಫಲಕ ಬರೆಸುವಂತೆ ಈ ಹಿಂದೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸು ಮಾಡಲಾಗಿದ್ದು ಅದರಂತೆ ಬರೆಸಲಾಗಿದೆ. ಸರಕಾರದ ನಿಯಮಾವಳಿಯಂತೆ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕನ್ನಡ ಪರ ಸಂಘಟನೆಗಳು ವಿವಾದ ಉಂಟು ಮಾಡಿದ್ದರಿಂದ ಇನ್ನೊಮ್ಮೆ ಸಾಮಾನ್ಯ ಸಭೆ ಕರೆದು ನಡೆದುಕೊಳ್ಳಲು ಪುರಸಭಾ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಹೇಳಿದರೆನ್ನಲಾಗಿದೆ. ಒಂದಾನುವೇಳೆ ನಿಯಮಾವಳಿಯಂತೆ ಪುರಸಭಾ ಆಡಳಿತ ಮಂಡಳಿ ನಡೆದುಕೊಳ್ಳದೇ ಇದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಜರುಗಿಸಲು ಬರುವುದು ಎಂತಲೂ ಕೂಡಾ ಒಪ್ಪಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಪುರಸಭೆಯಲ್ಲಿ ಅಳವಡಿಸಲಾಗಿರುವ ಕನ್ನಡ, ಇಂಗ್ಲಿಷ್ ಹಾಗೂ ಉರ್ದು ನಾಮಫಲಕ ಹಾಗೆಯೇ ಮುಂದುವರಿಯಲಿದ್ದು ಮುಂದಿನ ಸಾಮಾನ್ಯ ಸಭೆಯ ನಂತರವೇ ನಿರ್ಣಯವಾಗಬೇಕಿದೆ ಎನ್ನಲಾಗಿದೆ.
ಪುರಸಭಾ ನಾಮಫಲಕಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಪುರಸಭಾ ಆಡಳಿತದೊಂದಿಗೆ ಸೂಕ್ತ ಚರ್ಚೆ ನಡೆಸಿದ್ದೇನೆ. ಸಾಮಾನ್ಯ ಸಭೆಯ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಅಲ್ಲಿಯ ತನಕ ಯಥಾ ಸ್ಥಿತಿ ಕಾಪಾಡಲು ಸೂಚನೆ ನೀಡಲಾಗಿದ್ದು ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.