ಕಾರ್ಮಿಕರ ಬದುಕು ಹಸನುಗೊಳಿಸುವ ಪಣ
Team Udayavani, Jun 29, 2022, 6:25 PM IST
ಶಿವಮೊಗ್ಗ: ಕಾರ್ಮಿಕರ ಮತ್ತು ಅವರ ಮಕ್ಕಳಭವಿಷ್ಯ ಉಜ್ವಲಗೊಳಿಸಲು ಇಲಾಖೆಯಲ್ಲಿಅ ಧಿಕಾರಿಗಳ ತಂಡ ಶ್ರಮಿಸುತ್ತಿದೆ. ಕೋವಿಡ್‌ಸಂಕಷ್ಟದ ಸಮಯದಲ್ಲಿ ಕಾರ್ಮಿಕರ ಹಿತ ಕಾಯಲುರಾಜ್ಯದ ಕಾರ್ಮಿಕ ಇಲಾಖೆ ಚಾರಿತ್ರಿಕ ಕೆಲಸಮಾಡಿದೆ ಎಂದು ಕಾರ್ಮಿಕ ಸಚಿವ ಶಿವರಾಮ್‌ಹೆಬ್ಟಾರ್ ಹೇಳಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿ ಆಶ್ರಯದಲ್ಲಿ ನಗರದ ಕುವೆಂಪುರಂಗಮಂದಿರದಲ್ಲಿ ಮಂಗಳವಾರ ನೋಂದಾಯಿತಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರುಹಾಗೂ ಅವರ ಅವಲಂಬಿತರಿಗೆ ಏರ್ಪಡಿಸಲಾಗಿದ್ದಆರೋಗ್ಯ ತಪಾಸಣೆ, ತರಬೇತಿ ಮತ್ತು ಸಂಚಾರಿಆರೋಗ್ಯ ಕ್ಲಿನಿಕ್ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.
ಶಿವಮೊಗ್ಗ ಸಂಸದರ ಅತ್ಯುತ್ಸಾಹದಿಂದ ಜಿಲ್ಲೆಯಲ್ಲಿತ್ವರಿತವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ಕೆಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ಕಾರ್ಮಿಕರಬದುಕನ್ನು ಹಸನು ಮಾಡಲು ಪಣ ತೊಟ್ಟು ಅನೇಕಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.
ಇಂದು ಚಾಲನೆ ನೀಡಲಾದ ಉಚಿತ ಆರೋಗ್ಯತಪಾಸಣೆಯಲ್ಲಿ 21 ರೀತಿಯ ಪರೀಕ್ಷೆಗಳನ್ನುಮಾಡಲಾಗುತ್ತಿದೆ. ಖಾಸಗಿಯಾಗಿ ಪರೀಕ್ಷೆಮಾಡಿಸಿದರೆ ಒಬ್ಬರಿಗೆ ರೂ.12 ಸಾವಿರದವರೆಗೆವೆಚ್ಚ ತಗುಲುತ್ತದೆ. ಇಂತಹ ಪರೀಕ್ಷೆಯನ್ನು ಮೊದಲಹಂತದಲ್ಲಿ ಸುಮಾರು 30 ಸಾವಿರ ಕಾರ್ಮಿಕರಿಗೆಮಾಡಲಾಗುತ್ತಿದೆ. ಕಾರ್ಮಿಕರು ಈ ಕಾರ್ಯಕ್ರಮದಸದುಪಯೋಗ ಪಡೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.