ಕೈಕೋಳ ತೊಡಿಸುವ ಪೊಲೀಸರು ಬಾಡಿ ಕೆಮರಾ ಧರಿಸುವುದು ಕಡ್ಡಾಯ: ಹೈಕೋರ್ಟ್
Team Udayavani, Jun 29, 2022, 11:49 PM IST
ಬೆಂಗಳೂರು: ಯಾವುದೇ ಪ್ರಕ ರಣದ ಆರೋಪಿಗಳನ್ನು ಬಂಧಿಸುವಾಗ ಕಾನೂ ನುಬಾಹಿರವಾಗಿ ಕೈ ಕೋಳ ತೊಡಿಸುವ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಬೇಡಿ ತೊಡಿಸುವ ಪೊಲೀಸರು ಕಡ್ಡಾಯ ವಾಗಿ ಬಾಡಿ ಕೆಮರಾ ಧರಿಸಿರಬೇಕು ಎಂದು ಆದೇಶಿಸಿದೆ.
2 ಲ.ರೂ. ಪರಿಹಾರ
ಅಲ್ಲದೆ, ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕ ಬಾರದು. ಅಗತ್ಯವಿದ್ದರಷ್ಟೇ ಮಾತ್ರ ಕೈಕೋಳ ಹಾಕಲು ಅವಕಾಶವಿದೆ. ಆ ಪ್ರಕ್ರಿಯೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿರುವ ನ್ಯಾಯಾಲಯ, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗೆ ಕಾನೂನು ಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಆತನಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ.
ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಕೈಕೋಳ ಹಾಕಿದ್ದಕ್ಕಾಗಿ ಪರಿಹಾರ ನೀಡುವಂತೆ ಕೋರಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸುಪ್ರಿತ್ ಈಶ್ವರ್ ದಿವಟೆ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ| ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಎಸಿಬಿ ಭ್ರಷ್ಟರ ಕೂಪ; ಭ್ರಷ್ಟಾಚಾರವೇ ಅದರ ದಂಧೆ: ಹೈಕೋರ್ಟ್
ಬೆಂಗಳೂರು: ಭ್ರಷ್ಟಾ ಚಾರ ನಿಗ್ರಹಕ್ಕೆಂದು ರಚಿಸಲಾದ ಎಸಿಬಿ ಇಂದು ಅತಿದೊಡ್ಡ ಭ್ರಷ್ಟರ ಕೂಪವಾಗಿದೆ; ಭ್ರಷ್ಟಾಚಾರವೇ ಅದರ ಧಂದೆಯಾಗಿದೆ ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಲಂಚ ಪ್ರಕರಣದ ಆರೋಪಿ ಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್. ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿತು.
ಪ್ರಾಣಿ ವಧೆ, ಅಕ್ರಮ ಸಾಗಣೆ: ವರದಿ ಸಲ್ಲಿಸಿ
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಪ್ರಾಣಿಗಳ ವಧೆ ಹಾಗೂ ಸಾಗಣೆ ತಡೆಯಲು ಕೈಗೊಂಡ ಕ್ರಮಗಳ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಕಸಾಯಿಖಾನೆಗಳ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ “ಗೋ ಗ್ಯಾನ್ ಫೌಂಡೇಷನ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.