ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?
Team Udayavani, Jun 30, 2022, 8:38 AM IST
ಹೊಸದಿಲ್ಲಿ: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯಾದ ಒಂದು ದಿನದ ನಂತರ, ಪ್ರಕರಣದ ಇಬ್ಬರು ಆರೋಪಿಗಳಲ್ಲಿ ಒಬ್ಬನಾದ ಘೌಸ್ ಮೊಹಮ್ಮದ್ 2014 ರಲ್ಲಿ ಪಾಕಿಸ್ತಾನದ ಕರಾಚಿಗೆ ಹೋಗಿದ್ದ ಮತ್ತು ದಾವತ್-ಎ-ಇಸ್ಲಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ. ಆದರೆ, ಪಾಕಿಸ್ತಾನವು ಈ ವರದಿಯನ್ನು ಬುಧವಾರ ತಿರಸ್ಕರಿಸಿದೆ.
“ಭಾರತೀಯ ಮಾಧ್ಯಮಗಳಲ್ಲಿ ಉದಯಪುರದಲ್ಲಿ ನಡೆದ ಕೊಲೆ ಪ್ರಕರಣದ ತನಿಖೆಗಳನ್ನು ಉಲ್ಲೇಖಿಸಿ, ಆರೋಪಿಗಳು, ಭಾರತೀಯ ಪ್ರಜೆಗಳನ್ನು ಪಾಕಿಸ್ತಾನದ ಸಂಘಟನೆಯೊಂದಿಗೆ ಸಂಪರ್ಕಿಸಲು ಪ್ರಯತ್ನಿಸುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಇಂತಹ ಪ್ರಚೋದನೆಗಳು ಬಿಜೆಪಿ-ಆರ್‌ಎಸ್‌ಎಸ್ ನ ‘ಹಿಂದುತ್ವ’ ಚಾಲಿತ ಭಾರತೀಯ ಆಡಳಿತವು ಪಾಕಿಸ್ತಾನದ ಕಡೆಗೆ ಬೆರಳು ತೋರಿಸುವ ಮೂಲಕ ಅವರ ಆಂತರಿಕ ಸಮಸ್ಯೆಗಳನ್ನು ಬಾಹ್ಯವಾಗಿ ಬಹಿರಂಗಪಡಿಸುವ ಮೂಲಕ ಪಾಕಿಸ್ತಾನವನ್ನು ಕೆಣಕುವ ವಿಶಿಷ್ಟ ಪ್ರಯತ್ನವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಅಸಿಮ್ ಇಫ್ತಿಕರ್ ಅಹ್ಮದ್ ಹೇಳಿದ್ದಾರೆ.
ಇದನ್ನೂ ಓದಿ:ಸಂಘಟನೆಗಳ ಮೇಲೆ ನಿಗಾ: ಉದಯಪುರ ಘಟನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈಅಲರ್ಟ್
ಜೂನ್ 28 ರಂದು ಬಿಜೆಪಿ ಅಧಿಕಾರಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದ ಟೈಲರ್ ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆ ದೇಶವನ್ನು ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳಾದ ಮೊಹಮ್ಮದ್ ರಿಯಾಜ್ ಅಟ್ಟಾರಿ ಮತ್ತು ಘೌಸ್ ಮೊಹಮ್ಮದ್ ಸಿಕ್ಕಿಬಿದ್ದಿದ್ದಾರೆ. ಪಾಕಿಸ್ತಾನದ ದಾವತ್-ಎ-ಇಸ್ಲಾಮಿ ಸಂಘಟನೆಯೊಂದಿಗೆ ಆರೋಪಿಯೊಬ್ಬನ ಸಂಪರ್ಕದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
“ಆರೋಪಿಗಳಲ್ಲಿ ಒಬ್ಬನಾದ ಘೌಸ್ ಮೊಹಮ್ಮದ್ ಕರಾಚಿ ಮೂಲದ ಇಸ್ಲಾಮಿ ಸಂಘಟನೆ ದಾವತ್-ಎ-ಇಸ್ಲಾಮಿಯೊಂದಿಗೆ ಸಂಪರ್ಕ ಹೊಂದಿದ್ದಾನೆ. ಆತ 2014ರಲ್ಲಿ ಕರಾಚಿಗೆ ಭೇಟಿ ನೀಡಿದ್ದ. ಇದುವರೆಗೆ ಇಬ್ಬರು ಪ್ರಮುಖ ಆರೋಪಿಗಳು ಸೇರಿದಂತೆ ಐವರನ್ನು ವಶಕ್ಕೆ ಪಡೆದಿದ್ದೇವೆ” ಎಂದು ರಾಜಸ್ಥಾನ ಡಿಜಿಪಿ ಎಂ.ಎಲ್. ಲಾಥರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.