ನಾಡಪ್ರಭು ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬೇಡಿ; ಗಂಗರುದ್ರಯ್ಯ

ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಈಗ ವಿಶ್ವಕ್ಕೆ ಮಾದರಿ

Team Udayavani, Jun 30, 2022, 12:21 PM IST

ನಾಡಪ್ರಭು ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬೇಡಿ; ಗಂಗರುದ್ರಯ್ಯ

ನೆಲಮಂಗಲ: ಕೆಂಪೇಗೌಡರು ಕೇವಲ ಬೆಂಗಳೂರು, ಕರ್ನಾಟಕಕ್ಕೆ ಮಾತ್ರವಲ್ಲ ಅವರು ದಕ್ಷಿಣ ಭಾರತದ ಸಾಂಸ್ಕೃತಿಕ ನಾಯಕರು. ಅವರನ್ನು ಒಂದು ಜಾತಿ, ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ರಾಜ್ಯ ಒಕ್ಕಲಿಗರ ಜಾಗೃತಿ ಸಂಘದ ಅಧ್ಯಕ್ಷ ಎಂ.ಎಚ್‌. ಗಂಗರುದ್ರಯ್ಯ ತಿಳಿಸಿದರು.

ತಾಲೂಕಿನ ಸೋಂಪುರ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಅಂಗವಾಗಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕೆಂಪೇಗೌಡರು ದಕ್ಷ ಹಾಗೂ ದೂರ ದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳನ್ನು ನಿರ್ಮಾಣ ಮಾಡುವ ಮೂಲಕ ಕೃಷಿ ಅಭಿವೃದ್ಧಿ ಹಾಗೂ ಅಂತರ್ಜಲದ ವೃದ್ಧಿಗೆ ಶ್ರಮಿಸಿದ್ದರು. ಪ್ರಕೃತಿ ಸಮತೋಲನ, ನಿಸರ್ಗ ಸಂರಕ್ಷಣೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು, ಅನೇಕ ಸಾಮಾಜಿಕ ಕಾರ್ಯ ಮಾಡಿದ್ದಾರೆ ಎಂದರು.

ಯಾವುದೇ ಜಾತಿ ಮತ ಧರ್ಮಗಳನ್ನು ಎಣಿಸದೇ ಜಗತ್ತಿನ ಮಾನವ ಕುಲಕ್ಕೆ ಒಳಿತಾಗಿರುವ ಮಹನೀಯರನ್ನು ಕೆಲವೇ ಮಂದಿ ಸ್ವಾರ್ಥಕ್ಕೆ ಒಂದು ಜಾತಿಗೆ, ಧರ್ಮಕ್ಕೆ ಸೀಮಿತಗೊಳಿಸಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದೂರದೃಷ್ಟಿಯ ಫ‌ಲ: ಸದಸ್ಯ ಎಸ್‌.ಟಿ. ಸಿದ್ದರಾಜು ಮಾತನಾಡಿ, ಕೆಂಪೇಗೌಡರ ದೂರದೃಷ್ಟಿಯ ಫ‌ಲವಾಗಿ ಇಂದು ಬೆಂಗಳೂರು ಬೃಹತ ನಗರವಾಗಿ ಬೆಳೆದು ವಿಶ್ವಮಾನ್ಯ ನಗರವಾಗಿದೆ. ಜಯನಗರ ಸಾಮ್ರಾಜ್ಯದಲ್ಲಿ ಸಾಮಂತರಾಗಿದ್ದ ಕೆಂಪೇಗೌಡರು, ಕೃಷ್ಣದೇವರಾಯನ ಸಹೋದರ ಅಚ್ಯುತರಾಯನ ಅಪ್ಪಣೆ ಪಡೆದು ಬೆಂಗಳೂರು ನಿರ್ಮಿಸಿ ಅಂದೇ ಜಾತ್ಯತೀತ ಜನಗಳಿಗೆ ಆಶ್ರಯ ನೀಡಿದರ ಫ‌ಲವಾಗಿ ಬೆಂಗಳೂರಿನಲ್ಲಿ ಇಂದಿಗೂ ಎಲ್ಲ ವರ್ಗದವರು ಜೀವನ ಸಾಗಿಸುತ್ತಿದ್ದಾರೆ ಎಂದರು.

ಬದುಕು ಕಟ್ಟಿಕೊಳ್ಳಲು ಸಹಕಾರಿ: ಕಾರ್ಯಧ್ಯಕ್ಷ ಬಿ.ಎಚ್‌. ಮನೋಹರ್‌ ಮಾತನಾಡಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಈಗ ವಿಶ್ವಕ್ಕೆ ಮಾದರಿ ಅವರ ಶ್ರಮದ ಪ್ರತಿಫ‌ಲವೇ ಇಂದು ಕೋಟ್ಯಂತರ ಜನರು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದರು. ಬರಗೇನಹಳ್ಳಿ ವಿಎಸ್‌ಎಸ್‌ಎನ್‌ ಅಧ್ಯಕ್ಷ ಬಿ.ಶಿವರಾಮಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ನರಸೀಪುರ ನಾಗರಾಜು, ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಮಂಜುನಾಥ್‌, ಉಪಾದ್ಯಕ್ಷ ಹನುಮಂತರಾಜು, ಕಾಂಗ್ರೆಸ್‌ ಮುಖಂಡ ಡಿ.ದೇವರಾಜು, ಕರವೇ ಅಧ್ಯಕ್ಷ ಬಿ. ಮಂಜುನಾಥ, ಪೆಮ್ಮನಹಳ್ಳಿ ದೇವರಾಜು, ನರಸಿಂಹಮೂರ್ತಿ, ಮಾಜಿ ಅಧ್ಯಕ್ಷ ಮಧುಸೂದನ್‌, ಜಗದೀಶ್‌ ಚೌದರಿ, ಕಾರ್ಯದರ್ಶಿ ತಿಮ್ಮೆಗೌಡ, ನಾಗವೇಣಿ, ಗೌರವಧ್ಯಕ್ಷ ವೆಂಕಟಪ್ಪ, ಸದಸ್ಯ ರಾಮಚಂದ್ರ, ಗೋಪಾಲ್‌ ಬಿ.ಎಚ್‌. ವಸಂತಕುಮಾರ್‌ ಮಾಚನಹಳ್ಳಿ ಕೃಷ್ಣಮೂರ್ತಿ, ನಳಿನಾ, ರಾಜಣ್ಣ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.