ಆಟೋ ರಿಕ್ಷಾ ಓಡಿಸುತ್ತಿದ್ದ ಶಿಂಧೆ ಮಹಾ ಗಾದಿಗೆ ಏರಿದ್ದು ಹೇಗೆ ?

ಜೀವನದಲ್ಲಿ ನೊಂದು ಮಾನಸಿಕ ಖಿನ್ನತೆಗೆ ಜಾರಿದ್ದ ಮಹಾರಾಷ್ಟ್ರ ಸಿಎಂ

Team Udayavani, Jun 30, 2022, 8:58 PM IST

1-gfdg

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಯವರು ಸತಾರಾದ ಜಾವಲಿ ತಾಲೂಕಿನವರುವರು. ಅವರ ಕುಟುಂಬ ಜೀವನೋಪಾಯಕ್ಕಾಗಿ ಥಾಣೆಗೆ ಸ್ಥಳಾಂತರಗೊಂಡಿತ್ತು. ಏಕನಾಥ್ ಅವರು ಥಾಣೆಯ ಮಂಗಳಾ ಹೈಸ್ಕೂಲ್ ಮತ್ತು ಜೂನಿಯರ್ ಕಾಲೇಜಿನಲ್ಲಿ ಓದಿದ್ದಾರೆ.ಅವರು ತಮ್ಮ ಕುಟುಂಬವನ್ನು ಪೋಷಿಸಲು ಆಟೋರಿಕ್ಷಾವನ್ನು ಓಡಿಸುತ್ತಿದ್ದರು ಎನ್ನುವುದು ವಿಶೇಷವಾಗಿದೆ.

ಶಿವಸೇನೆಯ ಪರಮೋಚ್ಛ ನಾಯಕ ಬಾಳಾ ಸಾಹೇಬ್ ಠಾಕ್ರೆ ಮತ್ತು ಆನಂದ್ ದಿಘೆ ಅವರ ಗರಡಿಯಲ್ಲಿ ಪಳಗಿದ ಶಿಂಧೆ ರಾಜಕೀಯದಲ್ಲಿ ಹಂತ ಹಂತವಾಗಿ ಬಹುಬೇಗ ಉನ್ನತ ಸ್ಥಾನಗಳನ್ನು ಪಡೆದಿದ್ದಾರೆ.

1997ರಲ್ಲಿ ಮೊದಲ ಬಾರಿಗೆ ಥಾಣೆ ಮುನ್ಸಿಪಲ್ ಕಾರ್ಪೊರೇಟರ್ ಆಗಿ ಆಯ್ಕೆಯಾದ ಶಿಂಧೆ ವೇಗದ ರಾಜಕೀಯ ಪ್ರಗತಿ ಸಾಧಿಸಿ 2004 ರಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾದರು. 2019ರ ಗೆಲುವು ಸೇರಿ ಸತತ ನಾಲ್ಕು ಬಾರಿ ವಿಧಾನಸಭೆಗೆ ಚುನಾಯಿತರಾಗಿದ್ದಾರೆ.

2014 ರಾಡು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಅವರು, 2014 – 2019ರ ವರೆಗೆ ರಾಜ್ಯ ಸರ್ಕಾರದಲ್ಲಿ ಲೋಕೋಪಯೋಗಿ ಕ್ಯಾಬಿನೆಟ್ ಸಚಿವರಾಗಿ, 2019ರಲ್ಲಿ ಉದ್ಧವ್ ಠಾಕ್ರೆ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಗಳ ಸಚಿವರಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ ರಾಜಕೀಯ ಅನುಭವ ಹೊಂದಿದ್ದಾರೆ.

ಕೊಪ್ರಿ ಪಚ್ಪಪಖಾಡಿ ವಿಧಾನಸಭಾ ಕ್ಷೇತ್ರವನ್ನು ನಾಲ್ಕು ಅವಧಿಗೆ ಪ್ರತಿನಿಧಿಸುತ್ತಿರುವ 58 ರ ಹರೆಯದ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಂಡಾಯವೆದ್ದ ಬೆನ್ನಲ್ಲೇ ಬಿಜೆಪಿಯ ಕಡೆಯಿಂದ ರಾಜಕೀಯ ರಣತಂತ್ರದ ಭಾಗವಾಗಿ ಉಡುಗೊರೆಯ ರೂಪದಲ್ಲಿ ಅಚ್ಚರಿಯಾಗಿ ಒಲಿದು ಬಂದಿದೆ.

ಬದುಕಿನಲ್ಲಿ ಮರೆಯಲಾಗದ ನೋವು

2 ಜೂನ್ 2000 ರಂದು ನಡೆದ ದುರಂತ ಶಿಂಧೆಯವರ ಬದುಕಿನಲ್ಲಿ ಎಂದು ಮರೆಯಲಾಗದ ಆಗಾಗ ನೆನಪಾಗುವ ದುರಂತ ದಿನವಾಗಿದೆ. ಅವರ ಮಕ್ಕಳಾದ ದಿಪೇಶ್ (11 ವರ್ಷ) ಮತ್ತು ಶುಭದಾ (7 ವರ್ಷ) ಹಳ್ಳಿಯ ಸಮೀಪವಿರುವ ಸರೋವರದಲ್ಲಿ ದೋಣಿ ವಿಹಾರಕ್ಕೆ ತೆರಳಿದ್ದಾಗ ದೋಣಿ ಮಗುಚಿ ಬಿದ್ದು ಇಬ್ಬರೂ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ದುರಂತದ ಬಳಿಕ ಶಿಂಧೆ ಹಲವು ತಿಂಗಳುಗಳ ಕಾಲ ಖಿನ್ನತೆಗೆ ಒಳಗಾಗಿದ್ದರು. ಶಿವಸೇನೆಯ ಹಿರಿಯ ನಾಯಕ ಆನಂದ್ ದಿಘೆ ಅವರು ಶಿಂಧೆಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಅವರ ಮನಸ್ಸಿನ ನೋವನ್ನು ದೂರ ಮಾಡಲು, ಖಿನ್ನತೆಯಿಂದ ದೂರವಿರಿಸಲು ರಾಜಕೀಯವಾಗಿ ಹೆಚ್ಚು ಕ್ರೀಯಾಶೀಲರನ್ನಾಗಿಸಿದರು.

ನೋವಿನ ಗಳಿಗೆಯಲ್ಲಿ ನನ್ನ ಕುಟುಂಬಕ್ಕೆ ನನ್ನ ಅಗತ್ಯವಿತ್ತು. ಈ ವೇಳೆ ದಿಘೆ ಸಾಹೇಬರು, ‘ಈ ಸಮಾಜಕ್ಕೆ ನಿಮ್ಮ ಅವಶ್ಯಕತೆ ಬಹಳ ಇದೆ. ನಿಮ್ಮ ಕುಟುಂಬ ಅಷ್ಟು ಚಿಕ್ಕದಲ್ಲ, ದೊಡ್ಡ ಕುಟುಂಬ. ನೀವು ಜನರಿಗಾಗಿ ಕೆಲಸ ಮಾಡಲು ಬಯಸುವವರು ಎಂದು ಧೈರ್ಯ ತುಂಬಿದ್ದನ್ನು ಶಿಂಧೆ ಕಾರ್ಯಕ್ರಮವೊದರಲ್ಲಿ ಕಂಬನಿ ಸಹಿತ ಹೇಳಿಕೊಂಡಿದ್ದರು.

ಶಿಂಧೆಯವರ ಇನ್ನೋರ್ವ ಪುತ್ರ ಡಾ. ಶ್ರೀಕಾಂತ್ ಶಿಂಧೆ ಅವರು ಮೂಳೆ ಶಸ್ತ್ರಚಿಕಿತ್ಸಕರಾಗಿದ್ದು, ಅವರು 2014 ರಲ್ಲಿ ಕಲ್ಯಾಣ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದು, 2019 ರಲ್ಲಿ ಮರು ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.