ಮಂಗಳೂರು : ಮಾನಹಾನಿ ಪ್ರಕರಣಕ್ಕೆ ತಡೆ, ಡಾ.ಕಕ್ಕಿಲ್ಲಾಯಗೆ ನೋಟಿಸ್
Team Udayavani, Jun 30, 2022, 10:51 PM IST
ಮಂಗಳೂರು : ಐಎಂಎ ಮಂಗಳೂರು ಘಟಕದ ಪದಾಧಿಕಾರಿಗಳ ವಿರುದ್ಧ ಮಂಗಳೂರಿನ ವೈದ್ಯರಾದ ಡಾ| ಬಿ.ಎಸ್. ಕಕ್ಕಿಲ್ಲಾಯ ಹೂಡಿರುವ ಮಾನಹಾನಿ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಡಾ| ಕಕ್ಕಿಲ್ಲಾಯ ಹೂಡಿರುವ ಮಾನಹಾನಿ ದಾವೆಯ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಐಎಂಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ . ನಾಗಪ್ರಸನ್ನ ಅವರು ಪ್ರತಿವಾದಿ ಡಾ| ಕಕ್ಕಿಲ್ಲಾಯ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 26ಕ್ಕೆ ಮುಂದೂಡಿದ್ದಾರೆ.
ಕೋವಿಡ್ ನಿರ್ಬಂಧ ಜಾರಿಯಲ್ಲಿದ್ದ ಅವಧಿಯಲ್ಲಿ ಮಾಸ್ಕ್ ಇಲ್ಲದೇ ಸೂಪರ್ ಮಾರ್ಕೆಟ್‌ನಲ್ಲಿ ಡಾ| ಕಕ್ಕಿಲ್ಲಾಯ ಅವರು ಪ್ರವೇಶಿಸಿದ ಸಂದರ್ಭ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮೂಲತಃ ವೈದ್ಯರಾಗಿರುವ ಕಕ್ಕಿಲ್ಲಾಯ ಅವರ ವರ್ತನೆ ಬಗ್ಗೆ ಮಾಧ್ಯಮದವರು ಐಎಂಎ ಪದಾಧಿಕಾರಿಗಳನ್ನು ಪ್ರಶ್ನಿಸಿದಾಗ, ಮಾಸ್ಕ್ ಇಲ್ಲದೇ ಸೂಪರ್ ಮಾರ್ಕೆಟ್‌ಗೆ ತೆರಳಿದ್ದು ತಪ್ಪು ಎಂದು ಉತ್ತರಿಸಿದ್ದರು.
ಇದರ ವಿರುದ್ಧ ಡಾ| ಕಕ್ಕಿಲ್ಲಾಯ, ಮಂಗಳೂರು ಐಎಂಎ ಪದಾಧಿಕಾರಿಗಳು, ರಾಜ್ಯ ಐಎಂಎ ವೈದ್ಯರ ಕಿರುಕುಳ ತಡೆ ಸಮಿತಿಯ ಅಧ್ಯಕ್ಷ ಡಾ| ಗಣೇಶ್ ಪ್ರಸಾದ್ ಮುದ್ರಾಜೆ ಮತ್ತಿತರರ ವಿರುದ್ಧ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು. ಈ ದಾವೆಯ ವಿಚಾರಣೆ ನಡೆಸದಂತೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಡಾ| ಮುದ್ರಜೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಕೆದಂಬಾಡಿ ಡಿ. ಕೃಷ್ಣಮೂರ್ತಿ ವಾದಿಸಿದ್ದರು.
ಇದನ್ನೂ ಓದಿ : ಮ್ಯಾನೇಜ್‍ಮೆಂಟ್ ಕೋಟಾ; ರಾಷ್ಟ್ರ ಮಟ್ಟದ ಸಿಇಟಿ ನಡೆಸಲು ಸಿದ್ಧ: ಡಾ.ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.