ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
Team Udayavani, Jul 1, 2022, 9:30 AM IST
ಬೆಂಗಳೂರು : ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆ ಅನ್ವಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದ ವಿಚಾರಣೆ ದಿಲ್ಲಿಯ ವಿಶೇಷ ನ್ಯಾಯಾಲಯದಲ್ಲಿ ಇಂದು ಆರಂಭಗೊಳ್ಳಲಿದೆ.
ಡಿಕೆ ಶಿವಕುಮಾರ್ ಸೇರಿ ಐವರು ಆರೋಪಿಗಳ ವಿರುದ್ಧ ಈ ಸಂಬಂಧ ದೂರು ದಾಖಲಾಗಿದೆ. 2019ರಂದು ಬಂಧನಕ್ಕೆ ಒಳಗಾಗಿದ್ದ ಡಿಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಮೇ ತಿಂಗಳಂದು ಆರೋಪಪಟ್ಟಿ ಸಲ್ಲಿಸಿದ್ದರು. ಜಾಮೀನು ಪರಿಶೀಲನೆಯೂ ಸೇರಿದಂತೆ ಹಲವು ಅಂಶಗಳು ವಿಚಾರಣೆ ಸಂದರ್ಭದಲ್ಲಿ ಪ್ರಸ್ತಾಪವಾಗಲಿದ್ದು ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಮೇಲೆ ಈ ವಿಚಾರಣೆ ಮಹತ್ವದ ಪರಿಣಾಮ ಬೀರಲಿದೆ.
ಇದನ್ನೂ ಓದಿ:ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್
ವಿಚಾರಣೆ ಮುಂದೂಡುವಂತೆ ಶಿವಕುಮಾರ್ ಪರ ವಕೀಲರು ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪಕ್ಷದ ವಲಯದಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಇಡಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.