ಫುಟ್‌ಪಾತ್‌ ಆಕ್ರಮಿಸಿದ ಗೂಡಂಗಡಿ-ಪರದಾಟ

ಬೀದಿಬದಿ ವ್ಯಾಪಾರಸ್ಥರಿಂದ ವಿದ್ಯಾರ್ಥಿಗಳು-ವಯೋವೃದ್ಧರ ಸಂಚಾರಕ್ಕೆ ಸಂಕಷ್ಟ

Team Udayavani, Jul 1, 2022, 3:32 PM IST

8

ಹಾವೇರಿ: ನಗರದಲ್ಲಿ ಬೀದಿಬದಿ ವ್ಯಾಪಾರಸ್ಥರು ಫುಟ್‌ಪಾತ್‌ ಸೇರಿದಂತೆ ರಸ್ತೆಗಳನ್ನೆಲ್ಲ ಆಕ್ರಮಿಸಿಕೊಂಡಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ನಾಗರಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ನಗರದಲ್ಲಿ ವಾಹನಗಳ ಸಂಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಬೀದಿಬದಿ ವ್ಯಾಪಾರಸ್ಥರು ತಮ್ಮ ಮಳಿಗೆ ಸೇರಿದಂತೆ ಬೋರ್ಡ್‌ಗಳನ್ನು ರಸ್ತೆಗಳಿಗೆ ವಿಸ್ತರಿಸುತ್ತಿದ್ದು, ವಾಹನ ಮತ್ತು ಜನರ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ಆದರೆ, ನಗರಸಭೆ ಅಧಿಕಾರಿಗಳು ತಮಗೂ ಇದಕ್ಕೂ ಯಾವುದೇ ಸಂಬಂಧವೇ ಇಲ್ಲದಂತೆ ವರ್ತಿಸುವ ಮೂಲಕ ಜಾಣ ಮೌನ ವಹಿಸುತ್ತಿದ್ದಾರೆ.

ನಗರದ ಪಿ.ಬಿ.ರಸ್ತೆ, ಕೇಂದ್ರ ಬಸ್‌ ನಿಲ್ದಾಣದ ಸುತ್ತಮುತ್ತ, ಹಾನಗಲ್ಲ ರಸ್ತೆ, ಗುತ್ತಲ ರಸ್ತೆ, ಜಿಲ್ಲಾಸ್ಪತ್ರೆಯ ಮುಂಭಾಗ ಸೇರಿದಂತೆ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಗೂಡಂಗಡಿಗಳು, ಹಣ್ಣು, ಹಂಪಲ, ಬಟ್ಟೆ ಮಾರಾಟ, ಬೈಕ್‌ಗಳ ಸೀಟ್‌ ಕವರ್‌ ಮಾರಾಟ ಮುಂತಾದ ವಸ್ತುಗಳ ಮಾರಾಟ ಮಾಡಲಾಗುತ್ತಿದೆ. ಅಲ್ಲದೇ, ಅನೇಕ ಅಂಗಡಿಗಳ ಪ್ರಚಾರದ ಬೋರ್ಡ್‌ ಹಾಗೂ ಸ್ಟ್ಯಾಂಡ್‌ಗಳನ್ನು ಫುಟ್‌ಪಾತ್‌ ನಡುವೆ ಇಡಲಾಗುತ್ತಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಒಂದೊಂದೇ ತಳ್ಳು ಗಾಡಿ ಅಂಗಡಿಗಳು ಬಂದವು. ಈಗ ಅವೆಲ್ಲ ಅನಧಿಕೃತವಾಗಿಯೇ ಜಾಗ ಭದ್ರಪಡಿಸಿಕೊಂಡಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಸದ್ಯ ಮಳೆಗಾಲ ಪ್ರಾರಂಭವಾಗಿರುವುದರಿಂದ ಫುಟ್‌ ಪಾತ್‌ಗಳಲ್ಲಿ ತಲೆಎತ್ತಿರುವ ಗೂಡಗಂಡಿಗಳ ಮೇಲೆ ಪ್ಲಾಸ್ಟಿಕ್‌, ತಾಡಪಾಲ್‌ ಹೊದಿಸಲಾಗಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ನಗರದ ಬಸ್‌ ನಿಲ್ದಾಣದ ಸುತ್ತಮುತ್ತ ಹಾಗೂ ಗುತ್ತಲ ರಸ್ತೆಯ ಎಲ್‌ಬಿಎಸ್‌ ಮಾರುಕಟ್ಟೆ ಸಮೀಪ ಫುಟ್‌ಪಾತ್‌ ಮೇಲೆಯೇ ಗೂಡಗಂಡಿಗಳು ತೆಲೆಎತ್ತಿವೆ. ಇದರಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಯೋವೃದ್ಧರು ವಾಹನಗಳು ಬಂದಾಗ ಪಕ್ಕದ ಫುಟ್‌ಪಾತ್‌ ಮಾರ್ಗದಲ್ಲಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ, ಸಾರ್ವಜನಿಕರು ನಿತ್ಯ ಜೀವ ಭಯದಲ್ಲಿಯೇ ಸಂಚರಿಸುವಂತಾಗಿದೆ. ಗ್ರಾಮೀಣ ಭಾಗದಿಂದ ಆಗಮಿಸುವ ಹಲವಾರು ಜನರು ನಗರದ ಮಾರುಕಟ್ಟೆ, ತಾಲೂಕು ಪಂಚಾಯಿತಿ, ಜಿಲ್ಲಾಸ್ಪತ್ರೆ, ಪಶು ಆಸ್ಪತ್ರೆ, ತಹಶೀಲ್ದಾರ್‌ ಕಚೇರಿ ಸೇರಿದಂತೆ ಹಲವಾರು ಕಚೇರಿಗಳಿಗೆ ಸದಾ ಓಡಾಡುತ್ತಾರೆ. ನಗರದ ಬಸ್‌ ನಿಲ್ದಾಣದ ಸುತ್ತಮುತ್ತ ಪ್ರತಿನಿತ್ಯ ಹೆಚ್ಚು ವಾಹನ-ಜನಸಂದಣಿಯಿಂದ ಕೂಡಿರುತ್ತದೆ. ಕಳೆದ ವರ್ಷ ನಗರದಲ್ಲಿ ತಲೆಎತ್ತಿದ್ದ ಕೆಲವು ಗೂಡಂಡಿಗಳನ್ನು ತೆರವುಗೊಳಿಸಲು ನಗರಸಭೆ ಮುಂದಾಗಿತ್ತು. ನಂತರದ ದಿನಗಳಲ್ಲಿ ಅದೇ ಸ್ಥಳಗಳಲ್ಲಿ ಗೂಡಂಗಡಿಗಳು ಮತ್ತೇ ತಲೆಎತ್ತಿ ನಿಂತಿವೆ. ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಫುಟ್‌ ಪಾತ್‌ ಆಕ್ರಮಿಸಿಕೊಂಡಿರುವ ಗೂಡಂಗಡಿಗಳನ್ನು ತೆರವುಗೊಳಿಸಲು ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಸದ್ಯ ಮಳೆಗಾಲ ಆರಂಭಗೊಂಡಿರುವುದರಿಂದ ರಸ್ತೆಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ವಾಹನಗಳ ರಾಡಿ ಸಿಡಿದು ಪಾದಚಾರಿಗಳು ತೊಂದರೆ ಎದುರಿಸುವಂತಾ ಗಿದೆ. ಫುಟ್‌ಪಾತ್‌ಗಳ ಮೇಲಿನ ಗೂಡಂಗಡಿ ಹಾಗೂ ಬೋಡ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಲ್ಲದೇ, ಬೀದಿ ಬದಿ ವ್ಯಾಪಾಸ್ಥರಿಗೆ ನಗರಸಭೆ ವತಿಯಿಂದ ನಿರ್ಧಿಷ್ಟ ಸ್ಥಳ ಗುರುತಿಸಿ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ.

ನಗರದ ಫುಟ್‌ಪಾತ್‌ ಹಾಗೂ ಅಂಗಡಿಗಳ ಮುಂಭಾಗದಲ್ಲಿ ಬೋರ್ಡ್‌ಗಳನ್ನು ಇಟ್ಟು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈಗಾಗಲೇ ಕೆಲವು ಅಂಗಡಿಕಾರರಿಗೆ ನೋಟಿಸ್‌ ನೀಡಲಾಗಿದೆ. ಫುಟ್‌ಪಾತ್‌ ಆಕ್ರಮಿಸಿಗೊಂಡಿರುವ ಗೂಡಂಗಡಿಗಳ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. –ಸಂಜೀವ ಕುಮಾರ ನೀರಲಗಿ, ನಗರಸಭೆ ಅಧ್ಯಕ್ಷ

ನಗರದ ಫುಟ್‌ಪಾತ್‌ಗಳಲ್ಲಿ ತೆರೆದಿರುವ ಗೂಡಂಗಡಿಗಳಿಂದ ಪಾದಚಾರಿಗಳ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ. ಸುಸಜ್ಜಿತ ಫುಟ್‌ಬಾತ್‌ಗಳಿದ್ದರೂ ವಿದ್ಯಾರ್ಥಿಗಳು, ವಯೋವೃದ್ಧರು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುವಂತಾಗಿದೆ. ಇದರಿಂದ ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಕೂಡಲೇ ಫುಟ್‌ಪಾತ್‌ಗಳನ್ನು ಆಕ್ರಮಿಸಿಕೊಂಡಿರುವ ಗೂಡಂಗಡಿಗಳ ತೆರವಿಗೆ ನಗರಸಭೆ ಕ್ರಮ ಕೈಗೊಳ್ಳಬೇಕು. –ಪ್ರಭು ಹಿಟ್ನಳ್ಳಿ, ಸ್ಥಳೀಯರು 

-ವಿಶೇಷ ವರದಿ

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.