![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 1, 2022, 3:47 PM IST
ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯರ ಸಂಖ್ಯೆ ಕಡಿಮೆ ಎಂಬುದು ಬಹುತೇಕ ಎಲ್ಲರೂ ಒಪ್ಪುವಂಥ ಮಾತು. ಪ್ರತಿವರ್ಷ ನೂರಾರು ಸಂಖ್ಯೆಯಲ್ಲಿ ಸಿನಿಮಾಗಳು ಬಿಡುಗಡೆಯಾದರೂ, ಚಿತ್ರರಂಗಕ್ಕೆ ಪರಿಚಯವಾಗುವ ಮಹಿಳಾ ನಿರ್ಮಾಪಕರು ಬೆರಳೆಣಿಕೆಯಷ್ಟು ಮಾತ್ರ. ಈ ವರ್ಷ ನಿರ್ಮಾಪಕಿಯರ ಸಾಲಿಗೆ ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ. ಆ ಹೆಸರು “ಹೋಪ್’ ಚಿತ್ರದ ನಿರ್ಮಾಪಕಿ ವರ್ಷಾ ಸಂಜೀವ್ ಅವರದ್ದು.
ಹೌದು, ಶ್ವೇತಾ ಶ್ರೀವಾತ್ಸವ್ ನಾಯಕಿಯಾಗಿ ಅಭಿನಯಿಸಿರುವ “ಹೋಪ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದ್ದು, ಈ ಸಿನಿಮಾಕ್ಕೆ ವರ್ಷಾ ಸಂಜೀವ್ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಸ್ನೂಕರ್ ಪಟುವಾಗಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕ್ರೀಡಾಪಟು ವರ್ಷಾ “ಹೋಪ್’ ಸಿನಿಮಾದ ಮೂಲಕ ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ.
ತಮ್ಮ ಮೊದಲ ಸಿನಿಮಾ ನಿರ್ಮಾಣದ ಬಗ್ಗೆ ಮಾತನಾಡುವ ವರ್ಷಾ ಸಂಜೀವ್, “ಮೊದಲಿನಿಂದಲೂ ಸಿನಿಮಾದ ಬಗ್ಗೆ ಒಂದು ಆಸಕ್ತಿಯಿತ್ತು. ನನ್ನ ಅನುಭವಕ್ಕೆ ಬಂದ ವಿಷಯವನ್ನು ಇಟ್ಟುಕೊಂಡು ಒಂದು ಕಥೆ ಮಾಡಿಕೊಂಡಿದ್ದೆ. ನಮ್ಮ ಸಮಾಜದಲ್ಲಿ, ರಾಜಕೀಯ ವ್ಯವಸ್ಥೆಯಲ್ಲಿ ನಡೆಯುವ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವಿಷಯ ಇದಾಗಿದ್ದು, ಇದನ್ನು ಸಿನಿಮಾದ ಮೂಲಕ ಹೇಳಿದರೆ ಹೆಚ್ಚು ಪರಿಣಾಮಕಾರಿಯಾಗಿ ನೋಡುಗರನ್ನು ತಲುಪುತ್ತದೆ ಎಂಬ ಕಾರಣಕ್ಕೆ ನನ್ನದೇ ಕಥೆಯನ್ನು ಸಿನಿಮಾ ಮಾಡಲು ಮುಂದಾದೆ. ನಿರ್ದೇಶಕ ಅಂಬರೀಶ್ ನನ್ನ ಕಥೆಗೆ ಸಿನಿಮಾ ರೂಪ ಕೊಟ್ಟು ಅಚ್ಚುಕಟ್ಟಾಗಿ ತೆರೆಮೇಲೆ ತಂದಿದ್ದಾರೆ. ಈ ಕಥೆಗೆ ಶ್ವೇತಾ ಶ್ರೀವಾತ್ಸವ್ ನಾಯಕಿಯಾಗಿ ತಮ್ಮ ಪಾತ್ರದ ಮೂಲಕ ಜೀವ ತುಂಬಿದ್ದಾರೆ’ ಎಂದು ಕಥಾ ಹಂದರ ಬಿಚ್ಚಿಡುತ್ತಾರೆ.
“ಈಗಾಗಲೇ “ಹೋಪ್’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳು ನಡೆಯುತ್ತಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ “ಹೋಪ್’ ಟ್ರೇಲರ್‌ಗೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಇದೇ ಜು. 8ಕ್ಕೆ “ಹೋಪ್’ ಸಿನಿಮಾ ಬಿಡುಗಡೆಯಾಗುತ್ತಿದ್ದು, “ಅಭಿಜಿತ್ ಎಂಟರ್‌ಪ್ರೈಸಸ್’ ಸಿನಿಮಾದ ಬಿಡುಗಡೆಯ ಜವಾಬ್ದಾರಿ ವಹಿಸಿಕೊಂಡಿದೆ. ಮಲ್ಟಿಪ್ಲೆಕ್ಸ್ ಸೇರಿದಂತೆ ಸುಮಾರು 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ “ಹೋಪ್’ ರಿಲೀಸ್ ಮಾಡುವ ಯೋಜನೆಯಲ್ಲಿದ್ದೇವೆ’ ಎಂದು ಮಾಹಿತಿ ಕೊಡುತ್ತಾರೆ ವರ್ಷಾ.
ಇನ್ನು ಪೊಲಿಟಿಕಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿರುವ “ಹೋಪ್’ ಸಿನಿಮಾದಲ್ಲಿ ನಾಯಕ ನಟಿ ಶ್ವೇತಾ ಶ್ರೀವಾತ್ಸವ್ ಅವರೊಂದಿಗೆ ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಗೋಪಾಲಕೃಷ್ಣ ದೇಶಪಾಂಡೆ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಜಿ.ಎಸ್.ಕಾರ್ತಿಕ ಸುಧನ್
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.