ಗುಂಡ್ಲುಪೇಟೆ: ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

Team Udayavani, Jul 3, 2022, 11:26 AM IST

ಗುಂಡ್ಲುಪೇಟೆ: ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

ಗುಂಡ್ಲುಪೇಟೆ (ಚಾಮರಾಜನಗರ): ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಲಕ್ಕಿಪುರ ಗ್ರಾಮಕ್ಕೆ ಹೊಂದಿಕೊಂಡ ಜಮೀನೊಂದರಲ್ಲಿ ಇಬ್ಬರು ರೈತರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಸುಮಾರು 10 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಿಟಿಜಿಟಿ ಮಳೆ ನಡುವೆಯೂ ಆನೆಗಳ ಸಹಾಯದಿಂದ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಭಾನುವಾರ ಬೆಳಗ್ಗೆ ಸೆರೆ ಹಿಡಿದಿದ್ದಾರೆ.

ಹುಲಿಯು ಶನಿವಾರ ಗೋಪಾಲಪುರ ಗ್ರಾಮದ ಗವಿಯಪ್ಪ ಮತ್ತು ರಾಜಶೇಖರ್ ಹಾಗು ಒಂದು ಹಸುವಿನ ಮೇಲೆ ದಾಳಿ ನಡೆಸಿ ಶಿವಬಸಪ್ಪ ಎಂಬ ರೈತ ಬಾಳೆ ಜಮೀನಿನಲ್ಲಿ ಅಡಗಿ ಕುಳಿತಿತ್ತು. ನಂತರ ಭಾನುವಾರ ಬೆಳಗ್ಗೆ 6 ಗಂಟೆಗೆ ಅರಣ್ಯ ಇಲಾಖೆ ಸಿಬ್ಬಂದಿ ಅಭಿಮನ್ಯು ಮತ್ತು ಶ್ರೀಕಂಠ ಎಂಬ ಎರಡು ಆನೆಗಳ ಮೂಲಕ ಕೂಬಿಂಗ್ ಆರಂಭಿಸಿ, ಸತತ ಮೂರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಸೆರೆ ಹಿಡಿದಿದ್ದಾರೆ.

ಹುಲಿಯ ಎಡಕಾಲಿಗೆ ಗಾಯವಾಗಿರುವ ಕಾರಣ ಬೇರೆ ಕಡೆ ತೆರಳಲಾಗದೆ ಬಾಳೆ ತೋಟದಲ್ಲೆ ಅಡಗಿತ್ತು ಎಂಬ ಅರಣ್ಯ ಇಲಾಖೆ ಮೂಲಗಳು ಮಾಹಿತಿ ನೀಡಿದ್ದು, ಬೆಳಿಗ್ಗೆ 6ರಿಂದ 9 ಗಂಟೆಗಳ ವರೆಗೆ ಕೂಂಬಿಂಗ್ ನಡೆಸಿ ಬಳಿಕ ಹುಲಿ ಕಂಡಾಗ ಅರಿವಳಿಕೆ ನೀಡಿಲಾಯಿತು. ಕೆಲ ನಿಮಿಷಗಳಲ್ಲಿ ಹುಲಿ ನಿತ್ರಾಣಗೊಂಡ ನಂತರ ಬಲೆಯ ಮೂಲಕ‌ ಸೆರೆ ಹಿಡಿದು ಬೋನಿಗೆ ಹಾಕಲಾಯಿತು.

ಸೆರೆಯಾದ ಹುಲಿಯನ್ನು ಹೆಣ್ಣು ಹುಲಿಯಾಗಿದ್ದು, ಮೈಸೂರಿನ ಕೂರ್ಗಳ್ಳಿಯಲ್ಲಿ ಇರುವ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ.

ಈ ಸಂದರ್ಭದಲ್ಲಿ ಹುಲಿ ಯೋಜನೆ ನಿರ್ದೇಶಕ ಡಾ. ರಮೇಶ್ ಕುಮಾರ್, ಎಸಿಎಫ್ ನವೀನ್, ಆರ್ ಎಫ್ ಓ ನವೀನ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ  ಇದ್ದರು.

ನಿಟ್ಟುಸಿರು ಬಿಟ್ಟ ಜನತೆ: ಹುಲಿ ದಾಳಿಯಿಂದ ಬೆಚ್ಚಿಬಿದ್ದಿದ್ದ ಗೋಪಾಲಪುರ, ಬೇರಂಬಾಡಿ ಸೇರಿದಂತೆ ಸುತ್ತಮುತ್ತಲ ಗ್ರಾಮದ ರೈತರು ಜಮೀನುಗಳಿಗೆ ತೆರಳಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಹುಲಿ ಸೆರೆಯಾಗಿರುವ ಹಿನ್ನೆಲೆ ಜನರು ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.