ಭೂಸ್ವಾಧೀನಕ್ಕೆ ನೋಟಿಸ್ ಜಾರಿ
Team Udayavani, Jul 3, 2022, 2:35 PM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಹುಲುಕುಂಟೆ ಬಳಿ ಹೊಸ ಕೈಗಾರಿಕಾ ಪ್ರದೇಶಕ್ಕಾಗಿ ಭೂ ಸ್ವಾಧೀನಕ್ಕಾಗಿ ಜು. 7ರಂದು ಸಭೆಗೆ ಹಾಜರಾಗುವಂತೆ ರೈತರಿಗೆ ನೋಟಿಸ್ ನೀಡಲಾಗಿದ್ದು, ಆತಂಕಗೊಂಡಿರುವ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಭೂ ಸ್ವಾಧೀನ ಪ್ರಕ್ರಿಯೆ ಕುರಿತಂತೆ ಕೆಐಡಿಬಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಅವರು, ಕೈಗಾರಿಕಾ ಪ್ರದೇಶಕ್ಕೆ ಭೂಮಿಯನ್ನು ಏಕೆ ಸ್ವಾಧೀನ ಪಡಿಸಿಕೊಳ್ಳಬಾರದೆಂಬುದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಜು. 7ರಂದು ಹುಲಿಕುಂಟೆ ಗ್ರಾಮದ ಎಂಪಿಸಿಎಸ್ ಮುಂಭಾಗ ಆಯೋ ಜಿಸಿರುವ ಸಭೆಗೆ ಹಾಜರಾಗುವಂತೆ ರೈತರಿಗೆ ನೋಟಿಸ್ ನೀಡಿದ್ದು, ಫಲವತ್ತಾದ ಕೃಷಿಭೂಮಿ ಯನ್ನು ನೀಡುವುದಿಲ್ಲವೆಂದು ಪಟ್ಟು ಹಿಡಿದು ತೀವ್ರ ಹೋರಾಟ ನಡೆಸಿ, ಇಲಾಖೆಯ ಅಧಿಕಾರಿಗಳಿಗೆ ಪ್ರಸ್ತಾಪ ಕೈ ಬಿಡುವಂತೆ ಮನವಿ ಸಲ್ಲಿಸಿದ್ದರು. ಮತ್ತೆ ನೋಟಿಸ್ ನೀಡಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಭೂಮಿ ವಶಪಡಿಸಿಕೊಳ್ಳುವ ಹುನ್ನಾರ: ಕೈಗಾರಿಕಾ ಪ್ರದೇಶ ಸ್ಥಾಪನೆ ಸರ್ಕಾರ ಫಲವತ್ತಾದ ಕೃಷಿ ವಶಪಡಿಸಿಕೊಳ್ಳಲು ಮತ್ತೆ ನೋಟಿಸ್ ನೀಡಿರುವುದು ಖಂಡನೀಯ. ಈ ವ್ಯಾಪ್ತಿಯಲ್ಲಿ ನೂರಕ್ಕು ಕೊಳವೆ ಬಾವಿಗಳು, 150 ಎಕರೆಗೂ ಹೆಚ್ಚು ಅಡಕೆ, ತೆಂಗು, ಮಾವಿನ ತೋಟಗಳು ಸೇರಿದಂತೆ ಇಲ್ಲಿನ ರೈತರು ಕೃಷಿಯನ್ನೇ ಅಧಾರವಾಗಿ ಜೀವನ ನಡೆಸುತ್ತಿರು ವುದಕ್ಕೆ ಸಾಕ್ಷಿಯಾಗಿ ಹೋಬಳಿ ವ್ಯಾಪ್ತಿಯಲ್ಲಿ ನಾಲ್ಕು ಸಾವಿರ ಲೀಟರ್ ಹಾಲನ್ನು ಉತ್ಪಾದಿಸಿ ಡೇರಿಗೆ ನೀಡಲಾಗುತ್ತಿದೆ. ಆದಾಗ್ಯೂ ರೈತರ ಪರ ಸರ್ಕಾರಗಳೆನ್ನುವವರು, ಫಲವತ್ತಾದ ಭೂಮಿಯನ್ನೇ ವಶಪಡಿಸಿಕೊಳ್ಳುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದಿದ್ದಾರೆ.
2021ರ ಫೆ. 4ರಂದು ನಡೆದ ರಸ್ತೆತಡೆಯ ವೇಳೆ ಕೆಐಡಿಬಿಯಲ್ಲಿನ ಅಧಿಕಾರಿಗಳು ಹುಲಿಕುಂಟೆ ಸುತ್ತ ಕೆಐಡಿಬಿಗೆ ಭೂಸ್ವಾಧೀನಕ್ಕೆ ಒಳಪಡುತ್ತಿರುವ ಜಮೀನು ಕುರಿತು ಮಾಹಿತಿ ನೀಡಿರುವ ಆಧಾರದ ಮೇಲೆ ಪ್ರಭಾವಿ ರಾಜಕಾರಣಿಗಳು ಹಾಗೂ ಹಿರಿಯ ಅಧಿಕಾರಿಗಳ ಸಂಬಂಧಿಗಳು ಜಮೀನು ಖರೀದಿಸಿದ್ದಾರೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಗಂಭೀರ ಆರೋಪ ಮಾಡಿ, ಪ್ರತಿಭಟನೆ ಸಹ ನಡೆಸಿದ್ದರು.
ಕೈಗಾರಿಕೆಗಳು ಇನ್ನು ಕಾರ್ಯಾರಂಭ ಮಾಡಿಲ್ಲ: ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ 80ರ ದಶಕದಲ್ಲಿ ಆರಂಭವಾದ ಕೈಗಾರಿಕಾ ಪ್ರದೇಶ ನಾಲ್ಕು ಬಾರಿ ವಿಸ್ತರಣೆಯಾಗಿ ಈಗ ಸುಮಾರು 2,500 ಎಕರೆಗೆ ಬಂದು ನಿಂತಿದೆ. ಹಾಗೆಯೇ ಹುಲಿಕುಂಟೆ ಗಡಿ ಭಾಗಕ್ಕೆ ಹೊಂದಿಕೊಂಡಂತೆಯೇ ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆ, ಶಿವಗಂಗೆ ಸಮೀಪ ಸುಮಾರು 1,500 ಎಕರೆ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆಯಾಗಿದೆ. ಈ ಇಷ್ಟೂ ಪ್ರದೇಶದಲ್ಲೂ ಭೂಸ್ವಾಧೀನವಾಗಿ ದಶಕಗಳೇ ಕಳೆದಿದ್ದರೂ, ಇನ್ನು ಪೂರ್ಣ ಪ್ರಮಾಣದಲ್ಲಿ ಕೈಗಾರಿಕೆಗಳು ಕಾರ್ಯಾರಂಭ ಮಾಡದೇ ಜಮೀನು ಖಾಲಿಯಾಗಿಯೇ ಉಳಿದಿವೆ.
ವಾಸ್ತವ ಸ್ಥಿತಿ ಹೀಗಿರುವಾಗ ತಾಲೂಕಿಗೆ ಮತ್ತೂಂದು ಕೈಗಾರಿಕಾ ಪ್ರದೇಶ ಸ್ಥಾಪನೆ ಅಗತ್ಯವಿತ್ತೇ ಎನ್ನುವ ಪ್ರಶ್ನೆ ಸಹಜವಾಗಿದೆ. ಹುಲಿಕುಂಟೆ, ಓಬಳಾಪುರ ವ್ಯಾಪ್ತಿಯಲ್ಲಿ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಕೃಷಿಕರನ್ನು ಒಕ್ಕಲೆಬ್ಬಿಸಿ ಕೈಗಾರಿಕೆ ಸ್ಥಾಪನೆ ಮಾಡುವ ಅಗತ್ಯವಾದರು ಏನಿದೆ?. ಯಾವುದೇ ಕಾರಣಕ್ಕೂ ನಾವು ಜಮೀನು ನೀಡುವುದಿಲ್ಲ ಎನ್ನುತ್ತಾರೆ ಸ್ಥಳೀಯರು.
1,150 ಎಕರೆಯಲ್ಲಿ ಎಂಎಂಎಲ್ಪಿ ಸ್ಥಾಪನೆ : ನೆಲಮಂಗಲ ತಾಲೂಕಿನ ಓಬಳಾಪುರ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ವ್ಯಾಪ್ತಿಯ 1,150 ಎಕರೆ ಪ್ರದೇಶದಲ್ಲಿ ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್(ಎಂಎಂಎಲ್ಪಿ) ಸ್ಥಾಪನೆಯಾಗು ತ್ತಿದೆ. ನೆಲಮಂಗಲ ತಾಲೂಕಿನ ಓಬಳಾಪುರ ಕೈಗಾರಿಕಾ ಪ್ರದೇಶದಲ್ಲಿ 550 ಎಕರೆ, ಹುಲಿಕುಂಟೆ ಕೈಗಾರಿಕಾ ಪ್ರದೇಶದಲ್ಲಿ 600 ಎಕರೆ ಗುರುತಿಸಲಾಗಿದೆ. ಹುಲಿಕುಂಟೆ ಸಮೀಪ ಮಲ್ಟಿ ಮಾರ್ಡನ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗೆ 600 ಎಕರೆ ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಿ, ರಾಷ್ಟ್ರೀಯ ಹೆದ್ದಾರಿ 207ರಲ್ಲಿ ರೈತರು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಯೋಜನೆ ಕೈ ಬಿಡುವಂತೆ ರೈತರ ಪ್ರತಿಭಟನಾ ಮನವಿಯನ್ನು ಸರ್ಕಾರದ ಗಮನಕ್ಕೆ ತರಲಾಗುವುದೆಂದು ಭರವಸೆ ನೀಡಿದ್ದರು. ಅಲ್ಲದೆ, ಕೃಷಿ ಭೂಮಿ ಉಳಿಸಿಕೊಳ್ಳಲು ಹುಲಿಕುಂಟೆ ವ್ಯಾಪ್ತಿಯ ಕೃಷಿ ಭೂಮಿ ಭೂ ಸ್ವಾಧೀನ ಕೈಬಿಡಿಸಲು ಮಠಾಧಿಪತಿಗಳ ನೆರವು ಬೇಡಿದ ರೈತರು, ಸರ್ಕಾರಕ್ಕೆ ಪತ್ರ ರವಾನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.