‘ದೂರದರ್ಶನ’ದಲ್ಲಿ ‘ಆಯಾನಾ’ ಪಯಣ; ಪೃಥ್ವಿ ಅಂಬರ್ ನಟನೆಯ ಚಿತ್ರ
Team Udayavani, Jul 3, 2022, 3:38 PM IST
“ದಿಯಾ’ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ಈಗ “ದೂರದರ್ಶನ’ ಹೊತ್ತು ಬರುತ್ತಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಸಾಕಷ್ಟು ಸದ್ದು ಮಾಡಿದೆ. ಇದೀಗ ದೂರದರ್ಶನದ ನಾಯಕಿಯ ಪಾತ್ರವನ್ನು ಚಿತ್ರತಂಡ ರಿವೀಲ್ ಮಾಡಿದೆ.
ಈ ಹಿಂದೆ “ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದ ಆಯಾನಾ ದೂರದರ್ಶನ ಚಿತ್ರದಲ್ಲಿ ನಾಯಕಿಯಾಗಿ ಪೃಥ್ವಿ ಅಂಬರ್ಗೆ ಜೋಡಿಯಾಗಿ ನಟಿಸಿದ್ದಾರೆ.
“ದೂರದರ್ಶನ’ದ ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, “ನಮ್ಮ ಸಿನಿಮಾಗೆ ನಾಯಕಿ ಪಾತ್ರಕ್ಕೆ ಆಡಿಷನ್ ಕರೆಯಲಾಗಿತ್ತು. 30 ರಿಂದ 40 ಮಂದಿ ಪಾಲ್ಗೊಂಡಿದ್ದ ಆಡಿಷನ್ ನಲ್ಲಿ ಆಯಾನಾ ಆಯ್ಕೆಯಾದರು. ಆಯಾನಾ ಮೈತ್ರಿ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ರಿಕ್ಷಾ ಡ್ರೈವರ್ ಮಗಳಾಗಿ, ಅಪ್ಪನ ಆಸೆಯಲ್ಲಿ ಬೆಳೆಯುವ ಹುಡುಗಿ ಪ್ರೀತಿಯಲ್ಲಿ ಬಿದ್ದಾಗ ಮುಂದೇನು ಆಗುತ್ತೇ ಎಂಬ ತಿರುವು ನೀಡುವ ಪಾತ್ರದಲ್ಲಿ ನಟಿಸಿದ್ದಾರೆ’ ಎಂದರು.
ಇದನ್ನೂ ಓದಿ:ನೆಗೆಟಿವ್ ಶೇಡ್ ನಲ್ಲಿ ಪಾಸಿಟಿವ್ ಮೆಸೇಜ್: ‘ವೆಡ್ಡಿಂಗ್ ಗಿಫ್ಟ್’ ಮೇಲೆ ಸೋನು ಗೌಡ ನಿರೀಕ್ಷೆ
ಉಗ್ರಂ ಮಂಜು, ಸುಂದರ್ ವೀಣಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಚಿತ್ರದಲ್ಲಿದೆ.
ಸಂಭಾಷಣೆ ಹಾಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ, ಹಲವು ಕಿರುಚಿತ್ರಗಳನ್ನು ನಿರ್ದೇಶನ ಮಾಡಿರುವ ಸುಕೇಶ್ ಶೆಟ್ಟಿ ಮೊದಲ ಬಾರಿಗೆ “ದೂರದರ್ಶನ’ ಸಿನಿಮಾ ಮೂಲಕ ಹಿರಿ ಪರದೆಗೆ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ನೈಜ ಘಟನೆ ಹಾಗೂ ಕಾಲ್ಪನಿಕತೆಯ ಕಥಾ ಹಂದರವನ್ನು ಹೊಂದಿರುವ ದೂರದರ್ಶನ ಚಿತ್ರದ ಚಿತ್ರೀಕರಣ ಮಂಗಳೂರು, ಪುತ್ತೂರು ಆರ್ಲಪದವಿನಲ್ಲಿ 38 ದಿನಗಳ ಕಾಲ ನಡೆದಿದೆ.
“ವಿಎಸ್ ಮೀಡಿಯಾ ಎಂರ್ಟಪ್ರೈಸಸ್’ ಬ್ಯಾನರ್ನಡಿ ರಾಜೇಶ್ ಭಟ್ ಸಿನಿಮಾಗೆ ಬಂಡವಾಳ ಹೂಡಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ನೂಸರ್ ಜವಾಬ್ದಾರಿಯನ್ನು ಉಗ್ರಂ ಮಂಜು ಹೊತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಛಾಯಾ ಗ್ರಹಣ, ನಂದೀಶ್ ಟಿ ಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.