ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!
ಆಸಕ್ತಿ ಕಳೆದುಕೊಂಡ ಹುದ್ದೆ ಆಕಾಂಕ್ಷಿ ಶಾಸಕರು
Team Udayavani, Jul 4, 2022, 7:25 AM IST
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡ ಲಾಗುತ್ತದೆ ಎನ್ನುವ ವದಂತಿ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿದ್ದರೂ ಸ್ಥಾನಾಕಾಂಕ್ಷಿಗಳು ಮಾತ್ರ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿ ನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ರಾಜ್ಯದಲ್ಲಿ ಮೇಲಿಂದ ಮೇಲೆ ಉಪ ಚುನಾವಣೆಗಳು ಮತ್ತಿತರ ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ.
ಈಗ ರಾಜ್ಯ ಸರಕಾರದ ಅವಧಿ 10 ತಿಂಗಳಷ್ಟೇ ಇರುವಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ರಾಷ್ಟ್ರಪತಿ ಚುನಾವಣೆ ನಡೆದ ಅನಂತರ ಆಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಚುನಾವಣೆ ಲೆಕ್ಕಾಚಾರ
ಪ್ರಸ್ತುತ ಬೊಮ್ಮಾಯಿ ಸಂಪುಟದಲ್ಲಿ ಐದು ಸಚಿವ ಸ್ಥಾನಗಳು ಖಾಲಿ ಇದ್ದು, ವಿಧಾನಸಭೆ ಚುನಾವಣೆ ಯನ್ನು ಗಮನದಲ್ಲಿ ಇರಿಸಿಕೊಂಡು ಜಾತಿ ಮತ್ತು ಪ್ರಾದೇಶಿಕತೆಯ ಲೆಕ್ಕಾಚಾರದಲ್ಲಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಮುಖ್ಯವಾಗಿ ಶಾಸಕ ಬಸನಗೌಡ ಯತ್ನಾಳ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲು ಕಾರಣರಲ್ಲಿ ಒಬ್ಬರಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಮತ್ತು ಕುಡಚಿ ಶಾಸಕ ಪಿ. ರಾಜೀವ್, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರನ್ನು ಜಾತಿ-ಪ್ರಾದೇಶಿಕತೆ ಆಧಾರದಲ್ಲಿ ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎಂಬ ಮಾತು ಕೇಳಿಬರುತ್ತಿದೆ.
ನಿರಾಸಕ್ತಿಗೇನು ಕಾರಣ?
ಸಚಿವ ಸ್ಥಾನಕ್ಕಾಗಿ ಇಷ್ಟು ದಿನ ನಾಯಕರ ಬೆನ್ನು ಬಿದ್ದಿದ್ದ ಬಹುತೇಕ ಶಾಸಕರು ಈಗ ಸಂಪುಟ ಸೇರಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆ ಹತ್ತಿರ ಇದೆ. ಇಷ್ಟು ಕಡಿಮೆ ಅವಧಿಯಲ್ಲಿ ಜನರ ಬೇಡಿಕೆಗಳಿಗೆ ಸ್ಪಂದಿಸಲು ಅವಕಾಶ ದೊರೆಯದೆ ಅದು ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಅಲ್ಲದೆ ಶಾಸಕರಾಗಿ ಚುನಾವಣೆ ಎದುರಿಸಿದರೆ ಜನರ ಅನುಕಂಪ ಗಳಿಸಲು ಅನುಕೂಲವಾಗಲಿದೆ. ಸಚಿವರಾದರೆ ಪಕ್ಷವು ಚುನಾವಣೆಯ ಸಂದರ್ಭ ಹೆಚ್ಚಿನ ಜವಾಬ್ದಾರಿ ವಹಿಸುವುದರಿಂದ ಕ್ಷೇತ್ರದ ಕಡೆಗೆ ಹೆಚ್ಚಿನ ಗಮನ ಕೊಡಲು ಆಗುವುದಿಲ್ಲ ಎಂಬ ಲೆಕ್ಕಾಚಾರದಲ್ಲಿ ಕೆಲವು ಶಾಸಕರು ಸಚಿವ ಸ್ಥಾನಕ್ಕೆ ಲಾಬಿ ಮಾಡುವುದನ್ನೇ ಕೈಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊರಟ್ಟಿಗೆ ಸಚಿವ ಸ್ಥಾನ?
ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಈ ಬಾರಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಅವರನ್ನು ಪ್ರಸ್ತುತ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಆದರೆ ಹೊರಟ್ಟಿ ಅವರು ತಮ್ಮನ್ನು ಮತ್ತೆ ಪರಿಷತ್ ಸಭಾಪತಿ ಯನ್ನಾಗಿ ಮುಂದುವರಿಸುವಂತೆ ಮಾತುಕತೆ ನಡೆಸಿಯೇ ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನಕ್ಕಿಂತ ಸಭಾಪತಿ ಸ್ಥಾನ ದೊರೆತರೆ ಮುಂದಿನ 6 ವರ್ಷ ಅಧಿಕಾರದಲ್ಲಿ ಇರಬಹುದು ಎಂಬ ಲೆಕ್ಕಾಚಾರದಲ್ಲಿ ಅವರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
-ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.