ಬಿಜೆಪಿ ವಕ್ತಾರ ಎಂ.ಜಿ. ಮಹೇಶ ಉಚ್ಚಾಟನೆಗೆ ಕರವೇ ಒತ್ತಾಯ
ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರ ಕುರಿತ ಹೇಳಿಕೆಗೆ ಕಿಡಿಕಿಡಿ
Team Udayavani, Jul 4, 2022, 4:02 PM IST
ಬೆಳಗಾವಿ: ಇಲ್ಲಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ಎಂ.ಜಿ. ಮಹೇಶ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ರವಿವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಅವರಿಗೆ ಮನವಿ ರವಾನಿಸಿದ ಕಾರ್ಯಕರ್ತರು, ಸುವರ್ಣ ವಿಧಾನಸೌಧ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ. ಇದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕೆನ್ನುವುದು ಉತ್ತರ ಕರ್ನಾಟಕದ ಜನತೆಯ ಆಶಯವಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗಾಗಿ ರಾಜ್ಯಮಟ್ಟದ ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಮಠಾಧಿಧೀಶರ ಎದುರು ಪ್ರಮಾಣ ಮಾಡಿದ್ದರು. ಆದರೆ ಇನ್ನೂವರೆಗೆ ಕಚೇರಿ ಸ್ಥಳಾಂತರಗೊಂಡಿಲ್ಲ ಎಂದು ದೂರಿದರು.
ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡಿದರೆ ಈ ಭಾಗದ ಅಭಿವೃದ್ಧಿ ಆಗುತ್ತದೆ ಎನ್ನುವುದು ತಪ್ಪು ಎಂದು ಹೇಳಿಕೆ ನೀಡುವ ಮೂಲಕ ಉತ್ತರ ಕರ್ನಾಟಕದ ಜನತೆಯ ಆಶೋತ್ತರಗಳಿಗೆ ಅವಮಾನಿಸಿದ್ದಾರೆ. ಅವರ ಹೇಳಿಕೆಯಿಂದ ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ ಸುವರ್ಣವಿಧಾನ ಸೌಧದ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ಈ ಭಾಗದ ಶಕ್ತಿ ಕೇಂದ್ರದ ಘನತೆ, ಗೌರವ ಹಾಳಾಗಿದ್ದು, ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರನ್ನು ಕೂಡಲೇ ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ನಿರ್ಧಾರ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ತಾವು ಕನಿಷ್ಠ ಮೂರು ತಿಂಗಳಿಗೊಮ್ಮೆ ಸುವರ್ಣ ವಿಧಾನಸೌಧದಲ್ಲಿ ಸಚಿವ ಸಂಪುಟದ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದರು. ಪದಾಧಿಕಾರಿಗಳಾದ ಮಹಾದೇವ ತಳವಾರ, ಸುರೇಶ ಗವನ್ನವರ, ಗಣೇಶ ರೋಖಡೆ, ದೇವೇಂದ್ರ ತಳವಾರ, ಸತೀಶ ಗುಡ್ಡದವರ, ವಿನಾಯಕ ಬೋವಿ, ಗೋಪಿ ರಾಠೊಡ, ಸತೀಶ ಗಾಡಿವಡ್ಡರ, ರಮೇಶ ಯರಗಣ್ಣವರ, ಅಭಿ ಅಗಸಗಿ, ಚೇತನ ಮಾಸ್ತಿಹೊಳಿ, ಮಹೇಶ ಶಿಗ್ಗಿಹಳ್ಳಿ, ವಾಸು ಬಸನಾಯ್ಕ, ಸಂತೋಷ ತೇಲಿಮನಿ, ಹೊಳೆಪ್ಪ ಸುಲಧಾಳ, ಪ್ರಕಾಶ ಲಮಾನಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.