ಮಳಖೇಡ ಮೂಲ ವೃಂದಾವನದ ಅಪಪ್ರಚಾರಕ್ಕೆ ಖಂಡನೆ
Team Udayavani, Jul 5, 2022, 4:34 PM IST
ವಿಜಯಪುರ: ಮಳಖೇಡದಲ್ಲಿರುವ ಮೂಲ ವೃಂದಾವನದ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡುತ್ತಿರುವುವುದು ನೋವಿನ ಸಂಗತಿ. ಈ ರೀತಿ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಬ್ರಾಹ್ಮಣ ಸಮಾಜದ ಗುರುಗಳು, ಮುಖಂಡರು ಪ್ರತಿಭಟನಾ ರ್ಯಾಲಿ ನಡೆಸಿದರು.
ನಗರದ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ರ್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ಸರ್ವಜ್ಞ ವಿದ್ಯಾವಿಹಾರ ಪೀಠದ ಕುಲಪತಿ ಪಂ| ಮಧ್ವಾಚಾರ್ಯ ಮೊಕಾಶಿ ಮಾತನಾಡಿ, ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ಉತ್ತರಾದಿ ಮಠದ ಯತಿಗಳಾದ ಜಯತೀರ್ಥರ ಮೂಲ ವೃಂದಾವನವಿದೆ. 650 ವರ್ಷಗಳಿಂದಲೂ ಅನೇಕ ಸನ್ಯಾಸಿಗಳು, ಹರಿದಾಸರು ಇವರು ಮಳಖೇಡದಲ್ಲಿಯೇ ಇರುವರೆಂದು ಕೊಂಡಾಡಿದ್ದಾರೆ. ಅನೇಕ ಸರ್ಕಾರಿ ದಾಖಲೆಗಳೂ ಇದನ್ನೇ ಸಾರಿವೆ. ಆದರೆ ವಿನಾಕಾರಣ ಕೆಲವರು ಈ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವುದು ಖಂಡನೀಯ ಎಂದರು.
ಪ್ರಸ್ತುತ ಕೆಲವರು ಈ ಮೂಲ ವೃಂದಾವನ ಮಳಖೇಡದಲ್ಲಿಲ್ಲ. ಆನೆಗುಂದಿ ತಾಲೂಕಿನ ನವ ವೃಂದಾವನದಲ್ಲಿರುವ ರಘುವರ್ಯ ತೀರ್ಥರ ವೃಂದಾವನವೇ ಜಯತೀರ್ಥರ ವೃಂದಾವನ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ವಿಚಾರ ಜಯತೀರ್ಥರ ಭಕ್ತ ವೃಂದಕ್ಕೆ ದೊಡ್ಡ ಆಘಾತವಾಗಿದೆ. ಈ ಬಗ್ಗೆ ಯಾವ ಗೊಂದಲವಿಲ್ಲದಿದ್ದರೂ ಸಹ ವಿನಾಕಾರಣ ಗೊಂದಲ ಸೃಷ್ಟಿಸಿ ಭಕ್ತರ ಮನಸ್ಸಿಗೆ ನೋವುಂಟು ಮಾಡುವ ಬೆಳವಣಿಗೆಗಳ ಮೇಲೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಪಂ| ಸಂಜೀವಾಚಾರ್ಯ ಮಧಭಾವಿ ಮಾತನಾಡಿದರು. ಪ್ರಮುಖರಾದ ಆನಂದ ಜೋಶಿ, ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಅರವಿಂದ ಕುಲಕರ್ಣಿ, ಕೃಷ್ಣಾಜಿ ಕುಲಕರ್ಣಿ, ಸು ಧೀಂದ್ರ ಕುಲಕರ್ಣಿ, ರಾಜಶ್ರೀ ಕುಲಕರ್ಣಿ, ಸಂದೀಪ ಅರ್ಜುಣಗಿ, ರಘೋತ್ತಮ ಅರ್ಜುಣಗಿ, ಗೋವಿಂದ ಜೋಶಿ ಸೇರಿದಂತೆ ಇತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.