ಜನರಿಂದ ಮರಾಠಿ ವಿದ್ಯಾಲಯ ಬಳಿ ದಿಢೀರ್‌ ರಸ್ತೆ ತಡೆ


Team Udayavani, Jul 5, 2022, 5:33 PM IST

18roadblock

ವಿಜಯಪುರ: ನಗರದಲ್ಲಿ ಹಾಳಾಗಿದ್ದ ಮನಗೂಳಿ ರಸ್ತೆ ದುರಸ್ತಿ ಕಾರ್ಯ ಮಂದಗತಿಯಲ್ಲಿ ಸಾಗಿರುವುದರಿಂದ ಸಂಚಾರಕ್ಕೆ ಸಮಸ್ಯೆಯಾಗಿದ್ದನ್ನು ವಿರೋಧಿಸಿ ಸಾರ್ವಜನಿಕರು ಮರಾಠಿ ವಿದ್ಯಾಲಯದ ಬಳಿ ರಸ್ತೆ ಸಂಚಾರ ತಡೆದು ದಿಢೀರ್‌ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಗ್ಗೆ 11ರ ವೇಳೆ ರಸ್ತೆಗಿಳಿದ ಮನಗೂಳಿ ರಸ್ತೆ ಮಾರ್ಗದ ವಿವಿಧ ಕಾಲೋನಿ ಜನರು, ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ ತ್ವರಿತಕ್ಕೆ ಆದೇಶ ನೀಡುವವರೆಗೂ ರಸ್ತೆ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು.

ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರಿಗೂ ಮಣಿಯಲಿಲ್ಲ. ಬದಲಾಗಿ ಸಂಬಂಧಿಸಿದ ಅಧಿಕಾರಿಗಳನ್ನೇ ಸ್ಥಳಕ್ಕೆ ಕರೆಸಿ ಕಾಮಗಾರಿ ಮುಗಿಸುವ ನಿಖರ ದಿನಾಂಕ ತಿಳಿಸುವಂತೆ ಆಗ್ರಹಿಸಿದರು.

ಸದರಿ ರಸ್ತೆಯನ್ನು ದುರಸ್ತಿ ನೆಪದಲ್ಲಿ ಅಗೆದು ಹಾಕಿ ಸುಮಾರು ಆರೇಳು ತಿಂಗಳಾಗಿದೆ. ಕಳೆದ ಕೆಲವು ತಿಂಗಳಿಂದ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಮತ್ತೂಂದೆಡೆ ರಸ್ತೆಯನ್ನು ಅಗೆದಿರುವ ಕಾರಣ ಧೂಳು ಆವರಿಸುತ್ತಿದ್ದು ರಸ್ತೆ ಎರಡೂ ಬದಿಯಲ್ಲಿರುವ ನಿವಾಸಿಗಳು ಕಂಗೆಟ್ಟಿದ್ದಾರೆ. ಈ ಮಾರ್ಗದ ಬಹುತೇಕ ಸಣ್ಣ ವ್ಯಾಪಾರಿಗಳು ಧೂಳಿನ ಕಾರಣದಿಂದ ಅಂಗಡಿಗಳನ್ನೇ ಸಂಪೂರ್ಣ ಬಂದ್‌ ಮಾಡಿದ್ದು ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ದೂರಿದರು.

ನಿವಾಸಿಗಳ ಪರವಾಗಿ ಮಾತನಾಡಿದ ಸತೀಶ ಪಾಟೀಲ, ನಗರದ ಮನಗೂಳಿ ರಸ್ತೆ ನಗರದ ಪ್ರಮುಖ ರಸ್ತೆಯಾಗಿದ್ದು ದುರಸ್ತಿ ನೆಪದಲ್ಲಿ ಕಾಮಗಾರಿ ಕೈಗೆತ್ತಿಕೊಂಡರೂ ಹಲವು ತಿಂಗಳಿಂದ ಸಂಪೂರ್ಣ ಸ್ಥಗಿತಗೊಂಡಿದೆ. ಜಿಪಂ ಸಿಇಒ, ಜಿಲ್ಲಾಧಿಕಾರಿ, ಸಚಿವರು, ಶಾಸಕರು, ಸಂಸದರು ಎಲ್ಲರೂ ಇದೇ ಮಾರ್ಗವಾಗಿ ವಾಹನಗಳಲ್ಲಿ ಓಡಾಡುತ್ತಿದ್ದರೂ ಜನರ ಸಮಸ್ಯೆ ಆಲಿಸುತ್ತಿಲ್ಲ. ಸ್ಥಗಿತಗೊಂಡಿರುವ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಂಡಿಲ್ಲ ಎಂದು ವಾಗ್ಧಾಳಿ ನಡೆಸಿದರು.

ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವ ಕಾರಣ ಇಡಿ ಪ್ರದೇಶದಲ್ಲಿ ವಾಹನಗಳಿಂದಾಗಿ ಧೂಳು ವ್ಯಾಪಕವಾಗಿದೆ ಹರಡುತ್ತಿದೆ. ಸಂಚಾರವೂ ಅವ್ಯವಸ್ಥೆಯಾಗಿದೆ. ಪರಿಣಾಮ ಈ ಮಾರ್ಗದ ಪರಿಸರದಲ್ಲಿರುವ ನಿವಾಸಿಗಳು ಧೂಳಿನಿಂದ ಹಾಗೂ ಹದಗೆಟ್ಟ ರಸ್ತೆಯಿಂದ ಕಂಗೆಟ್ಟಿದ್ದಾರೆ. ಹೀಗಾಗಿ ತಕ್ಷಣವೇ ರಸ್ತೆ ಕಾಮಗಾರಿ ಆರಂಭಿಸಿ ತುರ್ತಾಗಿ ಮುಗಿಸಬೇಕು. ಈ ಭರವಸೆ ನೀಡಲು ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

byndoor

Udupi: ಬೈಕ್‌ ಢಿಕ್ಕಿ; ಸೈಕಲ್‌ ಸವಾರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.