ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್ ಜಾನ್ಸನ್
ಬೋರಿಸ್‌ಗೆ ಬೈ ಎಂದ 11 ಸಚಿವರು
Team Udayavani, Jul 7, 2022, 7:15 AM IST
ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸಂಪುಟಕ್ಕೆ ಬುಧವಾರ ಹಲವರು ರಾಜೀನಾಮೆ ನೀಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಒಟ್ಟು 11 ಮಂದಿ ಹುದ್ದೆ ತ್ಯಜಿಸಿದ್ದಾರೆ. ಮಕ್ಕಳು ಮತ್ತು ಕುಟುಂಬ ಖಾತೆ ಸಚಿವ ವಿಲ್ ಕ್ವಿನ್ಸ್, ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಲಾರಾ ಟ್ರಾಟ್, ಶಿಕ್ಷಣ ಸಚಿವ ರಾಬಿನ್ ವಾಕರ್ ಸಂಪುಟದಿಂದ ಹೊರಬಂದವರಲ್ಲಿ ಪ್ರಮುಖರು.
ಮಂಗಳವಾರ ವಿತ್ತ ಸಚಿವ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿಯವರ ಅಳಿಯ ರಿಷಿ ಸುನಕ್, ಪಾಕಿಸ್ತಾನ ಮೂಲದ ಆರೋಗ್ಯ ಸಚಿವ ಸಾಜಿದ್ ನವೀದ್ ಸೇರಿದಂತೆ ಎಂಟು ಮಂದಿ ಸಚಿವರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪ್ರಧಾನಿ ಬೋರಿಸ್ ಜಾನ್ಸನ್ ನೇತೃತ್ವದ ಸರ್ಕಾರದ ಭವಿಷ್ಯ ಹೊಯ್ದಾಡುವಂತಾಗಿದೆ. ಸುನಕ್ ರಾಜೀನಾಮೆಯಿಂದ ತೆರವಾಗಿರುವ ವಿತ್ತ ಸಚಿವ ಸ್ಥಾನಕ್ಕೆ ಇರಾನ್ ಮೂಲದ ನದೀಂ ಜಹಾವಿ ಅವರನ್ನು ನೇಮಿಸಲಾಗಿದೆ.
ರಾಜೀನಾಮೆ ಇಲ್ಲ: ಹಲವು ಸಚಿವರು ಹುದ್ದೆಯಿಂದ ನಿರ್ಗಮಿಸಿದ್ದರೂ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸ್ಪಷ್ಟಪಡಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಕೊರೊನಾ ಲಾಕ್‌ಡೌನ್‌ನಲ್ಲಿ ಪಾರ್ಟಿ ಮಾಡಿದ್ದರ ವಿರುದ್ಧ ಮೇನಲ್ಲಿ ಜಾನ್ಸನ್ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಸೋಲು ಅನುಭವಿಸಿತ್ತು. ಹೀಗಾಗಿ, ಮುಂದಿನ ಒಂದು ವರ್ಷ ಕಾಲ ಅವರ ವಿರುದ್ಧ ಮತ್ತೂಂದು ಬಾರಿ ಗೊತ್ತುವಳಿ ಮಂಡಿಸುವಂತೆ ಇಲ್ಲ.
ಮುಂದಿನ ಪ್ರಧಾನಿ ರಿಷಿ ?
ಒಂದು ವೇಳೆ ಹಾಲಿ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದರೆ ರಿಷಿ ಸುನಕ್‌ರನ್ನು ಆ ಹುದ್ದೆಗೆ ನೇಮಕ ಮಾಡುವ ಸಾಧ್ಯತೆಗಳು ಇವೆ. ಇದೇ ವೇಳೆ, ಸುನಕ್ ತಮ್ಮ ರಾಜೀನಾಮೆ ಪತ್ರದಲ್ಲಿ ಬೋರಿಸ್ ಜಾನ್ಸನ್ ನಾಯಕತ್ವದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶ ಹಲವು ಸವಾಲುಗಳನ್ನು ಎದುರಿಸುತ್ತಿದೆ. ನಾಗರಿಕರಿಗೆ ಕಡಿಮೆ ಪ್ರಮಾಣದಲ್ಲಿ ತೆರಿಗೆ ವಿಧಿಸುವುದು ಮತ್ತು ಹೆಚ್ಚಿನ ಪ್ರಮಾಣದ ಅಭಿವೃದ್ಧಿ ಸಾಧಿಸಲು ಬಯಸುತ್ತೇನೆ. ಈ ಉದ್ದೇಶ ಈಡೇರಲು ಒಂದು ಸದೃಢ ಮತ್ತು ಸಮರ್ಥ ಸರ್ಕಾರದ ಅಗತ್ಯ ಇದೆ. ಈ ಸತ್ಯವನ್ನು ಕೇಳಲು ದೇಶದ ಜನರು ಕಾತರರಾಗಿದ್ದಾರೆ’ ಎಂದು ರಾಜೀನಾಮೆ ಪತ್ರದಲ್ಲಿ ಸುನಕ್ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.