ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ
Team Udayavani, Jul 7, 2022, 1:31 PM IST
ಬೆಂಗಳೂರು: ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಈಗ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಆ.15ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಕಾಂಗ್ರೆಸ್ ನಾಯಕರು ಮತ್ತು 75 ಸಾವಿರದಿಂದ ಒಂದು ಲಕ್ಷ ಕಾರ್ಯಕರ್ತರು ಬೆಂಗಳೂರಲ್ಲಿ ಮೆರವಣಿಗೆ ಮಾಡಲಿದ್ದಾರೆ ಎಂದರು.
ಇದರ ಜತೆಗೆ 75 ಕಿ.ಮೀ.ಪಾದಯಾತ್ರೆ ಮಾಡಲು ಹೇಳಿದ್ದಾರೆ. ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ಗುರುವಾರ ಸಭೆ ಕರೆಯಲಾಗಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ:ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ
ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.