ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ
ಜೇ-ಬಾಕ್ ಚಾಂಗ್ ನಿಯೋಗದೊಂದಿಗೆ ದ್ವಿಪಕ್ಷೀಯ ಮಾತುಕತೆ
Team Udayavani, Jul 7, 2022, 1:16 PM IST
ಬೆಂಗಳೂರು : ಇಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ ವಲಯದಲ್ಲಿ ಮುಂಚೂಣಿಯಲ್ಲಿರುವ ಕೊರಿಯಾ ಗಣರಾಜ್ಯ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯಗಳ ನಡುವಣ ಬಾಂಧವ್ಯ ಬಲಗೊಳ್ಳುವುದರಿಂದ ಎರಡೂ ಕಡೆ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.
ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ಕೊರಿಯಾ ಗಣರಾಜ್ಯದ ರಾಯಭಾರಿ ಜೇ-ಬಾಕ್ ಚಾಂಗ್ (Jae-bok Chang) ಅವರ ನೇತೃತ್ವದ ನಿಯೋಗದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಕರ್ನಾಟಕ ರಾಜ್ಯವು ಕೊರಿಯಾದೊಂದಿಗೆ ಹಲವು ದಶಕಗಳ ನಂಟು ಹೊಂದಿರುವುದು ಹೆಮ್ಮೆಯ ವಿಷಯ. ಕೊರಿಯಾ ಗಣರಾಜ್ಯವು ನೂತನ ತಂತ್ರಜ್ಞಾನಗಳ ಬಳಕೆ ಮಾಡಿಕೊಂಡು ಅತ್ಯುತ್ತಮ ಉತ್ಪನ್ನಗಳನ್ನು ತಯಾರಿಸುತ್ತಿರುವುದು ಶ್ಲಾಘನೀಯ. ಭಾರತ ದೇಶ ಹಾಗೂ ಕರ್ನಾಟಕ ರಾಜ್ಯ ಇಂದು ಅತ್ಯಂತ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿವೆ. ಅತ್ಯುತ್ತಮ ಕುಶಲ ಮಾನವ ಸಂಪನ್ಮೂಲ ಹಾಗೂ ಕಾರ್ಮಿಕರ ಲಭ್ಯತೆ ಮತ್ತಿತರ ಅನುಕೂಲಗಳು ಭಾರತವನ್ನು ಹೂಡಿಕೆದಾರರ ಆಕರ್ಷಣೆಯ ತಾಣವಾಗಿಸಿದೆ. ಅದರಲ್ಲೂ ಕರ್ನಾಟಕ ರಾಜ್ಯ ದೇಶದ ಶೇ. 38 ರಷ್ಟು ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ತಂತ್ರಜ್ಞಾನ ಆಧಾರಿತ ಉದ್ಯಮಿಗಳ ನೆಲೆಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣ ಕೊರಿಯಾ ಕೈಜೋಡಿಸಿದಲ್ಲಿ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಇಬ್ಬರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ನವೆಂಬರ್ನಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿಯೂ ಭಾಗವಹಿಸುವಂತೆ ಮುಖ್ಯಮಂತ್ರಿಗಳು ಕೊರಿಯಾದ ರಾಯಭಾರಿಯವರಿಗೆ ಆಹ್ವಾನ ನೀಡಿದರು. ಇದಕ್ಕೂ ಮುನ್ನ ಮಾತನಾಡಿದ ಕೊರಿಯಾದ ರಾಯಭಾರಿ ಜೇ-ಬಾಕ್ ಚಾಂಗ್ ಅವರು ಕೊರಿಯಾ ಗಣರಾಜ್ಯವು ಕರ್ನಾಟಕದೊಂದಿಗೆ ಆರ್ಥಿಕ ಹಾಗೂ ವಾಣಿಜ್ಯ ಸಂಬಂಧಗಳನ್ನು ವಿಸ್ತರಿಸಲು ಉತ್ಸುಕವಾಗಿದ್ದು, ಹಲವು ಸ್ಟಾರ್ಟಪ್ ಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿವೆ ಎಂದು ತಿಳಿಸಿದರು. ರಾಜ್ಯದಲ್ಲಿ ಈಗಾಗಲೇ 40 ಕ್ಕೂ ಹೆಚ್ಚು ಕೊರಿಯನ್ ಕಂಪೆನಿಗಳು ನೆಲೆಯಾಗಿದೆ. ಕೊರಿಯಾ ರಾಯಭಾರ ಕಚೇರಿಯು ಬೆಂಗಳೂರಿನಲ್ಲಿ “ಕೊರಿಯಾ ಆನ್ ದ ಮೂವ್” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೊತೆಗೆ ಆರ್ಥಿಕ ಸಹಕಾರದ ಕುರಿತು ಆಯೋಜಿಸಿದ ಕಾರ್ಯಕ್ರಮವೂ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ, ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.