ಗುತ್ತಿಗೆ – ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ : ಸಚಿವ ಡಾ.ಕೆ.ಸುಧಾಕರ್
ಆರೋಗ್ಯ ವಿಮೆ ವಿಸ್ತರಣೆ
Team Udayavani, Jul 7, 2022, 5:09 PM IST
ಬೆಂಗಳೂರು : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ – ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು. ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.
ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಖಾಯಂ ನೌಕರರಿಗೆ ಕೊಡುವಷ್ಟೇ ವೇತನವನ್ನು ನಮಗೂ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ 49 ಕಾರ್ಯಕ್ರಮಗಳನ್ನು ನಿರ್ದಿಷ್ಟ ಸಮಯದ ತನಕ ಮಾಡಲಿದೆ. ಹೀಗಾಗಿ ಅವರನ್ನು ಖಾಯಂ ನೌಕರರನ್ನಾಗಿ ಮಾಡಿಕೊಳ್ಳಲು ಅಡಚಣೆಗಳಿವೆ. ಅಷ್ಟೇ ಅಲ್ಲದೆ, ಖಾಯಂ ನೌಕರರಂತೆ ಸಮಾನ ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ಆದರೆ ಈಗಿರುವ ವೇತನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ :ನಾನು ಟ್ವೀಟ್ ಮಾಡುವುದೆಲ್ಲವೂ ನನ್ನ ವೈಯಕ್ತಿಕ ಅಭಿಪ್ರಾಯ : ಶಶಿ ತರೂರ್
ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಆರೋಗ್ಯ ವಿಮೆ ವಿಸ್ತರಣೆ, 10 ದಿನಗಳ ವೇತನ ಸಹಿತ ರಜೆಯ ಬೇಡಿಕೆಗಳನ್ನು ಇಟ್ಟಿದ್ದಾರೆ. ಇದಕ್ಕೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ. ಪ್ರತಿಭಟನಾ ನಿರತ ನೌಕಕರು ಕೇಳಿರುವ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುವ ಪ್ರಮಾಣಿಕ ಪ್ರಯತ್ನ ಮಾಡಲಿದ್ದೇವೆ. ಸರ್ಕಾರ ಅವರ ಪರವಾಗಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ಆರೋಗ್ಯ ವ್ಯವಸ್ಥೆಯ ಬಗ್ಗೆ ಜನರು ಬಹಳ ವಿಶ್ವಾಸ ಇಟ್ಟಿದ್ದಾರೆ. ಕೇವಲ ಮೂಲಭೂತ ಸೌಲಭ್ಯಗಳಿಂದ ಮಾತ್ರ ಜನರಿಗೆ ವಿಶ್ವಾಸ ಬರುವುದಿಲ್ಲ. ಬದಲಾಗಿ ಇಂತಹ ನೌಕರರಿಂದ ಆರೋಗ್ಯ ಸೇವೆಗೆ ಉತ್ತಮ ಹೆಸರು ಬಂದಿದೆ. ಅವರಿಗೆ ನೋವು ಕೊಟ್ಟು ನಾವು ಮುಂದುವರಿಯುವುದು ಅಸಾಧ್ಯ. ಕೆಲವು ಬೇಡಿಕೆ ಈಡೇರಿಸಲು ಕಾನೂನಾತ್ಮಕ, ತಾಂತ್ರಿಕ ತೊಡಕುಗಳಿವೆ. ಇವೆಲ್ಲವನ್ನೂ ಸಮರ್ಪಕವಾಗಿ ನಿಭಾಯಿಸಿ, ಸಾಧ್ಯವಿರುವ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ. ದೇಶದಲ್ಲೇ ಆರೋಗ್ಯ ಸೇವೆ ನೀಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅದಕ್ಕೆ ಪೂರಕವಾಗಿ ಕೆಲಸ ನಡೆಯಬೇಕು. ನೌಕರರು ಮುಷ್ಕರ ಕೈ ಬಿಟ್ಟು ಶೀಘ್ರದಲ್ಲೇ ಸೇವೆಗೆ ಹಿಂದಿರುಗಬೇಕು ಎಂದು ಸಚಿವರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.