ಹೊಸಪೇಟೆ: ತುಂಗಭದಾ ಜಲಾಶಯದ ಒಳಹರಿವು ದ್ವಿಗುಣ
7 ದಿನದಲ್ಲಿ 13 ಟಿಎಂಸಿಗೂ ಆಧಿಕ ನೀರು ಸಂಗ್ರಹ
Team Udayavani, Jul 7, 2022, 6:46 PM IST
Hosapete, Tungabhadra, dam, water ,ಹೊಸಪೇಟೆ, ತುಂಗಭದಾ, ಜಲಾಶಯ, ಒಳಹರಿವು, ದ್ವಿಗುಣ,
ಹೊಸಪೇಟೆ: ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಗುರುವಾರ 60 ಸಾವಿರ ಕ್ಯೂಸೆಕ್ಸ್ ಗೂ ಆಧಿಕ ನೀರು ಜಲಾಶಯಕ್ಕೆ ಹರಿದು ಬಂದಿದೆ.
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಆಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ನೀರಿನ ಮಟ್ಟ ಗರಿಷ್ಠ 1633 ಅಡಿ, ಇಂದಿನ ಮಟ್ಟ1618.87 ಅಡಿ, ಒಳ ಹರಿವು ೬೦೯೪೧ ಕ್ಯೂಸೆಕ್ಸ್, ಸಂಗ್ರಹ 58.212 ಟಿಎಂಸಿ ಇದೆ. ಕಳೆದ ಜು.೧ಕ್ಕೆ ಕೇವಲ 8000 ಸಾವಿರ ಕ್ಯೂಸೆಕ್ಸ್ ಆಧಿಕ ನೀರು ಜಲಾಶಯಕ್ಕೆ ಹರಿದು ಬಂದಿತ್ತು. ಕ್ರಮೇಣ ದಿನೇ,ದಿನೇ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡು ಇದೀಗ ೬೦ ಸಾವಿರ ಕ್ಯೂಸೆಕ್ಸ್ ಗೂ ಆಧಿಕ ನೀರು ಜಲಾಶಯಕ್ಕೆ ಹರಿದು ಬಂದಿದೆ. ಕೇವಲ ಏಳು ದಿನದಲ್ಲಿ13 ಟಿಎಂಸಿಗೂ ಆಧಿಕ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ.
ಶಿವಮೊಗ್ಗದಲ್ಲಿ ಮಳೆ:ತುಂಗಭದ್ರಾ ನದಿಗೆ ಹೆಚ್ಚುವರಿ ನೀರು
ವಿಜಯನಗರ ಜಿಲ್ಲಾಡಳಿತದಿಂದ ಹೈಅಲರ್ಟ್
ಹೊಸಪೇಟೆ: ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಳೆ ಸುರಿಯುತ್ತಿದೆ. ತುಂಗಭದ್ರಾ ನದಿಗೆ ಅತಿ ಹೆಚ್ಚು ನೀರು ಹರಿಬಿಡುವ ಸಾಧ್ಯತೆ ಇರುವುದರಿಂದ ಅಗತ್ಯ ಮುಂಜಾಗ್ರತ ಕ್ರಮಗಳನ್ನು ವಿಜಯನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದ್ದಾರೆ.
ತುಂಗ ಜಲಾಶಯದಿಂದ 59446 ಕ್ಯೂಸೆಕ್ಸ್ ನೀರು ನದಿಗೆ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶ ಸೇರಿದಂತೆ ಕೆರೆ, ನದಿ ತೀರಕ್ಕೆ ಸಾರ್ವಜನಿಕರು ಹೋಗದಂತೆ ಜಾಗೃತೆ ವಹಿಸಲಾಗಿದೆ.
ಮೀನುಗಾರರು ನದಿಗೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯ ನಿರ್ವಹಣೆ. ವಿವಿಧ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು (ನದಿ ಪಾತ್ರದ ಗ್ರಾಮ ಲೆಕ್ಕಿಗರು) ನೇಮಕಮಾಡಲಾಗಿದೆ. ಅವರು ಸದಾ ಜಾಗೃತರಾಗಿರುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ನದಿ ತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲ್ಲೂಕುಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲು ಸಿದ್ಧತೆ ಮಾಡಿಕೊಂಡಿದೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿ 08394-295655 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡುವಂತೆ ಅವರು ಸೂಚಿಸಿದ್ದಾರೆ.
ಜಲಾಶಯ ಭರ್ತಿಗೆ ಬೇಕಿದೆ 55 ಟಎಂಸಿ ನೀರು
ಜಲಾಶಯದ ಸಂಗ್ರಹ ಸಾಮಾರ್ಥ್ಯ ಗರಿಷ್ಠ 103 ಟಿಎಂಸಿ ಇದೆ. ಇದೀಗ ಜಲಾಶಯದಲ್ಲಿ 58 ಟಿಎಂಸಿಗೂ ಆಧಿಕ ನೀರು ಸಂಗ್ರಹವಿದೆ. ಜಲಾಶಯದ ಭರ್ತಿಗೆ ಒಟ್ಟು23 ಅಡಿ ಬಾಕಿಯಿದ್ದರೆ, ಇನ್ನೂ 55 ಟಿಎಂಸಿ ಯಷ್ಟು ನೀರು ಜಲಾಶಯಕ್ಕೆ ಹರಿದು ಬಂದು ಸಂಗ್ರಹವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.