ಸಮಾಜಮುಖಿ ಕಾರ್ಯವಷ್ಟೇ ಶಾಶ್ವತ: ಪೇಜಾವರ ಶ್ರೀ
Team Udayavani, Jul 7, 2022, 9:07 PM IST
ತುಮಕೂರು: ನಾವು ಭೂಮಿಗೆ ಬರುವಾಗ ಏನನ್ನೂ ತರುವುದಿಲ್ಲ ಮತ್ತು ಹೋಗುವಾಗ ಏನನ್ನೂ ಒಯ್ಯುವುದಿಲ್ಲ. ಭಗವಂತನೇ ನಮಗೆ ಎಲ್ಲವನ್ನೂ ನೀಡುತ್ತಾನೆ. ಜೀವನದಲ್ಲಿ ಮಾಡಿದ ಸಮಾಜಮುಖೀ ಕಾರ್ಯಗಳು ಮಾತ್ರವೇ ಶಾಶ್ವತವಾಗಿರುತ್ತವೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.
ನಗರದ ಕೆ. ಆರ್. ಬಡಾವಣೆಯಲ್ಲಿರುವ ಶ್ರೀಕೃಷ್ಣ ಮಂದಿರದ ನವೀಕೃತ ಕಟ್ಟಡ ಹಾಗೂ ಲಿಫ್ಟ್ ಉದ್ಘಾಟನೆಯನ್ನು ಗುರುವಾರ ನೆರವೇರಿಸಿದ ಬಳಿಕ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಇಡೀ ಜಗತ್ತನ್ನು ಒಂದು ಅಶ್ವತ್ಥ ವೃಕ್ಷಕ್ಕೆ ಹೋಲಿಸಲಾಗಿದೆ. ಆ ವೃಕ್ಷದ ರೆಂಬೆ, ಕೊಂಬೆಗಳು ಆಕಾಶದೆತ್ತರದಲ್ಲಿದ್ದರೂ ಅವುಗಳಿಗೆ ಬೇಕಾದ ಆಹಾರವನ್ನು ಬುಡದಲ್ಲಿಯೇ ನೀಡಬೇಕು. ನಾವು ಕೂಡ ಎಷ್ಟೇ ಎತ್ತರಕ್ಕೆ ಬೆಳೆದರೂ ವೃಕ್ಷದ ಬುಡದಂತಿರುವ ಭಗವಂತನಿಗೆ ಎಲ್ಲವನ್ನು ಅರ್ಪಿಸಿಕೊಂಡರೆ, ಆತ ನಮಗೆ ಹೂವು, ಹಣ್ಣು, ಚಿಗುರಿನ ರೂಪದಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸುತ್ತಾನೆ ಎಂದರು.
ಟೂಡಾ ಅಧ್ಯಕ್ಷ ಎಚ್. ಜಿ. ಚಂದ್ರಶೇಖರ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, 12 ವರ್ಷಗಳ ಹಿಂದೆ ಹಿರಿಯ ಶ್ರೀಗಳಾದ ಶ್ರೀವಿಶ್ವೇಶ ತೀರ್ಥರ ಮಾರ್ಗದರ್ಶನದಂತೆ ಶ್ರೀಕೃಷ್ಣನ ಪ್ರತಿಷ್ಠಾಪನೆಯಾಗಿತ್ತು. ಈಗ ಮಂದಿರದ ಮೇಲ್ಭಾಗದಲ್ಲಿ ನೂತನ ಮಂದಿರ ನಿರ್ಮಾಣ ಮಾಡಿ, ಲಿಫ್ಟ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಗೌರವ ಸಲಹೆಗಾರ ಗೋಪಾಲ ರಾವ್, ಅಧ್ಯಕ್ಷ ಶ್ರೀನಿವಾಸ್ ಹತ್ವಾರ್, ಜಿ. ಕೆ. ಶ್ರೀನಿವಾಸ್, ಕಾರ್ಯದರ್ಶಿ ಸೂರ್ಯನಾರಾಯಣ ರಾವ್, ನಾಗರಾಜ ಧನ್ಯ, ವ್ಯವಸ್ಥಾಪಕ ಜನಾರ್ದನ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀಕೃಷ್ಣ ಮೂರ್ತಿಗೆ ತೀರ್ಥಹಳ್ಳಿಯ ಶ್ರೀರಘುವರೇಂದ್ರ ತೀರ್ಥ ಶ್ರೀಗಳಿಂದ ತಪ್ತ ಮುದ್ರಾಧಾರಣೆ ಜರಗಿತು.
ಹೆಗ್ಗಡೆ ಸೇವೆಗೆ ಸಂದ ರಾಜ್ಯಸಭೆ ಸದಸ್ಯತ್ವ :
ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಶೈಕ್ಷಣಿಕ, ಆಧ್ಯಾತ್ಮಿಕ ಹಾಗೂ ಅರ್ಥಿಕ ಸೇವೆಯನ್ನು ಪರಿಗಣಿಸಿ, ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ಅವರ ಸೇವೆ ರಾಷ್ಟ್ರಕ್ಕೆ ಸಲ್ಲಿಕೆಯಾಗುವಂತೆ ಮಾಡಿದ್ದಾರೆ ಎಂದು ಪೇಜಾವರ ಶ್ರೀಗಳು ತಿಳಿಸಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕರ್ನಾಟಕದಿಂದ ಹೋಗಿರುವ ಶಿಲೆಯಿಂದ ರಾಮಮಂದಿರದ ಪೀಠದ ಕಾಮಗಾರಿ ಆರಂಭಗೊಂಡಿದೆ. ಮುಂದಿನ ಉತ್ತರಾಯಣ ಪುಣ್ಯಕಾಲದ ವೇಳೆ ಗರ್ಭಗುಡಿಯ ಕೆಲಸ ಆರಂಭಗೊಳ್ಳಲಿದೆ. ಇದುವರೆಗೂ ಭೂಮಿ ಗುರುತಿಸುವುದೇ ದೊಡ್ಡ ಜವಾಬ್ದಾರಿಯಾಗಿತ್ತು ಎಂದರು.
ಹಿರಿಯ ಶ್ರೀಗಳು ಶೈಕ್ಷಣಿಕ, ಧಾರ್ಮಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಅದನ್ನು ನನಸು ಮಾಡುವ ದೃಷ್ಟಿಯಿಂದ ಒಂದನೇ ತರಗತಿಯಿಂದ ಪದವಿವರೆಗಿನ ಶಿಕ್ಷಣ ಸಂಸ್ಥೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಜತೆಗೆ 100 ಬೆಡ್‌ಗಳ ಉಚಿತ ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.