ಇನ್ನು ಹೊಸ ಬಡಾವಣೆ ನಿರ್ಮಿಸದಿರಲು ಗೃಹ ಮಂಡಳಿ ನಿರ್ಧಾರ


Team Udayavani, Jul 8, 2022, 6:12 AM IST

ಇನ್ನು ಹೊಸ ಬಡಾವಣೆ ನಿರ್ಮಿಸದಿರಲು ಗೃಹ ಮಂಡಳಿ ನಿರ್ಧಾರ

ಬೆಂಗಳೂರು: ಭೂ ಸ್ವಾಧೀನ ವೆಚ್ಚ ದುಬಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ಮುಂದೆ ಹೊಸ ಬಡಾವಣೆ ನಿರ್ಮಾಣ ಮಾಡದಿರಲು ಕರ್ನಾಟಕ ಗೃಹ ಮಂಡಳಿ ತೀರ್ಮಾನಿಸಿದೆ.

ಬಡಾವಣೆ ನಿರ್ಮಾಣಕ್ಕೆ ಅಗತ್ಯ ಜಮೀನು ಸಿಗುತ್ತಿಲ್ಲ. ಜತೆಗೆ ಭೂಮಿ ದರ ಹೆಚ್ಚಳಗೊಂಡಿದೆ. ಹೀಗಾಗಿ, ಗೃಹ ಮಂಡಳಿ ವತಿಯಿಂದ ಬಡಾವಣೆ ರಚನೆ ಕಷ್ಟ. ಆದರೆ ಕನಿಷ್ಠ 50 ಎಕರೆ  ಜಮೀನು ಇರುವ ಮಾಲಕರು ಮುಂದೆ ಬಂದರೆ ಖಾಸಗಿ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ನಗರ ಪ್ರದೇಶದಲ್ಲಿ ಶೇ.50:50, ಗ್ರಾಮೀಣ ಭಾಗದಲ್ಲಿ ಶೇ. 60:40 ಆಧಾರದಲ್ಲಿ ಬಡಾವಣೆ ನಿರ್ಮಿಸಲಾಗುವುದು ಎಂದು ಹೇಳಿದರು.

ಈ ಹಿಂದೆ ಗೃಹ ಮಂಡಳಿ ರಚನೆ ಮಾಡಿದ್ದ ಬಡಾವಣೆಗಳಲ್ಲಿ 6,015 ನಿವೇಶಗಳನ್ನು  ಮೂರು  ತಿಂಗಳಲ್ಲಿ ವಿತರಣೆಗೆ ಸಮಯ ನಿಗದಿ ಮಾಡಲಾಗಿದೆ. ಮೈಸೂರು, ಬಳ್ಳಾರಿ, ವಿಜಯಪುರ, ಗದಗ, ನೆಲಮಂಗಲ ಸೇರಿ ರಾಜ್ಯದ ವಿವಿಧೆಡೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವವರಿಗೆ ಲಾಟರಿ ಮೂಲಕ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

1,967 ಮನೆ ಹಂಚಿಕೆ:

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆಯಡಿ 48 ಸಾವಿರ ಮನೆಗಳ ನಿರ್ಮಾಣ ಭರದಿಂದ ಸಾಗಿದ್ದು, 1,967 ಮನೆಗಳನ್ನು  ಈ ತಿಂಗಳಲ್ಲಿ  ಹಂಚಿಕೆ ಮಾಡಲಾಗುವುದು. ಈ ವರ್ಷದಲ್ಲಿ 20 ಸಾವಿರ ಮನೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಬಲವಂತದ ಭೂಸ್ವಾಧೀನ ಇಲ್ಲ; ಸಚಿವ ನಿರಾಣಿ :

ಬೆಂಗಳೂರು: ಯಾವುದೇ ಕಾರಣಕ್ಕೂ ಕೈಗಾರಿಕೆ ಉದ್ದೇಶಕ್ಕೆ ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ.  ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ರೈತರಿಗೆ ಭರವಸೆ ನೀಡಿದರು. ಗುರುವಾರ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ  ಅವರು ಈ ವಿಷಯ ತಿಳಿಸಿದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.