ಶಿಕ್ಷಣ ವಂಚಿತ ಮಕ್ಕಳು: ಸರಕಾರ ಗಂಭೀರವಾಗಿ ಪರಿಗಣಿಸಲಿ
Team Udayavani, Jul 8, 2022, 6:10 AM IST
ರಾಜ್ಯದಲ್ಲಿ ಹದಿನಾಲ್ಕು ವರ್ಷದೊಳಗಿನ 10 ಲಕ್ಷ ಮಕ್ಕಳು ಶಾಲೆ ಹಾಗೂ ಅಂಗನವಾಡಿಗಳಿಂದ ಹೊರಗುಳಿದಿರುವ ಸಮೀಕ್ಷಾ ವರದಿ ನಿಜಕ್ಕೂ ಆಘಾತಕಾರಿ. ಕೊರೊನಾ ಹಾಗೂ ವಲಸೆ ಹಿನ್ನೆಲೆಯಲ್ಲಿ ಮಕ್ಕಳು ಶಾಲೆ ಹಾಗೂ ಅಂಗನವಾಡಿಗಳಿಂದ ಹೊರಗೆ ಉಳಿದಿದ್ದಾರೆ ಎಂದರೆ ಅಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾದಂತೆ ಎಂಬ ಅಂಶ ಗಮನಿಸಬೇಕಾದ ಸಂಗತಿ. ರಾಜ್ಯ ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಏಕೆಂದರೆ ಇಷ್ಟೂ ಲಕ್ಷ ಮಕ್ಕಳು ಬಡ ಹಾಗೂ ಮಧ್ಯಮವರ್ಗದವರೇ ಆಗಿರುತ್ತಾರೆ. ಕಾರ್ಮಿಕರು ಹಾಗೂ ಕೃಷಿ ಕುಟುಂಬಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಇರಬಹುದು.
ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣದಿಂದ ಪ್ರಾರಂಭಿಕ ಹಂತದಲ್ಲೇ ಮಕ್ಕಳು ಹೊರಗೆ ಉಳಿದರೆ ಅನಂತರ ಅವರನ್ನು ಮತ್ತೆ ಶಾಲೆಗಳತ್ತ ಕರೆತರುವುದು ಅಸಾಧ್ಯವೇ ಸರಿ. ಒಂದೊಮ್ಮೆ ಮಕ್ಕಳು ಶಾಲೆಯಿಂದ ಹೊರಗುಳಿದರೆ ಬಾಲ ಕಾರ್ಮಿಕರಾಗುವ ಮತ್ತೂಂದು ಅಪಾಯವೂ ಇಲ್ಲದಿಲ್ಲ. ನಗರಾಭಿವೃದ್ಧಿ ಇಲಾಖೆ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಮೀಕ್ಷೆ ಪ್ರಕಾರ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಕ್ಕಳು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಂದ ಹೊರಗುಳಿಯಲು ಪ್ರಮುಖ ವಾಗಿ ವಲಸೆ ಜತೆಗೆ ಕೋವಿಡ್ ಸಹ ಕಾರಣವಾಗಿದೆ. ಇದರ ಬಗ್ಗೆ ಸರಕಾರ ಗಮನಹರಿಸಿ ಆ ಮಕ್ಕಳನ್ನು ಮರಳಿ ಶಾಲೆ ಹಾಗೂ ಅಂಗನ ವಾಡಿಗಳತ್ತ ತರುವ ಕೆಲಸ ಮಾಡಬೇಕಾಗಿದೆ. ಇಲ್ಲದಿದ್ದರೆ ಭವಿಷ್ಯದಲ್ಲಿ ಆವರು ಶಿಕ್ಷಣದಿಂದಲೇ ವಂಚಿತರಾಗುವ ಸಾಧ್ಯತೆಯೂ ಇರುತ್ತದೆ.
ಒಮ್ಮೆ ಮಕ್ಕಳು ಶಿಕ್ಷಣ ಬಿಟ್ಟು ದುಡಿಯಲು ಹೋದರೆ ಬಡ ಕುಟುಂಬಗಳ ಪೋಷಕರು ಆರ್ಥಿಕ ಸಂಕಷ್ಟದಿಂದ ಮತ್ತೆ ಮಕ್ಕಳನ್ನು ಶಿಕ್ಷಣದತ್ತ ಕಳುಹಿಸುವುದು ಕಡಿಮೆಯಾಗುತ್ತದೆ. ಹೀಗಾಗಿ ರಾಜ್ಯ ಸರಕಾರ ಪ್ರತೀ ಗ್ರಾಮ ಹಾಗೂ ನಗರ ಪ್ರದೇಶದ ಮನೆ ಮನೆ ಸಮೀಕ್ಷೆ ನಡೆಸಿ ಶಾಲೆ ಬಿಟ್ಟ ಅಥವಾ ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕ ಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರ್ಪಡೆ ಮಾಡಿಕೊಳ್ಳುವ ಕೆಲಸ ಮಾಡ ಬೇಕು. ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳುಗಳು ಕಳೆದಿದ್ದರೂ ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಾಯದೆ ತತ್‌ಕ್ಷಣವೇ ಮಕ್ಕಳನ್ನು ಶಾಲೆ ಅಥವಾ ಅಂಗನವಾಡಿಗೆ ಕರೆತರಬೇಕಿದೆ.
ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದಲ್ಲಿ ಒಟ್ಟಾರೆ 6 ರಿಂದ 14 ವರ್ಷದ 15,338 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇದೇ ವಯೋಮಾನದ 10 ಸಾವಿರ ಮಕ್ಕಳು ಶಾಲೆಗಳಲ್ಲಿ ಪ್ರವೇಶವನ್ನೇ ಪಡೆದಿಲ್ಲ. 3 ವರ್ಷದೊಳಗಿನ 4.54 ಲಕ್ಷ ಮಕ್ಕಳು ಹಾಗೂ 4ರಿಂದ 6 ವರ್ಷದ 5.33 ಲಕ್ಷ ಮಕ್ಕಳು ಅಂಗನವಾಡಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿಲ್ಲ. ರಾಜ್ಯದಲ್ಲಿ ಒಟ್ಟಾರೆ 10.12 ಲಕ್ಷ ಮಕ್ಕಳು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಂದ ಹೊರಗುಳಿದಿದ್ದಾರೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ. ಇದು ಕಳವಳಕಾರಿ ವಿಷಯವೂ ಹೌದು. ಸರಕಾರ ಈ ಅಂಶವನ್ನು ಗಂಭೀರವಾಗಿ ಪರಿಗಣಿಸಲೇಬೇಕು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದು ಸ್ವಾಗತಾರ್ಹ. ಏಕೆಂದರೆ ನ್ಯಾಯಾಲಯ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಆರ್ಜಿ ವಿಚಾರಣೆ ನಡೆಸದಿದ್ದರೆ ಈ ಮಾಹಿತಿಯೂ ಹೊರಗೆ ಬರುತ್ತಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.