ಕೆಲಸ ಕೊಡಿಸುವುದಾಗಿ 48 ಲಕ್ಷ ರೂ ಪಡೆದು ವಂಚನೆ: ಮೂವರ ಬಂಧನ
Team Udayavani, Jul 8, 2022, 12:56 PM IST
ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ಹಣ ಪಡೆದು ಮೋಸ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 24 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಕರಣ ಸಂಬಂಧ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್, ಕೋವಿಡ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರು ಕೆಲಸಕ್ಕಾಗಿ ಗೂಗಲ್ ನಲ್ಲಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಅವರಿಗೆ ಎಮಿನೆಂಟ್ ಮೈಂಡ್ ಎಂಬ ಕಂಪನಿಯ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿದ್ದಾರೆ. ಕಂಪನಿಯವರು ಕೆಲಸಕ್ಕೆ ನೀವು ಆಯ್ಕೆಯಾಗಿದ್ದು, ಹಣ ಕಳುಹಿಸಿದರೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು ನಂಬಿಸಿ 2020ರ ನ.5 ರಿಂದ 2022ರ ಎ.4 ರವರೆಗೆ 48,80,300 ರೂಗಳನ್ನು ಹಲವು ಕಂತುಗಳಲ್ಲಿ ಪಡೆದುಕೊಂಡಿದ್ದಾರೆ. ಯಾವುದೇ ಕೆಲಸ ಕೊಡಿಸಿದ್ದಾಗ ಅನುಮಾನಗೊಂಡ ವ್ಯಕ್ತಿ ಸಿಇಎನ್ ಕ್ರೈ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದರು.
ಇದನ್ನೂ ಓದಿ:ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡು ಠಾಣೆ ಎದುರು ಯುವಕನ ರಂಪಾಟ: ಬೆಚ್ಚಿ ಬಿದ್ದ ನಾಗರಿಕರು
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಏಳು ಸ್ಯಾಮ್ ಸಂಗ್ ಮೊಬೈಲ್, ನಾಲ್ಕು ಸ್ಮಾರ್ಟ್ ಫೋನ್, 11 ಸಿಮ್ ಕಾರ್ಡ್, ಎರಡು ಲ್ಯಾಪ್ ಟಾಪ್, ಮೂರು ಕಚೇರಿ ಸೀಲುಗಳು, 24 ಲಕ್ಷ ರೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.