ಹಿಗ್ಗಿದ ಕೃಷ್ಣೆಯ ಒಡಲು: ಮತ್ತೆ ನೆರೆ ಭೀತಿ
ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ ಪ್ರತಾಪ ; ಕೃಷ್ಣಾ ನದಿಗೆ 65 ಸಾವಿರ ಕ್ಯೂಸೆಕ್ ನೀರು ; ನದಿಗಳ ಮಟ್ಟ ಹೆಚ್ಚಳ
Team Udayavani, Jul 8, 2022, 3:35 PM IST
ಬೆಳಗಾವಿ: ಜಿಲ್ಲೆಯ ಗಡಿ ಭಾಗ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ 10 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಹಿಡಕಲ್ ಜಲಾಶಯಮಟ್ಟದಲ್ಲಿ ಒಂದೇ ದಿನ ಮೂರು ಅಡಿಗಳಷ್ಟು ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2093 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದಿಂದ 1097 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಖಾನಾಪುರ ತಾಲೂಕಿನ ಕಣಕುಂಬಿ ಮತ್ತು ಜಾಂಬೋಟಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ನದಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಲಪ್ರಭಾ ಜಲಾಶಯಕ್ಕೆ 7729 ಕ್ಯೂಸೆಕ್ ನೀರು ಬರುತ್ತಿದ್ದು ಜಲಾಶಯಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆಯಾಗಿದೆ. ಒಟ್ಟು 2079.50 ಅಡಿ ಸಾಮರ್ಥ್ಯದ ಮಲಪ್ರಭಾ ಜಲಾಶಯದಲ್ಲಿ ಈಗ 2054.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 7729 ಕ್ಯೂಸೆಕ್ ನೀರು ಬರುತ್ತಿದ್ದು ಜಲಾಶಯದಿಂದ 194 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ.
ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಒಡಲುಕ್ಕಿ ಹರಿಯುತ್ತಿವೆ.
ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ನಾಲ್ಕು ಸೇತುವೆಗಳು ಗುರುವಾರ ಜಲಾವೃತಗೊಂಡಿವೆ. ದೂಧಗಂಗಾ ನದಿಗೆ ಅಡ್ಡಲಾಗಿರುವ ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ಚಿಕ್ಕೋಡಿ ತಾಲೂಕಿನ ಮಲಿಕವಾಡ-ದತ್ತವಾಡ, ವೇದಗಂಗಾ ನದಿಯ ನಿಪ್ಪಾಣಿ ತಾಲೂಕಿನ ಭೋಜವಾಡಿ-ಕುನ್ನೂರ, ಬಾರವಾಡ-ಕುನ್ನೂರ ಸೇತುವೆಗಳು ಜಲಾವೃತಗೊಂಡು ಸಂಚಾರ ಬಂದ್ ಆಗಿದೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದ ಕೋಯ್ನಾ, ಮಹಾಬಲೇಶ್ವರ, ನವಜಾ, ಕಾಳಮ್ಮವಾಡಿ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಇದರಿಂದ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 51 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದೂಧಗಂಗಾ ನದಿಯಿಂದ 14 ಸಾವಿರ ಕ್ಯೂಸೆಕ್ ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 65 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಮಾಹಿತಿ ನೀಡಿದ್ದಾರೆ.
ಇನ್ನು ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆಯಾಗುತ್ತಿದ್ದು ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಬೆಳಗಾವಿ ನಗರದಲ್ಲಿ ನಿರಂತರ ಮಳೆಯಾಗುತ್ತಿದ್ದು ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರಿಗೆ ತೊಂದರೆಯಾಗಿದೆ. ಕೆಲವು ಬಡಾವಣೆಗಳಲ್ಲಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿರುವದರಿಂದ ವಾಹನ ವಾಹನ ಸವಾರರು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.