ಸಿದ್ದು- ಡಿಕೆಶಿ ಸಂಧಾನದಲ್ಲಿ ಕೊನೆಗೂ ಯಶಸ್ವಿಯಾದ ಕೈ ತಟಸ್ಥ ಬಣ
Team Udayavani, Jul 8, 2022, 5:51 PM IST
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ಸಂಧಾನ ಮಾಡಿಸುವಲ್ಲಿ ಕಾಂಗ್ರೆಸ್ ನ ತಟಸ್ಥ ಬಣದ ಪ್ರಯತ್ನ ಕೊನೆಗೂ ಯಶಸ್ವಿಯಾಗಿದೆ.
ಸಿದ್ದರಾಮೋತ್ಸವ, ಅದಕ್ಕೆ ಶಿವಕುಮಾರ್ ನೀಡುತ್ತಿದ್ದ ಪರೋಕ್ಷ ಟಾಂಗ್ ಇತ್ಯಾದಿ ಒಳೇಟುಗಳ ನಡುವೆಯೇ ಕಾಂಗ್ರೆಸ್ ನ ತಟಸ್ಥ ಬಣವೊಂದು ಕಳೆದ ಎರಡು ತಿಂಗಳಿಂದ ಉಭಯ ನಾಯಕರ ಮಧ್ಯೆ ಸಂಧಾನ ಸೇತುವೆ ನಿರ್ಮಾಣಕ್ಕೆ ಯತ್ನಿಸುತ್ತಿತ್ತು. ” ನೀವಿಬ್ಬರೂ ಕಚ್ಚಾಡಿದರೆ, ಪಕ್ಷಕ್ಕೆ ಸೋಲು ಶತಸಿದ್ಧ ” ಎಂದು ಈ ಬಣ ಪದೇ ಪದೇ ಮನವರಿಕೆ ಮಾಡಿದ್ದರ ಫಲವಾಗಿ ಸಿದ್ದರಾಮಯ್ಯ ಶಿವಕುಮಾರ್ ಅವರನ್ನು ಉಪಹಾರಕ್ಕಾಗಿ ಮನೆಗೆ ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಕೃಷ್ಣ ಭೈರೇಗೌಡ, ಸಿದ್ದರಾಮಯ್ಯ ಅವರ ಮಿತ್ರ, ಡಿಕೆಶಿ ಮಾರ್ಗದರ್ಶಕ ರಮೇಶ್ ಕುಮಾರ್, ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದರೂ ಶಿವಕುಮಾರ್ ಗೆ ಆಪ್ತರಾಗಿದ್ದ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮೊದಲಾದವರು ನಡೆಸಿದ ಸಂಧಾನ ಈಗ ಯಶಸ್ವಿಯಾಗಿದೆ.
ಹೀಗಾಗಿ ಸಿದ್ದರಾಮೋತ್ಸವ ಕಾರ್ಯಕ್ರಮ ವಿಚಾರದಲ್ಲಿ ಡಿಕೆಶಿ ಒಂದು ಹೆಜ್ಜೆ ಹಿಂದೆ ಸರಿದರೆ ಶಿವಕುಮಾರ್ ವಿಚಾರದಲ್ಲಿನ ಬಿಗಿ ನಿಲುವನ್ನು ಸಿದ್ದರಾಮಯ್ಯ ಸಡಿಲಿಸಿದ್ದಾರೆ. ಹೀಗಾಗಿ ಅವರನ್ನು ಉಪಹಾರ ಕೂಟಕ್ಕೆ ಆಹ್ವಾನಿಸಿ ಸ್ನೇಹದ ಹಸ್ತ ಚಾಚಿದ್ದಾರೆ ಎನ್ನಲಾಗಿದೆ. ಅಧಿಕಾರಕ್ಕಾಗಿ ನಾವಿಬ್ಬರು ಈಗಲೇ ಕಚ್ಚಾಡುವುದನ್ನು ಬಿಟ್ಟು ಮೊದಲು ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂಬ ಒಮ್ಮತಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.