ಕಡಲ್ಕೊರೆತಕ್ಕೆ ಸುರಿದ ಕಲ್ಲು ಮಳೆಗಾಲದಲ್ಲೇ ಸಮುದ್ರ ಪಾಲು!

ಶಾಶ್ವತ ಪರಿಹಾರ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ: ಕರಾವಳಿಯಲ್ಲಿ ಪ್ರತೀ ವರ್ಷ ಕೋಟ್ಯಂತರ ರೂ. ಪೋಲು

Team Udayavani, Jul 9, 2022, 7:10 AM IST

ಕಡಲ್ಕೊರೆತಕ್ಕೆ ಸುರಿದ ಕಲ್ಲು ಮಳೆಗಾಲದಲ್ಲೇ ಸಮುದ್ರ ಪಾಲು!

ಉಡುಪಿ: ಪ್ರತೀ ವರ್ಷ ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿಯಲ್ಲಿ ಕಡಲ್ಕೊರೆತ ಸಾಮಾನ್ಯ. ಮಳೆಗಾಲ ಆರಂಭದಲ್ಲಿ ಮತ್ತು ಅನಂತರ ಕಡಲ್ಕೊರೆತ ತಡೆಗೆ ಕೋಟ್ಯಂತರ ರೂ. ವ್ಯಯಿಸಿ ಸಮುದ್ರದಂಡೆಗೆ ಕಲ್ಲು ಹಾಕಲಾಗುತ್ತದೆ. ಆದರೆ ಅವು ಮಳೆಗಾಲದಲ್ಲಿ ಸಮುದ್ರ ಪಾಲಾಗುತ್ತವೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಎಷ್ಟೇ ಕಲ್ಲು ಹಾಕಿದರೂ ಸರಕಾರದ ಖಜಾನೆಯಲ್ಲಿರುವ ಸಾರ್ವ ಜನಿಕರ ತೆರಿಗೆ ಹಣ ನಷ್ಟವೇ ವಿನಾ ಬೇರೇನೂ ಉಪಯೋಗ ಆಗದು.

ಮಳೆಗಾಲದಲ್ಲಿ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ಕಡಲ್ಕೊರೆತ ತಡೆಗೆ ತಾತ್ಕಾಲಿಕವಾಗಿ ಕಲ್ಲು ಹಾಕಲಾಗುತ್ತದೆ. ಮಳೆಗಾಲ ಮುಗಿದ ಅನಂತರ ಅದಕ್ಕೆ ಪ್ರತ್ಯೇಕವಾಗಿ ಟೆಂಡರ್‌ ಕರೆದು ಕಲ್ಲನ್ನು ಪುನರ್‌ ಜೋಡಿಸಲಾಗುತ್ತದೆ. ಮುಂದಿನ ವರ್ಷ ಮಳೆಗಾಲದಲ್ಲಿ ಮತ್ತದೇ ಗೋಳು. ಸಚಿವ, ಶಾಸಕರು ಸ್ಥಳ ಪರಿಶೀಲನೆಗೆ ಹೋದಾಗ ಅಲ್ಲಿ ಕಲ್ಲು ಇದ್ದರಾಯಿತು. ಅದನ್ನು ವೈಜ್ಞಾನಿಕವಾಗಿ ಹಾಕಲಾಗಿದೆಯೇ ಅಥವಾ ಅದರಿಂದ ಕಡಲ್ಕೊರೆತ ಕಡಿಮೆ ಆಗಿದೆಯೇ ಇದ್ಯಾವುದೂ ಗಣನೆಗೆ ಬರುವುದಿಲ್ಲ. ಅನುದಾನ ಮಾತ್ರ ಬರುತ್ತಲೇ ಇರುತ್ತದೆ.

100 ಕೋಟಿ ರೂ. ಪ್ರಸ್ತಾವನೆ
ಉಡುಪಿ, ದ.ಕ. ಮತ್ತು ಉತ್ತರ ಕನ್ನಡದಲ್ಲಿ ಪ್ರತೀ ವರ್ಷ ಆಗುವ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕಾಗಿ ನೂರು ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳೆದ ವರ್ಷವೇ ಸಲ್ಲಿಸಲಾಗಿದೆ. ಆದರೆ ಅನುಮೋದನೆ ಸಿಕ್ಕಿಲ್ಲ. ವಿಶೇಷವಾಗಿ ಮರವಂತೆಯಲ್ಲಿ ಆಗುತ್ತಿರುವ ಕಡಲ್ಕೊರೆತ ತಪ್ಪಿಸಲು 4 ಕೋ.ರೂ.ಗಳ ಪ್ರತ್ಯೇಕ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಅದು ಕೂಡ ಮಂಜೂರಾಗಿಲ್ಲ.

ಡಕ್‌ಫ‌ುಟ್‌ ತಂತ್ರಜ್ಞಾನ
ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರವಾಗಿ ಡಕ್‌ಫ‌ುಟ್‌ ತಂತ್ರಜ್ಞಾನ ಅಳವಡಿಸಿಕೊಳ್ಳಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ. ಮರವಂತೆಯಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿ ಮಾಡುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಎಂಜಿನಿಯರ್‌ಗಳ ಮೂಲಕ ವರದಿಯನ್ನು ಪಡೆದಿದೆ. ಡಕ್‌ಫ‌ುಟ್‌ ತಂತ್ರಜ್ಞಾನ ಅಳವಡಿಸುವ ಮೊದಲು ಕೇಂದ್ರದ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಬರುವ ಸೆಂಟ್ರಲ್‌ ವಾಟರ್‌ ಆ್ಯಂಡ್‌ ಪವರ್‌ ರಿಸರ್ಚ್‌ ಸೆಂಟರ್‌(ಸಿಡಬ್ಲ್ಯುಪಿಆರ್‌ಎಸ್‌) ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಆದರೆ ಅವರು ಭೇಟಿ ನೀಡಿಲ್ಲ.

ವ್ಯಯಿಸಿರುವ ಅನುದಾನ
ಉಡುಪಿ ಜಿಲ್ಲೆಯಲ್ಲಿ 2018-19ರಲ್ಲಿ 21.43 ಕೋ.ರೂ., 2019-20ರಲ್ಲಿ 21.17 ಕೋ.ರೂ., 2020-21ರಲ್ಲಿ 24.32 ಕೋ.ರೂ.ಗಳನ್ನು ಸರಕಾರದಿಂದ ನೀಡಲಾಗಿದೆ. ಎಡಿಬಿ ನೆರವಿನಿಂದ 2018-19ರಲ್ಲಿ 103.03 ಕೋ.ರೂ., 2019-20ರಲ್ಲಿ 58.17 ಕೋ.ರೂ. ಹಾಗೂ 2020-21ರಲ್ಲಿ 22.07 ಕೋ.ರೂ. ಹಂಚಿಕೆ ಮಾಡಲಾಗಿದೆ. ಮೂರು ವರ್ಷಗಳಲ್ಲಿ ಸರಿಸುಮಾರು 250 ಕೋ.ರೂ.ಗಳನ್ನು ಕಡಲ್ಕೊರೆತ ತಡೆಗೆ ವ್ಯಯಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತ ತಡೆಗೆ ಸುಮಾರು 89.79 ಕೋ.ರೂ. ಮೀಸಲಿಡಲಾಗಿದೆ. ಮೂರು ವರ್ಷಗಳಲ್ಲಿ ಜಿಲ್ಲೆಯಾದ್ಯಂತ ಕಡಲ್ಕೊರೆತಕ್ಕೆ ಕೋಟ್ಯಂತರ ರೂ.ಗಳನ್ನು ವ್ಯಯಿಸಲಾಗಿದೆ.

ಸ್ಥಳೀಯರ ಆಗ್ರಹ
ಕಡಲ್ಕೊರೆತಕ್ಕೆ ಕಲ್ಲು ಹಾಕುವ ಸಂದರ್ಭದಲ್ಲಿ ವೈಜ್ಞಾನಿಕ ವಿಧಾನವನ್ನು ಅನುಸರಿಸಬೇಕು. ಮೊದಲಿಗೆ ತೀರದಲ್ಲಿ ಹೊಂಡ ತೋಡಿ ಶೀಟ್‌ಗಳನ್ನು ಅಳವಡಿಸಿ, ಮಣ್ಣಿನ ಚೀಲಗಳನ್ನು ಇರಿಸಿ ಕಲ್ಲು ಜೋಡಿಸಬೇಕು. ಕಡಲ್ಕೊರೆತ ತಡೆಯಲು ತರಾತುರಿಯಲ್ಲಿ ಕಲ್ಲು ತಂದು ಸುರಿಯಲಾಗುತ್ತಿದೆ. ಮಳೆಗಾಲ ಮುಗಿಯುವ ವೇಳೆಗೆ ಅವು ಸಮುದ್ರದ ಪಾಲಾಗಿರುತ್ತವೆ. ಮರವಂತೆಯಲ್ಲಿ “ಟಿ’ ಆಕಾರದಲ್ಲಿ ತಡೆಗೋಡೆ ನಿರ್ಮಿಸಿರುವ ಮಾದರಿಯಲ್ಲಾದರೂ ಕಡಲ್ಕೊರೆತ ತಡೆಗೆ ಕ್ರಮ ಆಗಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಕಲ್ಲು ಹಾಕಲು ಹಿಂದೇಟು
ಕಳೆದ ವರ್ಷ ಕಡಲ್ಕೊರೆತಕ್ಕೆ ಹಾಕಿದ ಕಲ್ಲಿನ ಬಿಲ್‌ ಪಾವತಿ ಆಗದೇ ಇರುವುದರಿಂದ ಈ ವರ್ಷ ಗುತ್ತಿಗೆದಾರರು ಕಲ್ಲು ಹಾಕಲು ಮುಂದೆ ಬರುತ್ತಿಲ್ಲ. ಅಲ್ಲದೆ ಇ-ಟೆಂಡರ್‌ ಮೂಲಕ ಕಲ್ಲು ಹಾಕುವ ಪ್ರಕ್ರಿಯೆ ನಡೆಯುವುದರಿಂದ ಮುಂದೆ ಟೆಂಡರ್‌ ನಡೆದಾಗ ಅವರಿಗೆ ಸಿಗದೇ ಇರಬಹುದು. ಆಗ ಬಿಲ್‌ ಪಡೆಯುವುದು ಕಷ್ಟವಾಗುತ್ತದೆ. ಹೀಗಾಗಿ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ ಎನ್ನಲಾಗುತ್ತಿದೆ.

ಕಡಲ್ಕೊರೆತದ ಬಗ್ಗೆ ಆಯಾ ಜಿಲ್ಲಾಡಳಿತ ಮತ್ತು ಇಲಾಖೆಯ ಸ್ಥಳೀಯ ಎಂಜಿನಿಯರ್‌ಗಳು ಗಮನಕ್ಕೆ ತಂದಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಸ್ವಲ್ಪ ಅನುದಾನದ ಕೊರತೆಯಿದೆ. ಡಕ್‌ಫ‌ುಟ್‌ ತಂತ್ರಜ್ಞಾನ ಅಳವಡಿಸಿ ತಡೆಗೋಡೆ ನಿರ್ಮಿಸುವ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಸರಕಾರದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ.
-ಕ್ಯಾ| ಸಿ. ಸ್ವಾಮಿ, ನಿರ್ದೇಶಕ, ಮೂಲಸೌಕರ್ಯ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ, ಕಾರವಾರ


-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.