ಪುರುಷರಿಗೇ ಪ್ರತ್ಯೇಕ ವೈದ್ಯಕೀಯ ಸೇವೆ: ಸದ್ಯದಲ್ಲೇ ಪ್ರಾಯೋಗಿಕ ಚಾಲನೆ
ಮಲ್ಲೇಶ್ವರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಆರಂಭ
Team Udayavani, Jul 9, 2022, 1:44 PM IST
ಬೆಂಗಳೂರು: ಹಲವು ಬಗೆಯ ಸಂಕೀರ್ಣ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ದೇಶದಲ್ಲೇ ಅನನ್ಯವಾದ ಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯವನ್ನು ಆರಂಭಿಸುವ ಕುರಿತು ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರ ಜತೆ ಸಚಿವರು ಮಾತುಕತೆ ನಡೆಸಿದರು.
ಈ ಬಗ್ಗೆ ಮಾತನಾಡಿದ ಸಚಿವರು, `ಪುರುಷರೂ ಹಲವು ಅನಾರೋಗ್ಯ ಸಮಸ್ಯೆಗನ್ನು ಎದುರಿಸುತ್ತಿರುತ್ತಿರುತ್ತಾರೆ. ಆದರೆ ಇವರಲ್ಲಿ ಹೆಚ್ಚಿನವರು ಆಸ್ಪತ್ರೆಗೇ ಬರುವುದಿಲ್ಲ. ಹೀಗಾಗಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಡಿಯಲ್ಲಿ ಈ ವಿನೂತನ ಯೋಜನೆಯನ್ನು ಎರಡೂ ಕಡೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ಇದಕ್ಕೆ ಸಿಕ್ಕುವ ಸ್ಪಂದನವನ್ನು ಆಧರಿಸಿ ಮುಂಬರುವ ದಿನಗಳಲ್ಲಿ ಇದನ್ನು ಎಲ್ಲೆಡೆಗೂ ವಿಸ್ತರಿಸಲಾಗುವುದು. ಈ ಯೋಜನೆಯಡಿ ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರು ವೈದ್ಯಕೀಯ ಪರೀಕ್ಷೆಗಳ ಸೌಲಭ್ಯ ಕಲ್ಪಿಸುತ್ತಾರೆ’ ಎಂದಿದ್ದಾರೆ.
ಮಧುಮೇಹ, ಕ್ಯಾನ್ಸರ್, ನರಕ್ಕೆ ಸಂಬಂಧಿಸಿದ ಕಾಯಿಲೆಗಳು, ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಪುರುಷರನ್ನು ಹೆಚ್ಚಾಗಿ ಕಾಡುತ್ತಿವೆ. ಇದರ ಜತೆಗೆ ಒತ್ತಡದ ಜೀವನ, ಧೂಮಪಾನ, ಮದ್ಯಪಾನ, ಅವೈಜ್ಞಾನಿಕ ಆಹಾರ ಸೇವನೆಯ ಕ್ರಮ ಇತ್ಯಾದಿಗಳೂ ಪುರುಷರ ಅನಾರೋಗ್ಯಕ್ಕೆ ಕಾರಣಗಳಾಗಿವೆ. ಈಗ ಕೈಗೆತ್ತಿಕೊಂಡಿರುವ ಯೋಜನೆಯಲ್ಲಿ ಜೀವನಶೈಲಿ ಮತ್ತು ಆಹಾರ ಸೇವನೆಗೆ ಸಂಬಂಧಿಸಿದ ದೋಷಗಳನ್ನು ಪರಿಹರಿಸಲು ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಕುಟುಂಬಗಳಿಗೆ ಪುರುಷರೇ ಆಧಾರಸ್ತಂಭದಂತೆ ಇರುತ್ತಾರೆ. ಆದ್ದರಿಂದ ಇಂತಹ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇದರಿಂದಾಗಿ ಸಂಭವನೀಯ ಅನಾರೋಗ್ಯವು ಸೃಷ್ಟಿಸುವ ಆರ್ಥಿಕ ಹೊರೆ ಮತ್ತಿತರ ಸಮಸ್ಯೆಗಳಿಂದ ಪಾರಾಗಬಹುದು ಎಂದು ಸಚಿವರು ವಿವರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.