ಕೊರಟಗೆರೆ: ಇಸ್ಪೀಟು ಅಡ್ಡೆಯ ಮೇಲೆ ದಾಳಿ; 15 ಆರೋಪಿಗಳ ಬಂಧನ
Team Udayavani, Jul 9, 2022, 4:09 PM IST
ಕೊರಟಗೆರೆ: ಮಧುಗಿರಿ ಉಪ ವಿಭಾಗದ ಕೊರಟಗೆರೆ ಪೋಲೀಸ್ ಠಾಣೆ ವ್ಯಾಪ್ತಿಯ ಜಿ.ನಾಗೇನಹಳ್ಳಿ ಗ್ರಾಮದ ಬಳಿಯಿರುವ ಸಿ.ಜಿ.ಎಲೈಟ್ಸ್ ರೆಸಾರ್ಟ್ ನಲ್ಲಿ ಅಕ್ರಮವಾಗಿ ಇಸ್ಪೀಟು ಜೂಜಾಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಕೆ.ಜಿ.ರಾಮಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಿ ಕೃತ್ಯಕ್ಕೆ ಸಂಭಂದಿಸಿದಂತೆ 7,00, 650 ರೂಪಾಯಿ ನಗದು ಹಣ, 4 ಕಾರುಗಳು ಹಾಗೂ 15 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.
ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ರವಿ ಬಿನ್ ಪುಟ್ಟಣ್ಣ ಮತ್ತು ಇಸ್ಪೀಟು ಆಟ ಆಯೋಜಿಸಿ ಅಕ್ರಮವಾಗಿ ಇಸ್ಪೀಟು ಆಡುತ್ತಿದ್ದ ಕೃಷ್ಣೇಗೌಡ ಮತ್ತು ಬಾಬು ರವರ ವಿರುದ್ದ ಹಾಗೂ ಇತರೆ 12 ಮಂದಿ ವಿರುದ್ದ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಡಿವೈಎಸ್ಪಿ ರಾಮಕೃಷ್ಣ ಕೆ.ಜಿ. ಇನ್ಸ್‌ಪೆಕ್ಟರ್ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ಗಳಾದ ನಾಗರಾಜು.ಬಿ, ಮುಂಜುಳ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಜೂಜಾಟದ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಲು ಶ್ರಮಿಸಿದ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಉದೇಶ್.ಟಿ.ಜೆ. ರವರ ಮಾರ್ಗದರ್ಶನದಲ್ಲಿ ,ಪೋಲೀಸ್ ಉಪಾಧೀಕ್ಷಕರು ಕೆ.ಜಿ.ರಾಮಕೃಷ್ಣ. ಮಧುಗಿರಿ ಉಪ ವಿಭಾಗದವರ ನೇತೃತ್ವದಲ್ಲಿ ಹನುಮಂತರಾಯಪ್ಪ ಪೋಲೀಸ್ ಇನ್ಸ್‌ಪೆಕ್ಟರ್ ಬಡವನಹಳ್ಳಿ ಠಾಣೆ. ಹಾಗೂ ಸಿದ್ದರಾಮೇಶ್ವರ ಪೋಲೀಸ್ ಇನ್ಸ್‌ಪೆಕ್ಟರ್ ಕೊರಟಗೆರೆ . ಪಿಎಸ್ಐಗಳಾದ ನಾಗರಾಜು, ಮತ್ತು ಮಂಜುಳಾ ಹಾಗೂ ಸಿಬ್ಬಂದಿ ವರ್ಗದವರನ್ನು ತುಮಕೂರು ಜಿಲ್ಲೆಯ ಪೋಲೀಸ್ ಅಧೀಕ್ಷರಾದ ರಾಹುಲ್ ಕುಮಾರ್ ಶಹಾಪುರ್ ವಾಡ್ ಅಭಿನಂದಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.