ಗುಂಡ್ಲುಪೇಟೆ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
Team Udayavani, Jul 9, 2022, 5:43 PM IST
ಗುಂಡ್ಲುಪೇಟೆ(ಚಾಮರಾಜನಗರ): ಜಮೀನಿನಲ್ಲಿ ಅಳವಡಿಕೆ ಮಾಡಿದ್ದ ವಿದ್ಯುತ್ ತಂತಿ ತಗುಲಿ 25 ವರ್ಷದ ಗಂಡಾನೆಯೊಂದು ಮೃತ ಪಟ್ಟಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಮೊಳೆಯೂರು ವಲಯದ ವ್ಯಾಪ್ತಿಯ ಮೊಳೆಯೂರು ಶಾಖೆಯ ಹೀರೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡಿನಿಂದ ಆಹಾರ ಅರಸಿಬಂದ ಕಾಡಾನೆ ಹೀರೆಹಳ್ಳಿ ಗ್ರಾಮದ ಎಚ್.ವಿ.ನಾಗರಾಜಪ್ಪ, ರಾಜಪ್ಪ ಎಂಬುವವವರು ಬೆಳೆದಿದ್ದ ಮುಸುಕಿನ ಜೋಳದ ಜಮೀನಿನ ಮೇಲೆ ಹಾದು ಹೋಗುವ ಸಮಯದಲ್ಲಿ ಬೆಳೆ ರಕ್ಷಣೆಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿಗೆ ಕಾಡಾನೆಗೆ ತಗುಲಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.
ಘಟನೆ ಕುರಿತು ವಿಷಯ ತಿಳಿದ ಹಿನ್ನೆಲೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶಕುಮಾರ್, ಹೆಡಿಯಾಲ ಉಪ-ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್, ಸೆಸ್ಕ್ ಎಇಇ ಕಿರಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಮೀನು ಮಾಲೀಕರ ವಿರುದ್ಧ ಅರಣ್ಯ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಬಳಿಕ ಇಲಾಖಾ ಪಶು ವೈದ್ಯಾಧಿಕಾರಿ ಡಾ.ವಾಸಿಂ ಮಿರ್ಜಾ ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಿ, ಸ್ಥಳದಲ್ಲಿಯೇ ಮೃತ ಆನೆಯ ಕಳೆಬರವನ್ನು ಜೆ.ಸಿ.ಬಿ ಸಹಾಯದಿಂದ ಗುಂಡಿ ತೆಗೆದು ಹೂಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.