ನಿರಂತರ ಮಳೆ: ಮೈದುಂಬಿದ ವರದಾ ನದಿ

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವರದಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ

Team Udayavani, Jul 9, 2022, 6:25 PM IST

ನಿರಂತರ ಮಳೆ: ಮೈದುಂಬಿದ ವರದಾ ನದಿ

ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ವರದಾ ನದಿ ಮೈದುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಕಳಸೂರು, ನಾಗನೂರು, ಕೂಡಲ ಬ್ರಿಡ್ಜ್ ಕಂ ಬ್ಯಾರೇಜ್‌ ಸಂಪೂರ್ಣ ಮುಳುಗಡೆಯಾಗಿರುವುದರಿಂದ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಗುರುವಾರ ರಾತ್ರಿಯಿಂದ ಎಡಬಿಡದೇ ಸಾಧಾರಣ ಮಳೆಯಾಗಿದೆ. ಶುಕ್ರವಾರ 12 ಗಂಟೆ ಬಳಿಕ ಮಳೆ ನಿಂತಿದ್ದು, ಆ ಬಳಿಕ ಅಲ್ಪ ಬಿಸಿಲು ಕೂಡ ಬಿದ್ದಿತ್ತು. ಆಗಾಗ ಮೋಡ ಕಡಿದು ಕೆಲವು ಕಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ತೇವಗೊಂಡ ಅನೇಕ ಮನೆಗಳು ಹಾನಿಗೀಡಾಗಿವೆ.

ಕಳೆದ ಮೂರ್‍ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಹರಿದಿರುವ ವರದಾ, ಧರ್ಮಾ ನದಿಗಳು ತುಂಬಿ ಹರಿಯುತ್ತಿವೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವರದಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ತಾಲೂಕಿನ ನಾಗನೂರು, ಸವಣೂರು ತಾಲೂಕಿನ ಕಳಸೂರು, ಹಾನಗಲ್ಲ ತಾಲೂಕಿನ ಕೂಡಲ ಬ್ರಿಜ್‌ ಕಂ ಬ್ಯಾರೇಜ್‌ ಸಂಪೂರ್ಣ ಮುಳುಗಿದೆ.

ಇದರಿಂದ ಕೋಳೂರು, ಗಣಜೂರು ಮಾರ್ಗದ ಸಂಪರ್ಕ ಬಂದ್‌ ಆಗಿದೆ. ಹೊಸರಿತ್ತಿ, ಕರ್ಜಗಿ, ಕೂಡಲ, ವರ್ದಿ ಮುಂತಾದ ವರದಾ ನದಿ ತೀರದ ಹೊಲಗಳಿಗೆ ನೀರು ನುಗ್ಗಿದೆ. ಇತ್ತೀಚೆಗಷ್ಟೇ ಬಿತ್ತನೆ ಮಾಡಿದ್ದ ಬೆಳೆಗಳು ನೀರಿನಲ್ಲಿ ಮುಳುಗಿವೆ. ನದಿ ತೀರದ ಹೊಲಗಳಲ್ಲಿನ ಹತ್ತಿ, ಮೆಕ್ಕೆಜೋಳ ಮುಂತಾದ ಬೆಳೆಗಳು ಜಲಾವೃತಗೊಂಡು ಕೊಳೆಯುವ ಆತಂಕ ಎದುರಾಗಿದೆ. ಧರ್ಮಾ ಮತ್ತು ಕುಮದ್ವತಿ ನದಿಗಳು ಕೂಡ ತುಂಬಿ ಹರಿಯುತ್ತಿವೆ.

ಮಳೆ ಮುಂದುವರಿದರೆ ಪ್ರವಾಹ ಪರಿಸ್ಥಿತಿ ಎದುರಾಗುವ ಆತಂಕ ಎದುರಾಗಿದೆ. ಜಿಟಿ ಜಿಟಿ ಮಳೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ಬಹುತೇಕ ಗ್ರಾಮೀಣ ರಸ್ತೆಗಳು ಹೊಂಡ ಬಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ. ನಗರ ಭಾಗದ ರಸ್ತೆಗಳೂ ರಾಡಿಮಯವಾಗಿವೆ.

ಮಳೆ ವಿವರ: ಕಳೆದ 24 ಗಂಟೆಗಳ ಅವಧಿಯಲ್ಲಿ ಹಾವೇರಿ ತಾಲೂಕಿನಲ್ಲಿ 16.4 ಮಿಮೀ, ರಾಣಿಬೆನ್ನೂರು 13.6ಮಿಮೀ, ಬ್ಯಾಡಗಿ 17ಮಿಮೀ, ಹಿರೇಕೆರೂರು 28.6ಮಿಮೀ, ರಟ್ಟಿಹಳ್ಳಿ 25.2ಮಿಮೀ, ಸವಣೂರು 22.5ಮಿಮೀ, ಶಿಗ್ಗಾವಿ 27.2ಮಿಮೀ ಹಾಗೂ ಹಾನಗಲ್ಲ ತಾಲೂಕಿನಲ್ಲಿ 65.2 ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.