ಕುಂದಾಪುರದ “ಬಡವರ ವೈದ್ಯ” ಡಾ. ಎ.ಎಸ್. ಕಲ್ಕೂರ ವಿಧಿವಶ
Team Udayavani, Jul 9, 2022, 8:52 PM IST
ಕುಂದಾಪುರ: “ಬಡವರ ಡಾಕ್ಟರ್” ಎಂದೇ ಕುಂದಾಪುರ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದ, ಹಂಗಳೂರಿನ ಯೂನಿಟಿ ಹಾಲ್ ಬಳಿಯ ನಿವಾಸಿ ಡಾ. ಎ.ಎಸ್. ಕಲ್ಕೂರ (87) ಅವರು ವಯೋ ಸಹಜ ಅಸೌಖ್ಯದಿಂದ ಜು. 9 ರಂದು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇವರು ಆರಂಭದಲ್ಲಿ ಸರಕಾರಿ ವೈದ್ಯರಾಗಿ ವಿವಿಧೆಡೆ ಸೇವೆ ಸಲ್ಲಿಸಿದ್ದು, ಬಳಿಕ ಕುಂದಾಪುರ ನಗರದಲ್ಲಿ ತಾವೇ ಸ್ವತಃ ಪುಟ್ಟದಾದ ಕ್ಲಿನಿಕ್ ತೆರೆದು, 5 ರೂ., 10 ರೂ., 20 ರೂ., 30 ರೂ.ನಷ್ಟು ಕಡಿಮೆ ವೆಚ್ಚದಲ್ಲಿ ರೋಗಿಗಳಿಗೆ ಚಿಕಿತ್ಸೆಯೊಂದಿಗೆ, ಔಷಧಿ ನೀಡುವ ಮೂಲಕ “ಬಡವರ ವೈದ್ಯ”ರೆಂದೇ ಜನಾನುರಾಗಿಯಾಗಿದ್ದರು.
ಸುಮಾರು 50 ವರ್ಷಗಳಿಗೂ ಹೆಚ್ಚು ಕಾಲದಿಂದ ಬಡವರ ಸೇವೆಗೆ ತಮ್ಮ ವೈದ್ಯಕೀಯ ವೃತ್ತಿಯನ್ನು ಮುಡಿಪಾಗಿಟ್ಟಿದ್ದರು. ಕುಂದಾಪುರ ತಾಲೂಕಿನ ಹಲವೆಡೆಗಳಿಂದ ಇವರಲ್ಲಿಗೆ ಸಾವಿರಾರು ಮಂದಿ ಶುಶ್ರೂಷೆಗಾಗಿ ಬರುತ್ತಿದ್ದರು. ನಾಟಕ ಕಲಾವಿದರಾಗಿದ್ದು, ಯಕ್ಷಗಾನ, ಕಲೆ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.