ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ; ಕುಕ್ಕೆ ಸುಬ್ರಹ್ಮಣ್ಯದ ಹೆದ್ದಾರಿ ಜಲಾವೃತ
Team Udayavani, Jul 10, 2022, 8:13 AM IST
ಬಂಟ್ವಾಳ/ ಸುಬ್ರಹ್ಮಣ್ಯ: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, 8.5 ಮಿ. ಎತ್ತರದಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಶನಿವಾರ ಬೆಳಿಗ್ಗೆ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿದ್ದು, 6.3 ಮಿ. ಎತ್ತರದಲ್ಲಿ ಹರಿಯುತ್ತಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ನೇತ್ರಾವತಿ ನದಿ ತುಂಬಿ ಹರಿಯಲು ಪ್ರಾರಂಭಿಸಿದೆ. ಬಾರಿ ವೇಗವಾಗಿ ನೀರು ಹರಿಯುತ್ತಿದ್ದು ರಾತ್ರಿ ವೇಳೆ ನೀರಿನ ಮಟ್ಟದಲ್ಲಿ ಇನ್ನಷ್ಟು ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಲಾಗಿದ್ದು ಬೆಳಿಗ್ಗೆ 6 ಗಂಟೆಯ ವೇಳೆಗೆ 8.5 ಮಿ.ಎತ್ತರದಲ್ಲಿ ಅಪಾಯದ ಮಟ್ಟವನ್ನು ತಲುಪಿದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಉಪ್ಪಿನಂಗಡಿಯಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿದೆ.
ತಗ್ಗು ಪ್ರದೇಶಗಳು ಜಲಾವೃತ
ಬಂಟ್ವಾಳ ನೇತ್ರಾವತಿ ನದಿ ತೀರದ ಎಲ್ಲಾ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನದಿ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.
ಪಾಣೆಮಂಗಳೂರು, ಕಂಚಿಕಾರ್ ಪೇಟೆ, ಜಕ್ರಿಬೆಟ್ಟು, ಕೈಕುಂಜೆ ಬಸ್ತಿಪಡ್ಪು ಮುಂತಾದ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಪಾಣೆಮಂಗಳೂರು ಮತ್ತು ಕಂಚಿಕಾರ್ ಪೇಟೆಯ ರಸ್ತೆಗೆ ನೀರು ಬಂದಿದೆ. ರಾತ್ರಿ ವೇಳೆ ಅತಿಯಾದ ಗಾಳಿ ಮಳೆಗೆ ನೀರಿನ ಮಟ್ಟ ಏರಿಕೆಯಾಗಿದೆ .
ತಹಶೀಲ್ದಾರ್ ಸ್ಮಿತಾ ರಾಮು , ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಟಿ.ಡಿ.ನಾಗರಾಜ್, ವಿವೇಕಾನಂದ, ಎಸ್.ಐ.ಗಳಾದ ಅವಿನಾಶ್, ಹರೀಶ್, ಮೂರ್ತಿ ಅವರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ನೆರೆ ಬರುವ ಬಗ್ಗೆ ಮುನ್ಸೂಚನೆ ಇದ್ದ ಕಾರಣ ತಾಲೂಕು ಆಡಳಿತ ಸಂಪೂರ್ಣ ಸಜ್ಜಾಗಿದೆ. ಇದರ ಜೊತೆ ಸ್ಥಳೀಯ ಬೋಟ್ ಹಾಗೂ ಮುಳುಗು ತಜ್ಞರು ಅಗ್ನಿಶಾಮಕ ದಳ ಸಂಪೂರ್ಣ ಸಜ್ಜಾಗಿ ನಿಂತಿದೆ.
ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಭಾರೀ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ನದಿ ನೀರು ಹೆದ್ದಾರಿಗೆ ನುಗ್ಗಿರುವ ಘಟನೆ ನಡೆದಿದೆ.
ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ದರ್ಪಣ ತೀರ್ಥ ಸೇತುವೆಯಿಂದ ಸುಮಾರು ಇನ್ನೂರು ಮೀಟರ್ ದೂರದವರೆಗೆ ಹೆದ್ದಾರಿ ಜಲಾವೃತಗೊಂಡಿದೆ.
ಕುಮಾರಪರ್ವತ ಸುಬ್ರಹ್ಮಣ್ಯ ಸುತ್ತಮುತ್ತ ಭಾರಿ ಮಳೆ ಹಿನ್ನೆಲೆ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಹಲವು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ನದಿಯ ಉಪನದಿ ರಾಜ್ಯ ಹೆದ್ದಾರಿಯಲ್ಲಿರುವ ದರ್ಪಣ ತೀರ್ಥ ಸೇತುವೆ ಜಲಾವೃತಗೊಂಡಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.