ಬಾಳುಗೋಡು: ಕೊಚ್ಚಿಹೋದ ಏಕೈಕ ಮರದ ಸೇತುವೆ: ಅತಂತ್ರ ಸ್ಥಿತಿಯಲ್ಲಿ ಉಪ್ಪುಕಳ ನಿವಾಸಿಗಳು
ಪಲ್ಲತ್ತಡ್ಕದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ
Team Udayavani, Jul 10, 2022, 10:02 AM IST
ಗುತ್ತಿಗಾರು: ಶನಿವಾರ(ಜು.9) ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಪ್ಪುಕಳ ಸಂಪರ್ಕಕ್ಕಾಗಿ ಇದ್ದ ಏಕೈಕ ಮರದ ಪಾಲ(ಮರದ ಸೃತುವೆ) ನೀರುಪಾಲಾಗಿದ್ದು ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು ಸಂಪರ್ಕಿಸಲು ಮರದ ಪಾಲವೇ ಗತಿಯಾಗಿತ್ತು. ಈ ಗ್ರಾಮವನ್ನು ಸಂಪರ್ಕಿಸುವ ಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರೇ ಮರದ ಪಾಲ ನಿರ್ಮಿಸಿಕೊಂಡು ಹೊಳೆ ದಾಟುತ್ತಿದ್ದರು.
ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ ಸ್ಥಳೀಯವಾಗಿ ಸಿಗುವ ಮರ, ಬಿದಿರು, ಬಳ್ಳಿಗಳನ್ನು ಬಳಸಿ ಕಾಲು ಸೇತುವೆ ದುರಸ್ತಿ ಪಡಿಸಿ ಜೀವನ ಕಳೆಯುತ್ತಿದ್ದಾರೆ. ಈ ಭಾರಿ ಸುರಿದ ವಿಪರೀತ ಮಳೆಗೆ ಹೆಚ್ಚಿನ ಪ್ರವಾಹ ಬಂದು ಕಾಲು ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಲ್ಲಿನ 11 ಮನೆಗಳಿಗೆ ಇತರ ಪ್ರದೇಶಗಳಿಗೆ ಸಂಪರ್ಕಿಸಲು ಅಸಾಧ್ಯವಾಗಿದೆ.
ಇದನ್ನೂ ಓದಿ:ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಭೂಕುಸಿತ: ಸಂಚಾರ ಬಂದ್
ಇದೇ ಪರಿಸರದ ಹರಿಹರ ಪಲ್ಲತ್ತಡ್ಕದಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಯೊಂದು ಭಾಗಶಃ ಹಾನಿಗೊಳಗಾಗಿದೆ. ಕಜ್ಜೋಡಿ ಎಂಬಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.