ಬೇಡ ಜಂಗಮ ಮುಖಂಡರ ಬಂಧನಕ್ಕೆ ಖಂಡನೆ
Team Udayavani, Jul 10, 2022, 5:30 PM IST
ಚಿತ್ತಾಪುರ: ಬೆಂಗಳೂರಿನ ಫೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೇಡ ಜಂಗಮ ಸಮಾಜದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಜಂಗಮ ಸಮಾಜದ ಮುಖಂಡರನ್ನು ತಡೆದು ಬಂಧಿಸಿರುವುದು ಸಂವಿಧಾನ ವಿರೋಧಿ ಚಟುವಟಿಕೆಯಾಗಿದೆ ಎಂದು ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಖಂಡಿಸಿದರು.
ಪಟ್ಟಣದಲ್ಲಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬೇಡ ಜಂಗಮ ಸಮಾಜದವರು ಆರ್ಥಿಕವಾಗಿ ಬಡವರಾಗಿದ್ದಾರೆ. ಸಂವಿಧಾನಬದ್ಧ ಹಕ್ಕಿಗಾಗಿ ಬಹುದಿನಗಳಿಂದ ಹೋರಾಟ ಮಾಡಲಾಗುತ್ತಿದೆ. ಶಾಂತಿಯುತವಾಗಿ ಹೋರಾಟ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ ಸಲ್ಲಿಸುವ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಆದರೆ ಹೋರಾಟದಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುತ್ತಿದ್ದ ಮುಖಂಡರನ್ನು ಬಂಧಿಸಿರುವುದು ಕಾನೂನು ವಿರೋಧಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ವಿಳಂಬ ನೀತಿ ಅನುಸರಿಸದೇ ಸಂಬಂಧಪಟ್ಟ ಇಲಾಖೆ ಮೂಲಕ ಬೇಡ ಜಂಗಮ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯಾಧ್ಯಕ್ಷ ಬಿ.ಡಿ. ಹಿರೇಮಠ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ಅವಕಾಶ ಕೊಡದೇ ಶೀಘ್ರ ಆದೇಶ ಮಾಡಬೇಕು ಎಂದು ಆಗ್ರಹಿಸಿದರು. ವಿರೂಪಾಕ್ಷಯ್ಯ ಮಠಪತಿ ತೋಟಯ್ಯ, ರಾಜಶೇಖರ ಸ್ವಾಮಿ, ಶಿವಪುತ್ರಯ್ಯ ಸ್ವಾಮಿ ನಾಲವಾರ, ಬಸಯ್ಯ ಸ್ವಾಮಿ ಹಿರೇಮಠ, ವೀರಭದ್ರಯ್ಯ ಸ್ವಾಮಿ, ತೋಟ್ಟಯ್ಯ, ಹಂಪಯ್ಯ, ರಾಜಶೇಖರ ಸ್ವಾಮಿ ಕೊಲ್ಲೂರ, ಬಸಯ್ಯ ಸ್ವಾಮಿ, ನಂದಿಕೋಲ ಮಠ ರಾವೂರ, ಕರಬಸಯ್ಯಶಾಸ್ತ್ರೀ, ಮಂಜುನಾಥ ಶಾಸ್ತ್ರೀ, ವಿರೂಪಾಕ್ಷಿ ಸ್ವಾಮಿ ದಿಗ್ಗಾಂವ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.