ಬಸ್ ಪಾಸ್ ವಿಸ್ತರಿಸಲು ಎಐಡಿಎಸ್‌ಒ ಒತ್ತಾಯ
Team Udayavani, Jul 10, 2022, 5:39 PM IST
ಶಹಾಬಾದ: ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಯನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವ ವರೆಗೂ ವಿಸ್ತರಿಸಬೇಕೆಂದು ಆಗ್ರಹಿಸಿ ಎಐಡಿಎಸ್‌ಒ ವತಿಯಿಂದ ನಗರದ ಸಾರಿಗೆ ನಿಯಂತ್ರಕರ ಮುಖಾಂತರ ಮುಖ್ಯ ಸಂಚಾರ ವ್ಯವಸ್ಥಾಪಕರು ಕೆಕೆಆರ್‌ಟಿಸಿ, ಕಲಬುರಗಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್‌ನ್ನು ಸೆಪ್ಟೆಂಬರ್ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್‌ನಲ್ಲಿ ಆರಂಭವಾದವು. ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್ 2021ರಲ್ಲಿ ಪಾಸ್ ನೀಡಲಾಗಿತ್ತು. ವಿದ್ಯಾರ್ಥಿ ಬಸ್ ಪಾಸ್‌ಗೆ ಅವರ ಶೈಕ್ಷಣಿಕ ವರ್ಷದ ಕೊನೆಯವರೆಗೂ ಮಾನ್ಯತೆ ಇರುತ್ತದೆ. ಆದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಏಕಾಏಕಿ ಜೂನ್ ತಿಂಗಳಿಗೆ ಪಾಸ್ ನವೀಕರಣ ಮಾಡಿಸಬೇಕು ಎಂದು ತಿಳಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಲಾಯಿತು.
ಎಐಡಿಎಸ್‌ಒ ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟೇಶ ದೇವದುರ್ಗ, ನಗರ ಅಧ್ಯಕ್ಷ ಕಿರಣಕುಮಾರ ಮಾನೆ, ಉಪಾಧ್ಯಕ್ಷ ದೇವರಾಜ ಹೊನಗುಂಟಾ, ಕಾರ್ಯದರ್ಶಿ ಅಜಯ್, ವಿದ್ಯಾರ್ಥಿಗಳಾದ ಶ್ರೀಧರ್, ಕೃಷ್ಣ, ಭರತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.