![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 11, 2022, 5:00 PM IST
ಯಲ್ಲಾಪುರ : ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಸಮೀಪ ನಡೆದಿದೆ.
ಮೃತಪಟ್ಟ ಬೈಕ್ ಸವಾರರನ್ನು ಹುಬ್ಬಳ್ಳಿಯ ಮಹಂತೇಶ ರೇವಣಪ್ಪ ಶೀಲವಂತರ( 23) ,ಹಾಗೂ ಹಳೆ ಹುಬ್ಬಳ್ಳಿಯ ಸುಮಿತ್ ಅಶೋಕ ಬಸವಾ (25) ಎಂದು ಗುರುತಿಸಲಾಗಿದೆ.
ಆರೋಪಿತ ಲಾರಿ ಚಾಲಕ ಶಿವರಾಜ ಚಿಂಚಲಿ ತನ್ನ ಗೂಡ್ಸ್ ಲಾರಿಯನ್ನು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯ ಚಲಿಸಿಕೊಂಡು ಬಂದು ಗುಳ್ಳಾಪುರ ಸಮೀಪ ತನ್ನ ನಿಯಂತ್ರಣ ಕಳೆದುಕೊಂಡು ಯಲ್ಲಾಪುರ ಕಡೆಗೆ ನಿಧಾನವಾಗಿ ಬರುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದ್ದಾನೆ.ಇದರಿಂದ ಹಿಂಬದಿಯ ಸವಾರ ಮಹಾಂತೇಶ ಸ್ಥಳದಲ್ಲೇ ಮೃತಪಟ್ಟಿದ್ದು,ಬೈಕ್ ಚಲಾಯಿಸುತ್ತಿದ್ದ ಸುಮಿತ್ ಗಂಭೀರವಾಗಿ ಗಾಯಗೊಂಡು ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಕುರಿತು ಯಲ್ಲಾಪುರ
ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.