ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಿಸಲು ಆಗ್ರಹ

ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ಪಾಸ್‌ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು

Team Udayavani, Jul 11, 2022, 6:15 PM IST

ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಿಸಲು ಆಗ್ರಹ

ಚಿಕ್ಕಬಳ್ಳಾಪುರ: ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಣೆ, ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನಗರದಲ್ಲಿ ಕನ್ನಡ ಬಾವುಟದೊಂದಿಗೆ ಪ್ರತಿಭಟನೆ ನಡೆಸಿದರು.

ನಗರದ ವಿದ್ಯಾರ್ಥಿನಿಲಯದಿಂದ ಶಿಡ್ಲಘಟ್ಟದ ವೃತ್ತದವರೆಗೆ ಕನ್ನಡ ಬಾವುಟದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ರಾಜ್ಯ ಸರ್ಕಾರ ಪಠ್ಯಪುಸ್ತಕ ಗೊಂದಲ ನಿವಾರಿಸಿ, ಹಳೇ ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ಪಾಸ್‌ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಎನ್‌.ಎಸ್‌ .ಯು.ಐ ಸಂಘಟನೆಯ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ, ಮಾನವೀಯ ಸಂದೇಶವನ್ನು ಇಡೀ ಜಗತ್ತಿನಲ್ಲಿ ಪಸರಿಸಲು ಕಾರಣಕರ್ತರಾದವರನ್ನು ಮೂಲೆಗುಂಪು ಮಾಡಿ ಅವಹೇಳನಾ ಮಾಡುವ ಕೆಲಸವನ್ನು ಪಠ್ಯಪುಸಕ್ತ ಪರಿಷ್ಕರಣಾ ಸಮಿತಿ ಮಾಡುತ್ತಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಉಗ್ರ ಹೋರಾಟ: ಜೊತೆಗೆ, ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಬದಲಿಗೆ ಕೋಮುವಾದದ ಬೀಜವನ್ನು ಬಿತ್ತನೆ ಮಾಡಿ, ಮನಸ್ಸುಗಳನ್ನು ಕೆಡಿಸಿ, ಕೇಸರಿಕರಣ ಮಾಡಲು ಹೊರಟಿದೆ. ವಿದ್ಯಾರ್ಥಿಗಳಿಗೆ ನೈಜ ಸಂಗತಿಯನ್ನು ಮನವರಿಕೆ ಮಾಡಿಕೊಡಲು ಹೋರಾಟವನ್ನು ಆರಂಭಿಸಿದ್ದೇವೆ. ಪಠ್ಯಪುಸ್ತಕದ ಗೊಂದಲವನ್ನು ನಿವಾರಿಸದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಶಾಂತಿಯುತ ಪ್ರತಿಭಟನೆ ಸಹಿಸುತ್ತಿಲ್ಲ: ನಾವು ಚಡ್ಡಿ ಸುಡಲು ಹೋದರೇ, ಮನೆಗೆ ನುಗ್ಗಿದ್ದೇವೆ ಎಂದು ಅಪವಾದ ಹೂರಿಸುವ ಕೆಲಸವನ್ನು ಮಾಡಿ ದ್ದಾರೆ. ಸಂವಿಧಾನಾತ್ಮಕವಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಿಜೆಪಿ ನೇತೃತ್ವದ ಸರ್ಕಾರ ಸಹಿಸುತ್ತಿಲ್ಲ ಎಂದು ದೂರಿದರು.

ಮಾನವೀಯ ಸಂದೇಶ ನೀಡಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಗತ್‌ಸಿಂಗ್‌, ಮಾನವೀಯ ಸಂದೇಶವನ್ನು ನೀಡಿದರು. ಸಮಾಜವನ್ನು ಸುಧಾರಣೆ ಮಾಡಿದ ಬಸವಣ್ಣ, ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಹೇಳನೆ ಮಾಡುವುದನ್ನು ನಾವು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಜನಜಾಗೃತಿ ಅಭಿಯಾನ: ನಿಜಾಂಶವನ್ನು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸುವ ಕೆಲಸವನ್ನು ಮಾಡುವ ಸಲುವಾಗಿ ಜನಜಾಗೃತಿ ಅಭಿಯಾನ ವನ್ನು ನಡೆಸುತ್ತಿದ್ದೇವೆ. ಜೊತೆಗೆ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ ಸದಾ ಬೆಂಬಲ ವ್ಯಕ್ತಪಡಿಸಿ ಹೋರಾಟ ನಡೆಸುತ್ತದೆ ಎಂದು ವಿವರಿಸಿದರು. ಎನ್‌ಎಸ್‌ಯುಐ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಯ್‌ಕುಮಾರ್‌, ರಾಜ್ಯ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ದಿನೇಯ್‌ ದೀಪಕ್‌, ಜಿಲ್ಲಾಧ್ಯಕ್ಷ ಚಂದ್ರಶೇಖರ್‌, ಉಪಾಧ್ಯಕ್ಷ ಪ್ರಸನ್ನಕುಮಾರ್‌, ಶಿವಾನಂದ, ಪ್ರಧಾನ ಕಾರ್ಯದರ್ಶಿ ಮದನ್‌ ಮೋಹನ್‌, ಮುರಳಿ, ಕಾಂಗ್ರೆಸ್‌ ಸಾಮಾಜಿಕ ಜಾಲಾತಾಣ ಜಿಲ್ಲಾಧ್ಯಕ್ಷ ಶಾಹಿದ್‌ ಅಬ್ಟಾಸ್‌, ಹಮೀಮ್‌, ನರಸಿಂಹಮೂರ್ತಿ, ಸಂತೋಷ, ಸಂಘಟನೆಯ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.