ಬಿಎಸ್‌ವೈ ಮೂಲೆಗುಂಪು ಮಾಡಿದ್ದು: ಜೋಷಿಗೆ ಸಿದ್ದು ಪ್ರಶ್ನೆ


Team Udayavani, Jul 11, 2022, 8:41 PM IST

ಬಿಎಸ್‌ವೈ ಮೂಲೆಗುಂಪು ಮಾಡಿದ್ದು: ಜೋಷಿಗೆ ಸಿದ್ದು ಪ್ರಶ್ನೆ

ಬೆಂಗಳೂರು: ನಾಲ್ಕು ದಶಕಗಳ ಕಾಲ ರಕ್ತ, ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದವರು ಯಾರು? ಪಕ್ಷ ಅಧಿಕಾರದಲ್ಲಿದ್ದಾಗಲೇ ಅವರನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ? ನೀವೂ ಅದರಲ್ಲಿ ಶಾಮೀಲಾಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿದ್ಧರಾಮೋತ್ಸವದಿಂದ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದಿದ್ದ ಜೋಷಿ ಹೇಳಿಕೆ ಪ್ರಸ್ತಾವಿಸಿ ಟ್ವೀಟ್‌ ಮಾಡಿರುವ ಅವರು, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದ ಆಸೆ ತೋರಿಸಿ ಅವರಿಂದಲೇ ಆಪರೇಷನ್‌ ಕಮಲ ಮಾಡಿಸಿದ್ದು ಯಾರು? ಕೈಗೆ ಬಂದದ್ದು ಬಾಯಿಗೆ ಬಾರದೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತಿದಿನ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆಗೈಯ್ದರೂ ಅವಹೇಳನಕಾರಿಯಾಗಿ ಮಾತನಾಡಿದರೂ ಕ್ರಮ ಕೈಗೊಳ್ಳದಂತೆ ತಡೆಯುತ್ತಿದ್ದ ಕೈಗಳು ಯಾರದ್ದು ಪ್ರಹ್ಲಾದ್‌ ಜೋಷಿಯವರೇ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮಗ ವಿಜಯೇಂದ್ರರಿಗೆ ಸಚಿವ ಸ್ಥಾನ ತಪ್ಪಿಸಲು ಪಂಚೆ ಎತ್ತಿಕಟ್ಟಿ ನಿಂತು ಸಂತೋಷ ಪಡುತ್ತಿರುವವರು ಯಾರು, ಹಗರಣದಲ್ಲಿ ಅವರ ಹೆಸರನ್ನು ಸೋರಿಬಿಡುತ್ತಿರುವ ಸಂಚು ಯಾರದ್ದು, ಲಿಂಗಾಯತರನ್ನು ಹಾಗೂ ಲಿಂಗಾಯತ ಮಠದ ಸ್ವಾಮಿಗಳನ್ನು ಓಲೈಸುತ್ತಾ ಪಕ್ಷ ಕಟ್ಟಿ ಈಗ ಪಕ್ಷದಲ್ಲಿರುವ ಒಬ್ಬೊಬ್ಬ ಲಿಂಗಾಯತರನ್ನು ಮೂಲೆಗುಂಪು ಮಾಡುತ್ತಿರುವುದು ಯಾರ ಕಾರಸ್ತಾನ, ಮುಖ್ಯಮಂತ್ರಿ ಸ್ಥಾನದ ಕನಸಿನಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತು ಶಾಸಕರ ಅರವಿಂದ ಬೆಲ್ಲದ ಅವರ ಆಸೆಗೆ ತಣ್ಣೀರೆರಚಿದ್ದು ಯಾರು ಮುಂತಾದ ಪ್ರಶ್ನೆಗಳನ್ನೂ ಕೇಳಿದ್ದಾರೆ.

ಸಾಧನೆಯ ಬಲದಿಂದ ಬಹುಮತ ಗಳಿಸಿ ಅಧಿಕಾರಕ್ಕೆ ಬರುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ನಿಮ್ಮದೇನಿದ್ದರೂ ಆಪರೇಷನ್‌ ಕಮಲದ ಹೊಲಸು ದಂಧೆ ಎಂದು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.