ಸಾಗರ: ಜು. 13 ರಿಂದ ಕೈವಲ್ಯ ಮಠಾಧೀಶರಿಂದ ಚಾತುರ್ಮಾಸ ವ್ರತ


Team Udayavani, Jul 11, 2022, 9:15 PM IST

1-asasasas

ಸಾಗರ: ಕೈವಲ್ಯ ಮಠಾಧೀಶರಾದ ಶಿವಾನಂದ ಸರಸ್ವತಿ ಸ್ವಾಮೀಜಿಯವರು ಸಾಗರದ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಜು. 13 ರಿಂದ ಚಾತುರ್ಮಾಸ ವ್ರತ ಕೈಗೊಳ್ಳಲಿದ್ದಾರೆ ಎಂದು ಸಿರಿವಂತೆ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಸ್.ಜಿ. ಶ್ಯಾನಭಾಗ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾತುರ್ಮಾಸ ಸಂದರ್ಭದಲ್ಲಿ ಗುರುಪೂಜೆ ಮಾಡುವುದು ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಪುಣ್ಯದ ಕೆಲಸ ಎಂದು ಹೇಳಿದರು.

ಪೂಜ್ಯ ಶ್ರೀಗಳು ಎರಡು ತಿಂಗಳ ಕಾಲ ಸಾಗರದಲ್ಲಿಯೇ ಮೊಕ್ಕಾಂ ಹೂಡುವುದರಿಂದ ಗುರುಸೇವೆ ಮತ್ತು ಗುರುದರ್ಶನ ಮಾಡಲು ಅವಕಾಶ ಇರುತ್ತದೆ. ಚಾರ್ತುಮಾಸ ಅಂಗವಾಗಿ ಜು. ೧೩ರಂದು ಸಂಜೆ ೬ಕ್ಕೆ ಸಭಾ ಕಾರ್ಯಕ್ರಮ ಇರುತ್ತದೆ. ಸಭಾ ಕಾರ್ಯಕ್ರಮಕ್ಕೆ ಶಿವಾನಂದ ಸರಸ್ವತಿ ಸ್ವಾಮಿಗಳು ಚಾಲನೆ ನೀಡಲಿದ್ದು, ಮೈಸೂರಿನ ಉದ್ಯಮಿ ಜಗನ್ನಾಥ್ ಶೆಣೈ ಉಪಸ್ಥಿತರಿರುವರು. ಚಾತುರ್ಮಾಸದ ಅಂಗವಾಗಿ ಜು. 18 ರಿಂದ ಜು. 25 ರವರೆಗೆ ಒಂದು ವಾರಗಳ ಕಾಲ 168 ಘಂಟೆಗಳ ಭಜನಾ ಸಪ್ತಾಹ ಏರ್ಪಡಿಸಲಾಗಿದೆ. ಮುಂಬೈ, ಬೆಂಗಳೂರು, ಮಂಗಳೂರು ಸೇರಿದಂತೆ ಒಟ್ಟು 68 ತಂಡಗಳು ರಾಜ್ಯ ಮತ್ತು ಹೊರರಾಜ್ಯದ ಭಜನಾ ತಂಡಗಳು ಪಾಲ್ಗೊಳ್ಳಲಿದೆ ಎಂದರು.

ಚಾತುರ್ಮಾಸ ಯಶಸ್ಸಿಗಾಗಿ ಸಮಾಜದ ಪ್ರಮುಖರನ್ನು ಒಳಗೊಂಡ 12 ಸಮಿತಿಗಳನ್ನು ರಚಿಸಲಾಗಿದೆ. ಪ್ರತಿದಿನ ರಾತ್ರಿ 9 ರಿಂದ 11 ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ. 11 ರಂದು ಗಣೇಶೋತ್ಸವವನ್ನು ವಿಶೇಷವಾಗಿ ಶ್ರೀಗಳ ಸಮ್ಮುಖದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಸೆ. 17 ಕ್ಕೆ ಶ್ರೀಗಳ ಸಮಾಜ ಬಾಂಧವರ ಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ ಏರ್ಪಡಿಸಲಾಗಿದೆ. ಪ್ರತಿದಿನ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಇರುತ್ತದೆ. ಪ್ರತಿದಿನ ಉಪಹಾರ ಮತ್ತು ಊಟದ ವ್ಯವಸ್ಥೆ ಇರುತ್ತದೆ ಎಂದರು.

ಸಮಾಜದ ಉಪಾಧ್ಯಕ್ಷ ಸುನೀಲ್ ಗಾಯ್‌ತೊಂಡೆ ಮಾತನಾಡಿ, ಲೋಕಕಲ್ಯಾಣಾರ್ಥವಾಗಿ ಶ್ರೀಗಳು ಚಾತುರ್ಮಾಸ ವೃತ ಕೈಗೊಳ್ಳಲಿದ್ದಾರೆ. ಗಣೇಶ ಹಬ್ಬದ ಸಂದರ್ಭದಲ್ಲಿ ಇರಿಸಿದ 25 ಕ್ವಿಂಟಾಲ್‌ಗೂ ಅಧಿಕ ಭಾರದ ಗಣೇಶ ಮೂರ್ತಿಯನ್ನು ದೇವಸ್ಥಾನದಿಂದ ಗಣಪತಿ ಕೆರೆಯವರೆಗೆ ಹೊತ್ತುಕೊಂಡು ಹೋಗಿ ವಿಸರ್ಜನೆ ಮಾಡುವ ಕಾರ್ಯಕ್ರಮವಿದೆ. ಆರ್‌ಎಂಸಿ ರಸ್ತೆಯಲ್ಲಿ ಎಸ್‌ಬಿಎಸ್ ಕುಟುಂಬದವರು ಕೈವಲ್ಯಮಠಕ್ಕೆ ನೀಡಿರುವ ತಿರುಮಲ ವೆಂಕಟೇಶ್ವರ ದೇವಸ್ಥಾನವನ್ನು ಸುಮಾರು 3.50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದ್ದು, ಆ. 10 ರಂದು ಶ್ರೀಗಳು ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಸಮಾಜದ ಪ್ರಮುಖರಾದ ಶಿವಾನಂದ ಯು. ಭಂಡಾರ್‌ಕರ್, ಗೋವಿಂದರಾಯ ಪ್ರಭು, ವೀಣಾ ಪ್ರಭು, ದಾಮೋದರ ನಾಯ್ಕ್, ಪ್ರಸಾದ್ ಪೈ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.