ಉತ್ತಮ ಆಡಳಿತ ಕುರಿತ ಪ್ರಾದೇಶಿಕ ಸಮ್ಮೇಳನಕ್ಕೆ ಚಾಲನೆ: ಇಂದು ಸಿಎಂ, ಜಿತೇಂದ್ರ ಸಿಂಗ್ ಭಾಗಿ
Team Udayavani, Jul 12, 2022, 5:45 AM IST
ಬೆಂಗಳೂರು: “ಉತ್ತಮ ಆಡಳಿತಕ್ಕಾಗಿ ನಾಗರಿಕರು, ಉದ್ಯಮಿಗಳು ಮತ್ತು ಸರ್ಕಾರದ ನಡುವಿನ ಸಮನ್ವಯತೆ’ಗಾಗಿ ಪ್ರಾದೇಶಿಕ ಸಮ್ಮೇಳನಕ್ಕೆ ಸೋಮವಾರ ಚಾಲನೆ ದೊರೆಯಿತು.
ಎರಡು ದಿನಗಳ ಈ ಅಪರೂಪದ ಸಮ್ಮೇಳನದಲ್ಲಿ ಆಡಳಿತ ಸುಧಾರಣೆ, ತಂತ್ರಜ್ಞಾನ ಅಳವಡಿಕೆಗೆ ಸಂಬಂಧಿಸಿದಂತೆ ಮೊದಲ ದಿನ ಹಲವು ಗೋಷ್ಠಿಗಳು ನಡೆದವು. ಈ ವೇಳೆ “ಕರ್ನಾಟಕದಲ್ಲಿ ಆಡಳಿತಾತ್ಮಕ ಸುಧಾರಣೆಗಳು’ ಕುರಿತು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯ ಭಾಸ್ಕರ್, “ವಿಜನ್ ಇಂಡಿಯಾ 2047- ಆಡಳಿತ’ದ ಬಗ್ಗೆ ಐಐಪಿಎ ಮಹಾನಿರ್ದೇಶಕ ಎಸ್.ಎನ್. ತ್ರಿಪಾಠಿ, “ಸಚಿವಾಲಯ ಸುಧಾರಣೆಗಳು, ಸ್ವಚ್ಛತಾ ಅಭಿಯಾನ, ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಮತ್ತು ಸೇವಾ ವಿತರಣೆಯಲ್ಲಿ ಸುಧಾರಣೆ’ ಕುರಿತು ಡಿಎಆರ್‌ಪಿಜಿ ಕಾರ್ಯದರ್ಶಿ ವಿ. ಶ್ರೀನಿವಾಸ್ ಮಾತನಾಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆ ವಹಿಸಿದ್ದರು.
ಇಂದು ಸಿಎಂ ಭಾಗಿ
ಸಮ್ಮೇಳನ ಪೂರ್ವ ಸಮಾರಂಭದಲ್ಲಿ ಮಾತನಾಡಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಪ್ರಧಾನ ಕಾರ್ಯದರ್ಶಿ ಡಾ.ಶ್ರೀವತ್ಸ ಕೃಷ್ಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ ಭಾಷಣ ಮಾಡಲಿದ್ದು, ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಉತ್ತಮ ಆಡಳಿತದ ಬಗ್ಗೆ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಕೇಂದ್ರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ, ಸಿಬ್ಬಂದಿ ಸಚಿವಾಲಯ (ಡಿಎಆರ್‌ಪಿಜಿ), ಸಾರ್ವಜನಿಕ ಕುಂದುಕೊರತೆಗಳು ಹಾಗೂ ಪಿಂಚಣಿ ಇಲಾಖೆ ಸಹಯೋಗದಲ್ಲಿ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಹೋಟೆಲ್ ಶಾಂಗ್ರಿ ಲಾದಲ್ಲಿ ಜುಲೈ 11 ಮತ್ತು 12ರಂದು ಪ್ರಾಂತೀಯ ಪ್ರಾದೇಶಿಕ ಸಮ್ಮೇಳನ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದ ಡಿಎಆರ್‌ಪಿಜಿ ಹೆಚ್ಚುವರಿ ಕಾರ್ಯದರ್ಶಿ ಅಮರನಾಥ್, ನಾಗರಿಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಸುಧಾರಿತ ತಂತ್ರಜ್ಞಾನ ಅಳವಡಿಸಲು ಪ್ರಯತ್ನಿಸುತ್ತಿದ್ದೇವೆ. ನಾಗರಿಕರಿಗೆ ಸಮಗ್ರ ಸೇವೆ ಒದಗಿಸುವುದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಸಮ್ಮೇಳನ ಆಯೋಜಿಸಲಾಗಿದೆ.
ಕೇಂದ್ರ ಮತ್ತು ರಾಜ್ಯಗಳೆರಡರಲ್ಲೂ ಉತ್ತಮ ಆಡಳಿತಕ್ಕಾಗಿ ಹೊಸ ಆಲೋಚನೆಗಳನ್ನು ಹುಟ್ಟುಹಾಕುವ ಈ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳ ಸಮಾನ ಮನಸ್ಕರು ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.