ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ವೈದ್ಯನ ಬಂಧನ
Team Udayavani, Jul 12, 2022, 1:55 AM IST
ವಿಟ್ಲ: ಮಾಣಿ ನಿವಾಸಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿರುವ ವೈದ್ಯ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಾನೆ.
ಬಾಲಕಿಯ ತಾಯಿ ಜು. 10ರಂದು ಠಾಣೆಗೆ ಹಾಜರಾಗಿ ದೂರು ನೀಡಿ, ಮಾಣಿಯ ಡಾ| ಅನುಷ್ ನಾಯ್ಕ (35) ತನ್ನ ಪುತ್ರಿಯನ್ನು ಮಾ. 6ರಂದು ಮನೆ ಕಡೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತ ಕಳೆದ ಮೇ ತಿಂಗಳಿನಲ್ಲಿ ಮದುವೆಯಾಗಿದ್ದು, ನನ್ನ ಪುತ್ರಿಯನ್ನು ಮೊಬೈಲ್ ಮೂಲಕ ಸಂಪರ್ಕಿಸಿ, ನಿನ್ನನ್ನು ಹಾಗೂ ನಿನ್ನ ತಂದೆ-ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಿದ್ದು, ವಿಟ್ಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಡಾ| ಅನುಷ್ ನಾಯ್ಕನನ್ನು ಜು. 11ರಂದು ಮಾಣಿಯಲ್ಲಿ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.