ಭತ್ತದ ಬೆಳೆ ಹಾನಿಗೆ ಶೀಘ್ರ ಪರಿಹಾರ ಒದಗಿಸಿ: ಸಚಿವೆ ಶೋಭಾ ಕರಂದ್ಲಾಜೆ
Team Udayavani, Jul 12, 2022, 7:15 AM IST
ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಬಿತ್ತನೆ ಮಾಡಿರುವ ಭತ್ತ ಹಾನಿಗೀಡಾಗಿದ್ದು, ರೈತರಿಗೆ ಹಾನಿಯ ಮೊತ್ತವನ್ನು ಶೀಘ್ರದಲ್ಲಿಯೇ ಒದಗಿಸಬೇಕು. ಅವರು ಮತ್ತೊಮ್ಮೆ ಬಿತ್ತನೆ ಮಾಡಲು ಅಗತ್ಯಕ್ಕೆ ಅನುಗುಣವಾಗಿ ಬೀಜವನ್ನು ಸಮರ್ಪಕವಾಗಿ ವಿತರಣೆ ಮಾಡಲು ಮುಂದಾಗಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಕೃಷಿ (ರಾಜ್ಯ ಖಾತೆ) ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ರಜತಾದ್ರಿಯಲ್ಲಿ ನಡೆದ, ಜಿಲ್ಲೆಯ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಶ್ವತ ಪರಿಹಾರಕ್ಕೆ ಸೂಚನೆ
ಮಳೆಯಿಂದ ಕಡಲ್ಕೊರೆತ ಉಂಟಾಗಿ ಸಮುದ್ರ ತೀರದಲ್ಲಿರುವ ಮೀನುಗಾರರಲ್ಲಿ ಆತಂಕ ಉಂಟಾಗಿದೆ. ಕಡಲ್ಕೊರೆತ ಉಂಟಾಗದಂತೆ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಪ್ರಸ್ತುತ ಎನ್‌ಡಿಆರ್‌ಎಫ್ ನಿಯಮಾವಳಿಯಲ್ಲಿ ಕಡಲ್ಕೊರೆತ ಕಾಮಗಾರಿಗಳಿಗೆ ಅವಕಾಶವಿರುವುದಿಲ್ಲ. ಇದನ್ನು ಈ ವ್ಯಾಪ್ತಿಗೆ ತರಲು ಕೇಂದ್ರಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿ, ಮಾಹಿತಿ ನೀಡಿದಲ್ಲಿ ಈ ಬಗ್ಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಚರ್ಚಿಸಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಅತಿಯಾದ ಮಳೆಯಿಂದ ರಸ್ತೆ, ಶಾಲೆ, ಅಂಗನವಾಡಿ, ಸರಕಾರಿ ಕಟ್ಟಡಗಳು, ಸೇತುವೆಗಳು ಮೊದಲಾದ ಶಾಶ್ವತ ಕಾಮಗಾರಿಗಳಿಗೆ ಹಾನಿ ಉಂಟಾಗಿದ್ದು, ಇದರ ಹಾನಿಯ ಮೊತ್ತವನ್ನು ನಿಖರವಾಗಿ ಗುರುತಿಸಿ ಸರಕಾರಕ್ಕೆ ವರದಿ ನೀಡಬೇಕು. ಗ್ರಾಮೀಣ ಭಾಗದ ರಸ್ತೆಗಳನ್ನು ಜಿ.ಪಂ. ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಿದಲ್ಲಿ ಶೀಘ್ರದಲ್ಲಿ ದುರಸ್ತಿಗೆ ಅನುಕೂಲವಾಗಲಿದೆ ಎಂದರು.
ಸೂಕ್ತ ನಿರ್ವಹಣೆಗೆ ನಿರ್ದೇಶನ
ಗ್ರಾಮೀಣ ಭಾಗದಲ್ಲಿ ಮೊಬೈಲ್ ಸಿಗ್ನಲ್‌ಗಳು ಸಿಗುತ್ತಿಲ್ಲ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಟವರ್‌ಗಳಿಗೆ ವಿದ್ಯುತ್ಛಕ್ತಿ ಸರಬರಾಜಿನ ಕೊರತೆಯಿಂದಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಮುಂದಾಗಬೇಕು. ರಾಷ್ಟ್ರೀಯ ಹೆದ್ದಾರಿಯ ಬಾಕಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಜಿಲ್ಲಾಡಳಿತದಿಂದ ಗುರುತಿಸಲಾಗಿರುವ ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೊಂಡು ವಾಹನಗಳು ಸುರಕ್ಷಿತವಾಗಿ ಚಾಲನೆ ಆಗುವಂತೆ ನೋಡಿಕೊಳ್ಳಬೇಕು. ಕಾಲ ಕಾಲಕ್ಕೆ ರಸ್ತೆ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.
ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ.ಸಿಇಒ ಪ್ರಸನ್ನ ಎಚ್., ಎಸ್ಪಿ ವಿಷ್ಣುವರ್ಧನ, ಎಡಿಸಿ ವೀಣಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
1,300 ಹೆಕ್ಟೇರ್ ಬೆಳೆ ಹಾನಿ
ಜಿಲ್ಲೆಯಲ್ಲಿ ಜೂನ್‌ನಲ್ಲಿ ವಾಡಿಕೆಗಿಂತ ಶೇ. 31ರಷ್ಟು ಕಡಿಮೆ ಮಳೆಯಾಗಿ ಜುಲೈ 1ರಿಂದ ಈವರೆಗೆ ವಾಡಿಕೆ ಮಳೆಗಿಂತ ಶೇ. 136ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ ತಿಂಗಳಲ್ಲಿ ಕುಂಠಿತ ಮಳೆಯಿಂದ ಬಿತ್ತನೆ ಕಾರ್ಯಗಳು ನಿಗದಿತ ಪ್ರಮಾಣದಲ್ಲಿ ಆಗದೇ ಜೂನ್ ಕೊನೆಯ ವಾರದಲ್ಲಿ ಹಾಗೂ ಜುಲೈ ಮೊದಲ ವಾರದಲ್ಲಿ ಬಿತ್ತನೆ ಕಾರ್ಯಗಳು ಚುರುಕುಗೊಂಡಿದ್ದವು. ಇದುವರೆಗೆ 13,526 ಹೆಕ್ಟೇರ್ ಬಿತ್ತನೆ ಆಗಿದ್ದು, ಕಳೆದ 4-5 ದಿನಗಳಿಂದ ಸುರಿದ ಹೆಚ್ಚಿನ ಮಳೆಯಿಂದ ಅಂದಾಜು 1,300 ಹೆಕ್ಟೇರ್‌ಗೂ ಅಧಿಕ ಬೆಳೆಹಾನಿ ಉಂಟಾಗಿದೆ ಎಂದರು.
ಮಳೆಯ ಪ್ರಮಾಣ ತಗ್ಗಿದ ಅನಂತರ ಬೆಳೆಹಾನಿಯನ್ನು ನಿಖರವಾಗಿ ಗುರುತಿಸಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಒದಗಿಸುವುದರ ಜತೆಗೆ ಸ್ಥಳೀಯವಾಗಿ ಬೇಡಿಕೆಯಿರುವ ಎಂಒ4 ಬಿತ್ತನೆ ಬೀಜವನ್ನು ರೈತರಿಗೆ ಸಹಾಯಧನದ ಅಡಿಯಲ್ಲಿ ವಿತರಣೆ ಮಾಡಬೇಕು ಎಂದು ನಿರ್ದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.