ಪಾಲಿಕೆ ತೆಕ್ಕೆಗೆ ಅಂಬೇಡ್ಕರ್‌ ಭವನ: ಬಾಡಿಗೆ ದರ ನಿಗದಿಗೆ ನಿರ್ಧಾರ


Team Udayavani, Jul 12, 2022, 10:21 AM IST

3

ಮಹಾನಗರ: ಕಳೆದ ವರ್ಷ ಉದ್ಘಾಟನೆಗೊಂಡ ಅಂಬೇಡ್ಕರ್‌ ಭವನ ನಿರ್ವಹಣೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಸದ್ಯ ಭವನಕ್ಕೆ ಬಾಡಿಗೆ ದರ ನಿಗದಿಪಡಿಸಿ ಕಾರ್ಯಕ್ರಮಗಳಿಗೆ ವಿನಿಯೋಗಿಸಲು ಮನಪಾ ನಿರ್ಧರಿಸಲಾಗಿದೆ.

ಉರ್ವಸ್ಟೋರ್‌ ಬಳಿಯ ಅಂಗಡಿಗುಡ್ಡೆಯಲ್ಲಿ 3166.58 ಚ.ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್‌ ಭವನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಉದ್ಘಾಟಿಸಿದ್ದರು. ಬಳಿಕ ಕೆಲವು ತಿಂಗಳವರೆಗೆ ಯಾವುದೇ ಕಾರ್ಯಕ್ರಮಕ್ಕೆ ವಿನಿಯೋಗವಾಗಿರಲಿಲ್ಲ. ಭವನಕ್ಕೆ ಸುಮಾರು 40 ಸಾವಿರ ರೂ.ನಷ್ಟು ವಿದ್ಯುತ್‌ ಬಿಲ್‌ ಬರುತ್ತಿದ್ದು, ಕಾರ್ಯಕ್ರಮಗಳಿಗೆ ವಿನಿಯೋಗಿಸಿದರೆ 1 ಲಕ್ಷ ರೂ. ಮೀರುತ್ತದೆ. ಹೀಗಿದ್ದಾಗ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಷ್ಟೊಂದು ಆದಾಯವಿಲ್ಲ. ಇದೇ ಕಾರಣಕ್ಕೆ ಮಹಾನಗರ ಪಾಲಿಕೆ ಹಸ್ತಾಂತರಿಸಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿತ್ತು. ಆ ಪ್ರಕ್ರಿಯೆ ಸದ್ಯ ಪೂರ್ಣಗೊಂಡಿದೆ.

ನಿಗದಿಪಡಿಸಿದ ದರವೆಷ್ಟು?

ಉಚಿತ ಯಕ್ಷಗಾನ, ಉಚಿತ ನಾಟಕ, ತಾಳಮದ್ದಳೆ, ಉಚಿತ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥೆ, ಸಮ್ಮಾನ ಸಭೆ, ಭರತನಾಟ್ಯ, ಜಾದೂ, ಸರಕಾರಿ ಕಾರ್ಯಕ್ರಮಗಳಿಗೆ ಸೆಷನ್‌-1-ಸೆಷನ್‌ 2ಕ್ಕೆ 5,000 ರೂ.ಸೆಷನ್‌-3ಕ್ಕೆ 5,000 ರೂ. ತಲಾ 5000 ರೂ. ಠೇವಣಿ ಇರಲಿದೆ. ಟಿಕೆಟ್‌ ಯಕ್ಷಗಾನಕ್ಕೆ ಸೆಷನ್‌-1 ಮತ್ತು 2ಕ್ಕೆ ಬಾಡಿಗೆ 10,000 ರೂ., ಸೆಷನ್‌ 3ಕ್ಕೆ 10,000 ರೂ. ಬಾಡಿಗೆ, ತಲಾ 50000 ರೂ. ಠೇವಣಿ ಇರಲಿದೆ. ಟಿಕೆಟ್‌ ನಾಟಕ ಮತ್ತು ಜಾದೂವಿಗೆ ಸೆಷನ್‌-1-ಸೆಷನ್‌ 2ಕ್ಕೆ 10,000 ರೂ.ಸೆಷನ್‌-3ಕ್ಕೆ 10,000 ರೂ. ತಲಾ 5000 ರೂ. ಠೇವಣಿ ಇರಲಿದೆ. ಎಲ್ಲ ರಸಮಂಜರಿ ಕಾರ್ಯಕ್ರಮಗಳಿಗೆ ಸೆಷನ್‌ -1-ಸೆಷನ್‌ 2ಕ್ಕೆ 10,000 ರೂ.ಸೆಷನ್‌-3ಕ್ಕೆ 10,000 ರೂ. ತಲಾ 5,000 ರೂ. ಠೇವಣಿ ಇರಲಿದೆ. ಖಾಸಗಿ ಕಾರ್ಯಕ್ರಮಕ್ಕೆ ಸೆಷನ್‌ -1-ಸೆಷನ್‌ 2ಕ್ಕೆ 15,000 ರೂ. 10,000 ರೂ. ಠೇವಣಿ ಇರಲಿದೆ. ಇದರೊಂದಿಗೆ ತಲಾ ಶೇ.18ರಷ್ಟು ಜಿಎಸ್‌ಟಿ ಇರುತ್ತದೆ ಎನ್ನುತ್ತಾರೆ ಅಧಿಕಾರಿಗಳು.

 ದರ ನಿಗದಿ: ಕಳೆದ ವರ್ಷ ಉದ್ಘಾಟನೆಗೊಂಡ ಅಂಬೇಡ್ಕರ್‌ ಭವನವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಮಹಾನಗರ ಪಾಲಿಕೆಗೆ ಹಸ್ತಾಂತರ ಪ್ರಕ್ರಿಯೆ ನಡೆದಿದೆ. ಇದೀಗ ಭವನಕ್ಕೆ ಬಾಡಿಗೆ ದರ ನಿಗದಿಪಡಿಸಲಾಗಿದೆ. ಮನಪಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾರ್ಯಕ್ರಮಗಳಿಗೆ ಶೇ.50ರಷ್ಟು ರಿಯಾಯಿತಿ ನೀಡಿ ಉಳಿದ ವರ್ಗದ ಸಾರ್ವಜನಿಕರಿಗೆ ದರ ನಿಗದಿ ಮಾಡಲಾಗಿದೆ. –ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.