ಟೂಲ್ ಕಿಟ್ ಟೆಂಡರ್ ನಲ್ಲಿ ಅಕ್ರಮ ಆರೋಪ: ದಾಖಲೆ ಬಿಡುಗಡೆ ಮಾಡಿದ ಇಲಾಖೆ
Team Udayavani, Jul 12, 2022, 4:45 PM IST
ಬೆಂಗಳೂರು : ಕೈಗಾರಿಕಾ ತರಬೇತಿ ಕೇಂದ್ರಗಳಿಗೆ ಟೂಲ್ಸ್ ಕಿಟ್ ಟೆಂಡರ್ ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಈಗ ಇಲಾಖೆ ದಾಖಲೆ ಬಿಡುಗಡೆಗೊಳಿಸಿದ್ದು, ಸುಮಾರು ಆರು ಕೋಟಿಯಷ್ಟು ಉಳಿತಾಯವಾಗಿದೆ ಎಂದು ಪ್ರತಿಪಾದಿಸಿದೆ.
ಟೆಂಡರ್ ನಲ್ಲಿ ಗೋಲ್ ಮಾಲ್ ಆಗಿದೆ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆರೋಪ ಮಾಡಿತ್ತು. ಆದರೆ ಇದಕ್ಕೆ ದಾಖಲೆ ಸಮೇತ ಸ್ಪಷ್ಟನೆ ನೀಡಿರುವ ಇಲಾಖೆ, ಆರೋಪ ಸಾರ್ವಜನಿಕರನ್ನು ತಪ್ಪುದಾರಿಗೆ ಹಿಡಿಯುವಂತಿದೆ. ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದೆ.
ಸೆಪ್ಟಂಬರ್ 21, 2021ರಂದು ಹದಿಮೂರು ಸಾವಿರ ವಿಸ್ಯಾರ್ಥಿಗಳಿಗೆ ಟೂಲ್ಸ್ ಪೂರೈಕೆಗೆ ಟೆಂಡರ್ ಕರೆಯಲಾಗಿತ್ತು. ಆದರೆ ಎಲ್ 1 ಆಗಿ ಪರಿಗಣಿಸಲ್ಪಟ್ಟವರು 22 ಕೋಟಿ ರೂ. ಕೋಟ್ ಮಾಡಿದ್ದರು. ಇದು ಇಲಾಖೆ ನಿಗದಿ ಮಾಡಿದ ಬಜೆಟ್ ಗಿಂತ ಹೆಚ್ಚಾಗಿತ್ತು. ಹೀಗಾಗಿ ಟೆಂಡರ್ ರದ್ದು ಮಾಡಿ ಡಿಸೆಂಬರ್ ತಿಂಗಳಲ್ಲಿ ಮತ್ತೆ ಟೆಂಡರ್ ಕರೆಯಲಾಗಿತ್ತು. ಬಳಿಕ 15.99 ಕೋಟಿಗೆ ಬಿಡ್ ಮಾಡಿದವರಿಗೆ ಟೆಂಡರ್ ಅಂತಿಮಗೊಳಿಸಲಾಗಿತ್ತು. ಇದರಿಂದ ಇಲಾಖೆಗೆ ಸುಮಾರು 6 ಕೋಟಿ ರೂ. ಉಳಿತಾಯವಾಗಿದೆ. ಹೀಗಾಗಿ ಭ್ರಷ್ಟಾಚಾರದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.