ರಾಜಕೀಯ ಶಕ್ತಿ ಬಳಸಿ ನ್ಯಾಯಬದ್ಧ ಹಕ್ಕಿಗಾಗಿ ಹೋರಾಡಿ
ಮೀಸಲಾತಿಯನ್ನು ಶೇ. 4ರಿಂದ 8ಕ್ಕೆ ಏರಿಸಬೇಕು ಎಂಬುದು ಮುಖ್ಯ ಬೇಡಿಕೆಯಾಗಿದೆ.
Team Udayavani, Jul 12, 2022, 4:43 PM IST
ಹಿರಿಯೂರು: ಸ್ವಾತಂತ್ರ್ಯಾ ನಂತರ ಬಲಾಡ್ಯರು ಬೆಳೆದಿದ್ದಾರೆ, ದುರ್ಬಲರು ತುಳಿತಕ್ಕೆ ಒಳಗಾಗಿದ್ದು, ನ್ಯಾಯಯುತ ಹಕ್ಕುಗಳಿಂದ ಹಿಂದುಳಿದವರು ವಂಚಿತರಾಗುತ್ತಿದ್ದಾರೆ. ಸಂವಿಧಾನದಲ್ಲಿ ಹೇಳಿರುವಂತೆ ಎಲ್ಲರಿಗೂ ಸಮಬಾಳು, ಸಮಪಾಲು ಸಿಗುತ್ತಿಲ್ಲ. ದುರ್ಬಲ ವರ್ಗಗಳ ಮೇಲಿನ ಶೋಷಣೆ ಇನ್ನೂ ನಿಂತಿಲ್ಲ ಎಂದು ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ವಿಷಾದಿಸಿದರು.
ತಾಲೂಕಿನ ವಾಣಿವಿಲಾಸ ಅಣೆಕಟ್ಟೆ ಮೇಲ್ಭಾಗದ ಪ್ರವಾಸಿಮಂದಿರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರವರ್ಗ-1ಒಕ್ಕೂಟದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪದಾ ಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಶ್ರೀಗಳು ಮಾತನಾಡಿದರು. ರಾಜಕೀಯ ಶಕ್ತಿ ಬಳಸಿಕೊಂಡು ನ್ಯಾಯಯುತ ಹಕ್ಕು ಪಡೆಯಬೇಕು ಎಮದು ಕರೆ ನೀಡಿದರು.
ಒಕ್ಕೂಟದ ರಾಜ್ಯ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್ ಮಾತನಾಡಿ, ನಮ್ಮ ಒಕ್ಕೂಟ ಅಲೆಮಾರಿ, ಅರೆ ಅಲೆಮಾರಿ ಜಾತಿಗಳನ್ನು ಒಳಗೊಂಡಂತೆ 95 ಜಾತಿ ಮತ್ತು 376 ಉಪಜಾತಿಗಳ ಸಂಘಟನೆಯಾಗಿದೆ. ಈ ವರ್ಗಕ್ಕೆ ಪ್ರಸ್ತುತ ಇರುವ ಮೀಸಲಾತಿಯನ್ನು ಶೇ. 4ರಿಂದ 8ಕ್ಕೆ ಏರಿಸಬೇಕು ಎಂಬುದು ಮುಖ್ಯ ಬೇಡಿಕೆಯಾಗಿದೆ. ಕಳೆದುಕೊಂಡಿರುವುದನ್ನು ಮರಳಿ ಪಡೆಯಲು ಪಕ್ಷಾತೀತವಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ್ ಮಾತನಾಡಿ, ಎಸ್ ಸಿ-ಎಸ್‌ಟಿ ಸಮುದಾಯಗಳಿಗೆ ಸಿಗುತ್ತಿರುವ ಎಲ್ಲಾ ಸೌಲಭ್ಯಗಳು ಪ್ರವರ್ಗ-1ಕ್ಕೂ ಸಿಗಬೇಕು, ವಿಧಾನಸಭೆ ಮತ್ತು ಸಂಸತ್ತಿನಲ್ಲಿ ರಾಜಕೀಯ ಮೀಸಲಾತಿ ನೀಡಬೇಕು.ನಿಗಮ, ಮಂಡಳಿಗಳಿಗೆ ಬಿಡುಗಡೆಯಾಗುವ ಅನುದಾನ, ಆ ಸಮುದಾಯದ ಅಭಿವೃದ್ಧಿಗೆ ವಿನಿಯೋಗವಾಗಬೇಕು ಎಂದು ಒತ್ತಾಯಿಸಿದರು.ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಶಾಸಕ ಲಾಲಾಜಿ ಮೆಂಡನ್ ಮಾತನಾಡಿದರು.
ಚಿತ್ರದುರ್ಗದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ಕರುಣಾಕರ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಕೆ.ಎನ್.ಲಿಂಗಪ್ಪ ಹಿಂದುಳಿದವರಿಗೆ ಮೀಸಲಾತಿಯಲ್ಲಿ
ಆಗಿರುವ ಅನ್ಯಾಯ ವಿಷಯದ ಕುರಿತು ಉಪನ್ಯಾಸ ನೀಡಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸಾಬಣ್ಣ ತಳವಾರ್, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್, ಡಾ| ಹೊನ್ನಪ್ಪ ಬಂಡಿ, ಡಾ| ಪೂರ್ಣಿಮಾ ಜೋಗಿ, ಲೋಕೇಶಪ್ಪ, ಯಾದವ ಸಂಘದ ಹಿರಿಯ ಉಪಾಧ್ಯಕ್ಷ ಸಿದ್ದಪ್ಪ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.