ಜಿಟಿಜಿಟಿ ಮಳೆಗೆ ರಸ್ತೆ ಕೆಸರುಮಯ
Team Udayavani, Jul 12, 2022, 5:29 PM IST
ಜೇವರ್ಗಿ: ತಾಲೂಕಿನ ಬಿರಾಳ ಬಿ. ಗ್ರಾಮದಿಂದ ಹೊನ್ನಾಳ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆ ಜಿಟಿಜಿಟಿ ಮಳೆಗೆ ಕೆಸರು ರಾಡಿಯಂತ್ತಾಗಿದ್ದು, ಸಂಚಾರಕ್ಕೆ ಗ್ರಾಮಸ್ಥರು ಪರದಾಡುವಂತಾಗಿದೆ. ಗ್ರಾಪಂ ಕೇಂದ್ರವಾಗಿರುವ ಬಿರಾಳ ಬಿ. ಗ್ರಾಮದಲ್ಲಿ 4 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ.
ಗ್ರಾಮದಿಂದ ಹೊನ್ನಾಳ, ಹೋತಿನಮಡು, ರಾಂಪೂರ ಹಾಗೂ ಶಹಾಪೂರ ತಾಲೂಕಿನ ಅಣಬಿ, ಹೊಸೂರ, ಯಾದಗಿರಿ ಜಿಲ್ಲೆಗೆ ತೆರಳುವ ಮುಖ್ಯ ರಸ್ತೆಯಾಗಿದೆ. ನಿತ್ಯ ಹತ್ತಾರು ವಾಹನಗಳು ಈ ರಸ್ತೆ ಮೂಲಕ ಸಂಚಾರ ಮಾಡುತ್ತವೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ರಸ್ತೆ ಕೆಸರು ಗದ್ದೆಯಾಗಿ ಸಂಚಾರಕ್ಕೆ ಸಂಚಕಾರ ತಂದಿದೆ. ಕನಕದಾಸ ಚೌಕ್‌ದಿಂದ ಅಂಬೇಡ್ಕರ್ ನಗರಕ್ಕೆ ತೆರಳುವ ಈ ರಸ್ತೆ ತುಂಬಾ ಹದಗೆಟ್ಟು ಹೋಗಿರುವುದರಿಂದ ಈ ಎರಡು ಬಡಾವಣೆಯ ಜನ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.
ಮಹಿಳೆಯರು, ಮಕ್ಕಳು, ವೃದ್ದರು ಕೆಸರು ರಸ್ತೆಯಿಂದ ಮನೆಬಿಟ್ಟು ಹೊರಬರದಂತಾಗಿದೆ. ಬಸ್ ಹೊರತುಪಡಿಸಿ ಬೇರೆ ವಾಹನಗಳು ಈ ರಸ್ತೆ ಮೇಲೆ ಓಡಾಡುವಂತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಗಳಿಗೆ, ಅಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಈ ರಸ್ತೆ ನಿರ್ಮಾಣಕ್ಕೆ ಮುಂದಾಗದೇ ಹೋದರೇ ಗ್ರಾಮಸ್ಥರೊಂದಿಗೆ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮದ ನಿವಾಸಿ ಹಣಮಂತ ಕುಳಗೇರಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.